ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕ್ ಆಯ್ತು ಚೀನಾದ ಉಗ್ರ ಸಂಘಟನೆ ವಿರುದ್ಧ ಸೇನಾ ಜಂಟಿ ಕಾರ್ಯಚರಣೆ

|
Google Oneindia Kannada News

ನವದೆಹಲಿ, ಮಾರ್ಚ್ 16: ಪಾಕಿಸ್ತಾನದ ಬಾಲಕೋಟ್‌ನಲ್ಲಿ ಜೈಷ್ ಅಡಗುತಾಣಗಳ ಮೇಲೆ ಭಾರತೀಯ ವಾಯು ಸೇನೆ ದಾಳಿ ನಡೆಸಿದ ಬಳಿಕ ಇದೀಗ ಚೀನಾದ ಉಗ್ರ ಸಂಘಟನೆ ವಿರುದ್ಧ ಕಾರ್ಯಾಚರಣೆ ನಡೆಸಿದೆ.

ಮಯನ್ಮಾರ್ ಗಡಿಯಲ್ಲಿ ಭಾರತ ನಿರ್ಮಿಸುತ್ತಿರುವ ಬಹು ಉದ್ದೇಶಿತ ಕಲಾಡನ್ ಯೋಜನೆಗೆ ಅಡ್ಡಿ ಪಡಿಸಲೆಂದೇ ಈ ಕೆಐಎ ಉಗ್ರ ಸಂಘಟನೆ ಅರಾಕನ್ ಆರ್ಮಿಗೆ ಬೆಂಬಲವಾಗಿ ನಿಂತಿತ್ತು ಎನ್ನಲಾಗಿದೆ.

ಸೇನೆಯ ಮೂಲ ಟಾರ್ಗೆಟ್ ಅರಾಕನ್ ಆರ್ಮಿ್ಯಾಗಿದ್ದು, ಈ ಉಗ್ರ ಸಂಘಟನೆಗೆ ಚೀನಾ ಮೂಲದ ಕಚಿನ್ ಇಂಡಿಪೆಂಡೆಂಟ್ ಆರ್ಮಿ (ಕೆಐಎ) ನೇರ ಬೆಂಬಲ ನೀಡಿತ್ತು. ಈ ಕೆಐಎ ಉಗ್ರ ಸಂಘಟನೆಗೆ ಚೀನಾ ಸೇನೆಯ ಬೆಂಬಲ ಕೂಡ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

Indian army carried out mega strikes along Myanmar border

ಈ ಬೃಹತ್ ಕಾರ್ಯಾಚರಣೆಗಾಗಿ ಭಾರತೀಯ ಸೇನೆ ತನ್ನ ಬೃಹತ್ ಸೇನಾ ತುಕಡಿಗಳನ್ನು, ವಿಶೇಷ ದಳಗಳನ್ನು, ಅಸ್ಸಾಂ ರೈಫಲ್ಸ್ ಹಾಗೂ ಮ್ಯಾನ್ಮಾರ್ ಸೇನೆಯನ್ನು ಬಳಕೆ ಮಾಡಲಾಗಿದೆ. ಕಾರ್ಯಾಚರಣೆಗೆ ಹೆಲಿಕಾಪ್ಟರ್, ಡ್ರೋನ್ ಮತ್ತು ಕಣ್ಗಾವಲು ಸಾಧನಗಳನ್ನು ಕೂಡ ಬಳಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದೀಗ ಭಾರತೀಯ ಸೇನೆ ಮಯನ್ಮಾರ್ ಸೇನೆಯೊಂದಿಗೆ ಕೈಜೋಡಿಸಿ ಅರಾಕನ್ ಆರ್ಮಿ ಉಗ್ರ ಸಂಘಟನೆಯ 12ಕ್ಕೂ ಹೆಚ್ಚು ಕ್ಯಾಂಪ್ ಗಳನ್ನು ಧ್ವಂಸ ಮಾಡಿದೆ. ಮಿಜೋರಾಂ, ನಾಗಾಲ್ಯಾಂಡ್ ನಿಂದ ಅರುಣಾಚಲ ಪ್ರದೇಶ ಗಡಿಯವರೆಗೂ ಹಬ್ಬಿದ್ದ 12ಕ್ಕೂ ಹೆಚ್ಚು ಉಗ್ರ ಕ್ಯಾಂಪ್ ಗಳನ್ನು ಇದೀಗ ಸೇನೆ ಧ್ವಂಸ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
While the world and India focused on Pulwama terror attack and the Balakot airstrike carried out in its aftermath, the Indian Army carried out a mega operation to eliminate threats posed by insurgents along the Indo-Myanmar border.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X