ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ: ದಟ್ಟ ಹೊಗೆ, ಬೂದಿ

|
Google Oneindia Kannada News

ಜಕಾರ್ತ, ಆಗಸ್ಟ್ 10: ದ್ವೀಪಗಳ ನಾಡು ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟಿಸಿದ್ದು, ಬರೋಬ್ಬರಿ 5000 ಅಡಿ ಎತ್ತರದವರೆಗೂ ಹೊಗೆ ಮತ್ತು ಬೂದಿ ಅವರಿಸಿ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿ ಮಾಡಿದೆ.

ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಮೌಂಟ್​​ ಸಿನಾಬಂಗ್ ನಲ್ಲಿ ಇಂದು ಜ್ವಾಲಾಮುಖಿ ಸ್ಫೋಟಿಸಿದ್ದು, ಪರಿಣಾಮ ಸುಮಾರು 5 ಸಾವಿರ ಅಡಿ ಎತ್ತರದಷ್ಟು ದಟ್ಟ ಹೊಗೆ ಮತ್ತು ಬೂದಿ ಆವರಿಸಿದೆ. ಶನಿವಾರದಿಂದ ಸಂಭವಿಸಿದ ಎರಡನೇ ಜ್ವಾಲಾಮುಖಿ ಸ್ಪೋಟ ಇದಾಗಿದೆ

ಜ್ವಾಲಾಮುಖಿ, ಉಲ್ಕೆಗಳಿಂದಲೂ ವಿನಾಶಕಾರಿ ವೈರಸ್‌ಗಳು ಭೂಮಿಗೆ ಬರುತ್ತವೆ!ಜ್ವಾಲಾಮುಖಿ, ಉಲ್ಕೆಗಳಿಂದಲೂ ವಿನಾಶಕಾರಿ ವೈರಸ್‌ಗಳು ಭೂಮಿಗೆ ಬರುತ್ತವೆ!

2010ರಿಂದಲೂ ತೀವ್ರ ಚಟುವಟಿಕೆಯಿಂದ ಕೂಡಿದ್ದ ಮೌಂಟ್​​ ಸಿನಾಬಂಗ್ ಜ್ವಾಲಾಮುಖಿ 2016ರಲ್ಲಿ ಸ್ಫೋಟಿಸಿತ್ತು. ಮೂರು ವರ್ಷಗಳ ಬಳಿಕ ಮತ್ತೆ 2019ರಲ್ಲೂ ಮತ್ತೆ ಜ್ವಾಲಾಮುಖಿ ಸ್ಫೋಟಗೊಂಡಿತ್ತು.

Indonesia Volcano Eruption: Mount Sinabung Spews Ash Cloud

ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವಾಲಮುಖಿಯ ದೂಳು ಆವರಿಸಿದ್ದು, ಮುಂಜಾಗ್ರತ್ರಾ ಕ್ರಮವಾಗಿ ಸ್ಥಳೀಯ ಆಡಳಿತ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರವಾಗುವಂತೆ ಸೂಚಿಸಿದೆ.

ಸಿಡಿಲಿನ ರೀತಿಯಲ್ಲಿ ಶಬ್ಧ ಕೇಳಿಸಿತ್ತು. ಈವರೆಗೆ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಇಂಡೋನೇಷ್ಯಾದಲ್ಲಿ ಸುಮಾರು 130 ಜ್ವಾಲಾಮುಖಿಗಳು ಕಾರ್ಯ ಪ್ರವೃತ್ತವಾಗಿದ್ದು.

400 ವರ್ಷಗಳಲ್ಲೇ ಮೊದಲ ಬಾರಿಗೆ 2010ರಲ್ಲಿ ಸಿನಾಬಂಗ್​​ ಪರ್ವತದಿಂದ ಜ್ವಾಲಾಮುಖಿ ಸ್ಫೋಟಿಸಿತ್ತು. ನಂತರ 2013ರಲ್ಲಿಯೂ ಜ್ವಾಲಾಮುಖಿ ಸ್ಫೋಟಿಸಿ, ಅಂದಿನಿಂದ ನಿರಂತರವಾಗಿ ಜ್ವಾಲಾಮುಖಿ ಸಕ್ರಿಯವಾಗಿದೆ.

2014ರಲ್ಲಿ ಉಂಟಾದ ಸ್ಫೋಟದಲ್ಲಿ 16 ಮಂದಿ ಸಾವನ್ನಪ್ಪಿದ್ದರೆ, 2016ರಲ್ಲಿ ಸಂಭವಿಸಿದ್ದ ಜ್ವಾಲಾಮುಖಿ ಸ್ಫೋಟದಲ್ಲಿ 7 ಮಂದಿ ಬಲಿಯಾಗಿದ್ದರು. 2019ರಲ್ಲಿ ಸಂಭವಿಸಿದ ಜ್ವಾಲಾಮುಖಿಯಿಂದ ಯಾವುದೇ ಸಾವು ನೋವು ಉಂಟಾಗಿರಲಿಲ್ಲ.

English summary
Mount Sinabung on Indonesia's Sumatra island erupted on Monday, firing ash and other volcanic materials as high as 5,000 meters (16,400 feet) into the sky. It was the second eruption since Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X