'ಜೀವಂತವಾಗಿ ದೇಶಕ್ಕೆ ಬರ್ತಿನಿ ಎಂಬ ನಂಬಿಕೆನೇ ಇರ್ಲಿಲ್ಲ'
ಬೆಂಗಳೂರು, ಏ. 5: ಆಂತರಿಕ ಯುದ್ಧದಿಂದ ತ್ತತ್ತರಿಸುತ್ತಿರುವ ಯೆಮನ್ನಲ್ಲಿ ಸಿಲುಕಿಕೊಂಡಿದ್ದ ಬೆಂಗಳೂರಿನ ಉದ್ಯಮಿ ರವಿಕುಮಾರ್ ಹಾಗೂ ಮದನ್ಮೋಹನ್ರೆಡ್ಡಿ ತಾಯ್ನಾಡಿಗೆ ಆಗಮಿಸಿದ್ದಾರೆ.
ಏಪ್ರಿಲ್ 4 ರಂದು ಮುಂಜಾನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಕುಟುಂಬಸ್ಥರು ಬರಮಾಡಿಕೊಂಡರು. ರವಿಕುಮಾರ್ ಅವರ ಪತ್ನಿ, ಮಕ್ಕಳು ಹಾಗೂ ಬಂಧುಗಳು ಹಾಜರಿದ್ದರು.[ಯೆಮನ್ ನಲ್ಲಿ ಸಿಲುಕಿದ ಪೀಣ್ಯ ರವಿಗಾಗಿ ಉದ್ಯಮ ಬಂದ್]

ನಾವು ಜೀವಂತವಾಗಿ ಸ್ವದೇಶಕ್ಕೆ ಹಿಂದಿರುಗುತ್ತೇವೆ ಎಂಬ ನಂಬಿಕೆಯೇ ಮಾಯವಾಗಿತ್ತು. ನಮ್ಮ ಪಕ್ಕದಲ್ಲಿಯೇ ಬಾಂಬ್ ಸಿಡಿಯುತ್ತಿತ್ತು. ನಾವು ಜೀವಂತವಾಗಿ ಹಿಂದಿರುಗಿರುವುದು ಪವಾಡವೇ ಸರಿ, ಆ ನಂಬಿಕೆಯೂ ನಮಗಿರಲಿಲ್ಲ ಎಂದು ರವಿಕುಮಾರ್ ಅಲ್ಲಿನ ಪರಿಸ್ಥಿತಿಯನ್ನು ತೆರೆದಿಟ್ಟರು.
ಭಾರತ ಸರ್ಕಾರ ಅಲ್ಲಿಗೆ ಕಳುಹಿಸಿದ ಭಾರತೀಯ ವಾಯುಪಡೆ ಮತ್ತು ನೌಕಾಪಡೆ ಸಿಬ್ಬಂದಿ ನಮ್ಮನ್ನು ಸುರಕ್ಷಿತವಾಗಿ ಕರೆತಂದರು. ಯೆಮನ್ನಲ್ಲಿ ಇನ್ನೂ ಸಾವಿರಾರು ಜನ ಭಾರತೀಯರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದು ಅವರನ್ನು ರಕ್ಷಿಸಬೇಕಿದೆ ಎಂದು ಹೇಳಿದರು.[ಯೆಮನ್: ಭಾರತಕ್ಕೆ ಹಿಂದಿರುಗಿದ 349 ಜನ ಸಂತ್ರಸ್ತರು]
ಕಳೆದ ಒಂದು ವಾರದಿಂದ ಯೆಮನ್ ನಲ್ಲಿ ಆಂತರಿಕ ಸಂಘರ್ಷ ಕಾಣಿಸಿಕೊಂಡಿದ್ದು ಸುಮಾರು 500ಕ್ಕೂ ಹೆಚ್ಚು ಭಾರತೀಯರನ್ನು ರಕ್ಷಿಸಿ ಕರೆತರಲಾಗಿದೆ. ಸ್ವತಃ ಕೇಂದ್ರ ಸಚಿವ ವಿಕೆ ಸಿಂಗ್ ಹಾಜರಿದ್ದು ರಕ್ಚಣಾ ಕ್ರಮ ನೋಡಿಕೊಳ್ಳುತ್ತಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications