India-Pakistan War: ಪಾಕಿಸ್ತಾನದ 12 ನಗರಗಳ ಮೇಲೆ ಡ್ರೋನ್‌ ದಾಳಿ

India-Pakistan War: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ದೇಶದ ಅಮಾಯಕ ಜನರು ಬಲಿಯಾಗಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಮಂಗಳವಾರ ತಡರಾತ್ರಿ ಭಾರತದ ಸೇನೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಪಾಕಿಸ್ತಾನದ 12 ನಗರಗಳ ಮೇಲೆ ಡ್ರೋನ್‌ ದಾಳಿ ನಡೆಸಲಾಗಿದೆ. ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬುಧವಾರ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ್ಗೆಯಿಂದ ಮತ್ತೆ ಸೈರನ್ ಮೊಳಗುತ್ತಿದ್ದು, ಲಾಹೋರ್ ಮತ್ತು ಕರಾಚಿಯಲ್ಲಿ ಡ್ರೋನ್ ದಾಳಿ ನಡೆಯುತ್ತಿದೆ. ಇದರಿಂದ ಪಾಕಿಸ್ತಾನ ವಾಯುನೆಲೆಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Indian Drone Attacks on 12 Pakistani Cities Spark Major Escalation

ಗುರುವಾರ ಪಾಕಿಸ್ತಾನದ ಲಾಹೋರ್‌ನಲ್ಲಿ ದೊಡ್ಡ ಸರಣಿ ಸ್ಫೋಟಗಳು ಕೇಳಿ ಬಂದಿದ್ದರಿಂದ ಸೈರನ್‌ಗಳು ಮೊಳಗಲಾರಂಭಿಸಿವೆ. ಡ್ರೋನ್‌ಗಳು ಕರಾಚಿ ಮತ್ತು ಲಾಹೋರ್‌ನ ನಿಗಧಿತ ಪ್ರದೇಶ ಮತ್ತು ಕಟ್ಟಡಗಳಿಗೆ ನುಗ್ಗಿ ಸ್ಫೋಟಗೊಳ್ಳುತ್ತಿವೆ ಎಂದು ತಿಳಿದುಬಂದಿದೆ.

ಪಾಕಿಸ್ತಾನವು ಭಾರತದ ಗಡಿ ಭಾಗಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲು ಯತ್ನಿಸಿತ್ತು. ಇದಕ್ಕೆ ಪ್ರತಿಯಾಗಿ ಭಾರತ ಸೇನಾ ಕಾರ್ಯಾಚರಣೆಯನ್ನು ಚುರುಕುಗಳಿಸಿದ್ದು, ಪಾಕಿಸ್ತಾನದ ಮೇಲೆ 17 ಕಾಮಿಕಾಜೆ ಡ್ರೋನ್ ಬಳಕೆ ಮಾಡಲಾಗಿದೆ. ನಾಗಾಸ್ತ್ರ ಎಂದೇ ಖ್ಯಾತಿಯನ್ನು ಹೊಂದಿರುವ ಈ ಡ್ರೋನ್‌‌ಗಳು ಪಾಕಿಸ್ತಾನದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ರಾವಲ್ಪಿಂಡಿ, ಕರಾಜಿ, ಇಸ್ಲಮಾಬಾದ್, ಲಾಹೋರ್ ಸೇರಿದಂತೆ ಹಲವು ಸೇನಾ ನೆಲೆಗಳ ಮೇಲೆ ದಾಳಿ ನಡೆಸಿದೆ.

ಭಾರತದ 15 ನಗರಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ಯೋಜನೆ ರೂಪಸಿತ್ತು. ಆದರೆ, ಆದರೆ ಭಾರತೀಯ ಸೇನೆಯು ಇದನ್ನು ವಿಫಲಗೊಳಿಸಿ ಪಾಕಿಸ್ತಾನದ ಡಿಫೆನ್ಸ್ ಸಿಸ್ಟಮ್ HQ-9 ಧ್ವಂಸಗೊಳಿಸಿದೆ. ಇದರಿಂದ ಪಾಕಿಸ್ತಾನ ರಕ್ಷಣಾ ವಾಯು ನೆಲೆಗೆ ದೊಡ್ಡ ಪ್ರಮಾಣದಲ್ಲಿ ನಷ್ಟವಾಗಿದೆ.

ಘಟನೆ ಹಿನ್ನೆಲೆ: ಭಾರತೀಯ ಸೇನೆಯು ಲಾಹೋರ್, ಕರಾಚಿ, ಸಿಯೋಲ್‌ ಕೋಟ್‌ ಮೇಲೆ ದಾಳಿ ನಡೆಸಿದೆ. ಪಾಕ್ ದಾಳಿಯನ್ನು ವಿಫಲಗೊಳಿಸಿದ ಬಳಿಕ ಭಾರತೀಯ ಸೇನೆ ಈ ದಾಳಿ ನಡೆಸಿದೆ. ಪಾಕಿಸ್ತಾನ ಭಾರತದ ಚಂಡೀಗಢ, ಆವಂತಿಪೊರ, ಜಲಂಧರ್, ಲೂಧಿಯಾನ, ಅಮೃತಸರ, ಪಠಾಣಕೋಟ್, ಕಪೂರ್ತಲಾ, ನಲ, ಫಲೋಡಿ, ಉತ್ತರಲೈ, ಭುಜ್, ಜಮ್ಮು, ಶ್ರೀನಗರ, ಆಧಂಪುರ, ಭಟಿಂಡಾ ಮೇಲೆ ದಾಳಿಗೆ ಯತ್ನಿಸಿತ್ತು.

ಬುಧವಾರ ರಾತ್ರಿ ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ದಾಳಿಗೆ ಯತ್ನಿಸಿತ್ತು. ಪಾಕಿಸ್ತಾನ ಸೇನೆಯ ದಾಳಿಯನ್ನು ವಿಫಲಗೊಳಿಸಿರುವ ಭಾರತೀಯ ಸೇನೆ S-400 ಏರ್​ಡಿಫೆನ್ಸ್ ಸಿಸ್ಟಮ್ ಮೂಲಕ ಪಾಕಿಸ್ತಾನದ ಚೀನಾ ನಿರ್ಮಿತ HQ-9 ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನದ ಕ್ಷಿಪಣಿಗಳ ಅವಶೇಷಗಳನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದ್ದು, 'ಆಪರೇಷನ್ ಸಿಂಧೂರ್' ಕಾರ್ಯಾಚರಣೆಯಡಿಯಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನದ HQ-9 ವಾಯು ರಕ್ಷಣಾ ವ್ಯವಸ್ಥೆಯನ್ನು ಭಾರತ ನಾಶಪಡಿಸಿದ್ದು, ಅದರ ಫೋಟೋಗಳುಕೂಡ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಇನ್ನು ಈ ಬಗ್ಗೆ ಪತ್ರಿಕಾ ಮಾಹಿತಿ ನೀಡಿರುವ ಭಾರತ ಸರ್ಕಾರ, ಪಾಕಿಸ್ತಾನದ ಡ್ರೋನ್, ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದೇವೆ. ಪಶ್ಚಿಮ ಭಾರತ, ಉತ್ತರ ಭಾರತದ ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಡ್ರೋನ್, ಕ್ಷಿಪಣಿ ದಾಳಿಗೆ ಯತ್ನಿಸಿತ್ತು. S-400 ಏರ್​ಡಿಫೆನ್ಸ್ ಮೂಲಕ ಪಾಕಿಸ್ತಾನದ ದಾಳಿ ತಡೆದಿದ್ದೇವೆ. ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ಮೇಲೂ ದಾಳಿ ಮಾಡಿದ್ದೇವೆ ಎಂದು ತಿಳಿಸಿದೆ. ಭಾರತೀಯ ಸೇನೆಯ ಈ ದಾಳಿಯಿಂದ ಪಾಕಿಸ್ತಾನದ ವಾಯು ರಕ್ಷಣಾ ಘಟಕಗಳಿಗೆ ದೊಡ್ಡ ಹಾನಿ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+