• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನ ಸಾವು, ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್

|
Google Oneindia Kannada News

ಇಸ್ಲಾಮಾಬಾದ್, ಮಾರ್ಚ್ 02: ಇಂಡಿಗೋ ವಿಮಾನದಲ್ಲಿ ಪ್ರಯಾಣಿರೊಬ್ಬರು ಮೃತಪಟ್ಟ ಪರಿಣಾಮ, ಕರಾಚಿಯಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ

ಶಾರ್ಜಾದಿಂದ ಲಕ್ನೋಗೆ ತೆರಳುತ್ತಿದ್ದ ವಿಮಾನ ಇದಾಗಿತ್ತು, ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗಾಗಿ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು.

ದೆಹಲಿಯಲ್ಲಿ ಸಿಂಗಾಪುರ ವಿಮಾನ ತುರ್ತು ಲ್ಯಾಂಡಿಂಗ್ದೆಹಲಿಯಲ್ಲಿ ಸಿಂಗಾಪುರ ವಿಮಾನ ತುರ್ತು ಲ್ಯಾಂಡಿಂಗ್

ಇಂಡಿಗೋ ಏರ್‌ಲೈನ್ಸ್ ಶಾರ್ಜಾದಿಂದ ಲಕ್ನೋಗೆ ಹೊರಟಿದ್ದು, ಈ ವೇಳೆ ಪ್ರಯಾಣಿಕರೊಬ್ಬರು ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ವಿಮಾನವನ್ನು ಪಾಕಿಸ್ತಾನದ ದಕ್ಷಿಣ ನಗರವಾದ ಕರಾಚಿಯಲ್ಲಿ ತುರ್ತಾಗಿ ಲ್ಯಾಂಡಿಂಗ್ ಮಾಡಿರುವುದಾಗಿ ಸಂಸ್ಥೆ ಹೇಳಿದೆ.

ವೈದ್ಯಕೀಯ ಚಿಕಿತ್ಸೆಗಾಗಿ ಇಂಡಿಗೋ ವಿಮಾನವನ್ನು ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು. ಆದರೆ ಅವರು ಅಷ್ಟರಲ್ಲಾಗಲೇ ಸಾವನ್ನಪ್ಪಿರುವುದಾಗಿ ಕರಾಚಿಯಲ್ಲಿ ವೈದ್ಯರು ಘೋಷಿಸಿದ್ದು, ಇದೊಂದು ತುಂಬಾ ದುಃಖಕರ ವಿಷಯ, ಮೃತ ಪ್ರಯಾಣಿಕರ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸಿರುವುದಾಗಿ ಇಂಡಿಗೋ ಅಧಿಕಾರಿಗಳು ತಿಳಿಸಿದರು.

ಬೆಂಗಳೂರಲ್ಲಿ ಗೋ ಏರ್ ವಿಮಾನ ತುರ್ತು ಲ್ಯಾಂಡಿಂಗ್ಬೆಂಗಳೂರಲ್ಲಿ ಗೋ ಏರ್ ವಿಮಾನ ತುರ್ತು ಲ್ಯಾಂಡಿಂಗ್

ವಿಮಾನದಲ್ಲಿಯೇ ಹೃದಯಾಘಾತಕ್ಕೊಳಗಾದ ಪ್ರಯಾಣಿಕರಿಗೆ ಎಲ್ಲಾ ವೈದ್ಯಕೀಯ ನೆರವು ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary
A Sharjah-Lucknow IndiGo flight made an emergency landing on Tuesday in Pakistan's Karachi after a passenger suffered a medical emergency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X