ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಮುಜುಗರ ಉಂಟುಮಾಡಿದ ಭಾರತ

|
Google Oneindia Kannada News

ಹೇಗ್, ಫೆಬ್ರವರಿ 18: ಭಯೋತ್ಪಾದನೆಗೆ ಪ್ರಚೋದನೆ ನೀಡುವ ಜೊತೆಯಲ್ಲಿ ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹವಣಿಸುತ್ತಿರುವ ಪಾಕಿಸ್ತಾನಕ್ಕೆ ಸೋಮವಾರ ನೆದರ್ಲೆಂಡ್‌ನ ಹೇಗ್ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ತೀವ್ರ ಮುಜುಗರವಾಗಿದೆ.

ಕುಲಭೂಷಣ್ ಜಾಧವ್ ಅವರಿಗೆ ಗಲ್ಲುಶಿಕ್ಷೆ ವಿಧಿಸಿದ್ದ ಪಾಕಿಸ್ತಾನದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ದೀಪಕ್ ಮಿಟ್ಟಲ್ ಪಾಕಿಸ್ತಾನದ ಎಜಿ ಅನ್ವರ್ ಮನ್ಸೂರ್ ಖಾನ್ ಅವರ ಕೈಕುಲುಕಲು ನಿರಾಕರಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಪರಾಕಿ ನೀಡಿದ್ದಾರೆ.

International Court of Justice deepak mittal embarassed pakistan AG anwar Mansoor Khan

ಜಾಧವ್ ಗಲ್ಲುಶಿಕ್ಷೆ: ಐಸಿಜೆಯಲ್ಲಿ ಪಾಕ್ ವಿರುದ್ಧ ಭಾರತದ ತೀಕ್ಷ್ಣ ವಾದ ಜಾಧವ್ ಗಲ್ಲುಶಿಕ್ಷೆ: ಐಸಿಜೆಯಲ್ಲಿ ಪಾಕ್ ವಿರುದ್ಧ ಭಾರತದ ತೀಕ್ಷ್ಣ ವಾದ

ವಿಚಾರಣೆಗೂ ಮುನ್ನ ನ್ಯಾಯಾಲಯಕ್ಕೆ ಆಗಮಿಸಿದ್ದ ದೀಪಕ್ ಮಿಟ್ಟಲ್ ಮತ್ತು ಮನ್ಸೂರ್ ಖಾನ್ ಮುಖಾಮುಖಿಯಾಗಿದ್ದರು. ಆಗ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ವೇಳೆ ಮನ್ಸೂರ್ ಖಾನ್, ಹಸ್ತಲಾಘವ ನೀಡಲು ಕೈಚಾಚಿದ್ದರು. ಆದರೆ, ದೀಪಕ್ ಮಿಟ್ಟಲ್ ಪ್ರತಿಯಾಗಿ ಕೈಲುಕದೆ ಎರಡೂ ಕೈಗಳನ್ನು ಜೋಡಿಸಿ 'ನಮಸ್ತೆ' ಎಂದಿದ್ದಾರೆ.

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ, ಫೆಬ್ರವರಿಯಲ್ಲಿ ಮತ್ತೆ ವಿಚಾರಣೆ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ, ಫೆಬ್ರವರಿಯಲ್ಲಿ ಮತ್ತೆ ವಿಚಾರಣೆ

ಅಂತಾರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಪಾಕಿಸ್ತಾನದ ಪ್ರತಿನಿಧಿಗೆ ಕೈಕುಲುಕದೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ದೀಪಕ್ ಮಿಟ್ಟಲ್ ಅವರ ನಡೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

English summary
Indian MEA Joint Secretary Deepak Mittal on Monday embarassed pakistan AG Anwar Mansoor Khan in the International Court of Justice.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X