UNCDF ಕಾರ್ಯದರ್ಶಿಯಾಗಿ ಭಾರತ ಮೂಲದ ಪ್ರೀತಿ ಸಿನ್ಹಾ ನೇಮಕ
ವಿಶ್ವಸಂಸ್ಥೆ, ಫೆಬ್ರವರಿ 16: ವಿಶ್ವಸಂಸ್ಥೆಯ ಕ್ಯಾಪಿಟಲ್ ಡೆವಲಪ್ಮೆಂಟ್ ವಿಭಾಗಕ್ಕೆ ಭಾರತ ಮೂಲದ ಹೂಡಿಕೆ ಹಾಗೂ ಅಭಿವೃದ್ಧಿ ಬ್ಯಾಂಕರ್ ಪ್ರೀತಿ ಸಿನ್ಹಾ ಅವರನ್ನು ಕಾರ್ಯಕಾರಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಪ್ರೀತಿ ಸಿನ್ಹಾ ಅವರು ಕೆಳ ಸಮುದಾಯಗಳ ಮಹಿಳೆಯರು, ಯುವಜನರು, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ ಸಣ್ಣ ಪ್ರಮಾಣದ ಹಣಕಾಸು ನೆರವು ಒದಗಿಸುವತ್ತ ಅವರು ಗಮನಹರಿಸಲಿದ್ದಾರೆ.
ಯುಎನ್ಸಿಡಿಎಫ್ ಕಾರ್ಯಕಾರಿ ಕಾರ್ಯದರ್ಶಿಯಾಗಿ ಪ್ರೀತಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಇದು ಯುಎನ್ಸಿಡಿಎಫ್ನ ಎರಡನೆಯ ಉನ್ನತ ಹುದ್ದೆಯಾಗಿದೆ.
ನ್ಯೂಯಾರ್ಕ್ನಲ್ಲಿ ಕೇಂದ್ರ ಕಚೇರಿ ಇರುವ ಈ ಸಂಸ್ಥೆಯನ್ನು 1966ರಲ್ಲಿ ಸ್ಥಾಪಿಸಲಾಗಿತ್ತು. ಇದು ಅಭಿವೃದ್ಧಿಯಾಗದ ದೇಶಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಹಣಕಾಸುಗಳು ಪರಿಣಾಮಕಾರಿ ಬಳಕೆಗಾಗಿ ಸಣ್ಣ ಪ್ರಮಾಣದ ಹಣಕಾಸು ನೆರವನ್ನು ಒದಗಿಸುತ್ತದೆ.

ವಿಶ್ವಸಂಸ್ಥೆಯಲ್ಲಿ ತಮ್ಮ 30 ವರ್ಷಗಳ ವೃತ್ತಿ ಬದುಕು ನಡೆಸಿ ಫೆಬ್ರವರಿಯ ಆರಂಭದಲ್ಲಿ ನಿವೃತ್ತರಾದ ಜುಡಿತ್ ಕರ್ಲ್ ಅವರ ಸ್ಥಾನವನ್ನು ಪ್ರೀತಿ ತುಂಬಲಿದ್ದಾರೆ. ಹಾರ್ವರ್ಡ್ ಕೆನಡಿ ಸ್ಕೂಲ್ ಆಫ್ ಗವರ್ನ್ಮೆಂಟ್ನಲ್ಲಿ ಸಾರ್ವಜನಿಕ ಹಣಕಾಸು ನಿರ್ವಹಣೆ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಯಾಲೆ ಸ್ಕೂಲ್ ಆಫ್ ಮ್ಯಾನೇಜ್ಮೆಂಡ್ನಿಂದ ಸಾರ್ವಜನಿಕ ಮತ್ತು ಖಾಸಗಿ ನಿರ್ವಹಣೆಯಲ್ಲಿ ಮಾಸ್ಟರ್ಸ್ ಹಾಗೂ ವಿಶ್ವ ಆರ್ಥಿಕ ವೇದಿಕೆಯಿಂದ ಮಾಸ್ಟರ್ ಪನ್ ಗ್ಲೋಬಲ್ ಲೀಡರ್ಶಿಪ್ ಪದವಿಗಳನ್ನು ಪಡೆದಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications