ಜಕಾರ್ತದಲ್ಲಿ ಅವಳಿ ಬಾಂಬ್ ಸ್ಟೋಟ, ಮೂವರ ಸಾವು

ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ. ಇಲ್ಲಿನ ಬಸ್ ನಿಲ್ದಾಣದ ಸಮೀಪ ಎರಡು ಬಾಂಬ್ ಸ್ಪೋಟ ಸಂಭವಿಸಿದ್ದು 3 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಜಕಾರ್ತ, ಮೇ 24: ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಎರಡು ಬಾಂಬ್ ಸ್ಪೋಟ ಸಂಭವಿಸಿದೆ. ಜಕಾರ್ತದ ಪೂರ್ವ ಭಾಗದಲ್ಲಿ ಬಸ್ ನಿಲ್ದಾಣವೊಂದರ ಸಮೀಪ ಎರಡು ಬಾಂಬ್ ಗಳು ಸ್ಪೋಟಿಸಿವೆ ಎಂದು ಇಂಡೋನೇಷ್ಯಾದ ಪೊಲೀಸರು ಹೇಳಿದ್ದಾರೆ.

ಇನ್ನು ಇದೊಂದು ಆತ್ಮಹತ್ಯಾ ಬಾಂಬ್ ದಾಳಿ ಎಂದು ಇಂಡೋನೇಷ್ಯಾ ಪೊಲೀಸರು ಶಂಕಿಸಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹಾಗೂ ಶಂಕಿತ ಆತ್ಮಾಹುತಿ ದಾಳಿಕೋರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ವರದಿಗಳ ಪ್ರಕಾರ ಬಾಂಬ್ ಸ್ಟೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Indonesian: Two Explosions Near Bus Station In East Jakarta

ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ಇತ್ತೀಚೆಗೆ ಬ್ರಿಟನ್ ನ ಮ್ಯಾಂಚೆಸ್ಟರ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಟೋಟ ಸಂಭವಿಸಿತ್ತು. ಈ ಘಟನೆ ಇನ್ನೂ ಮಾಸುವ ಮೊದಲೇ ಇಂಡೋನೇಷ್ಯಾದಲ್ಲೂ ಬಾಂಬ್ ಸ್ಟೋಟ ಸಂಭವಿಸಿದೆ. ಆದರೆ ಬಾಂಬ್ ಸ್ಟೋಟದ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ.

ಚಿತ್ರ ಕೃಪೆ: ಟ್ವಿಟ್ಟರ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+