Iran-US War: ಇರಾನ್ - ಅಮೆರಿಕ ಕದನ ವಿರಾಮ, ಏಪ್ರಿಲ್ 10ಕ್ಕೆ ಪಾಕ್‌ನಲ್ಲಿ ಮಾತುಕತೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
Iran-US War: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಪಾಕಿಸ್ತಾನದ ಮಧ್ಯಸ್ಥಿಕೆಯಿಂದ ತಾತ್ಕಾಲಿಕವಾಗಿ ನಿಂತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಎರಡು ವಾರಗಳ ಕಾಲ ಕದನ ವಿರಾಮ ಘೋಷಣೆ ಮಾಡಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕದನ ವಿರಾಮ ಒಪ್ಪಂದವನ್ನು ಒಪ್ಪಿಕೊಂಡಿರುವುದಾಗಿ ಇರಾನ್ ಸಹ ಘೋಷಣೆ ಮಾಡಿದೆ.
ಇರಾನ್ - ಅಮೆರಿಕ, ಇಸ್ರೇಲ್‌ನ ನಡುವೆ ಕದನ ವಿರಾಮ ಘೋಷಣೆ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಅತ್ಯಂತ ನಮ್ರತೆಯಿಂದ, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ ಮತ್ತು ಮಿತ್ರರಾಷ್ಟ್ರಗಳೊಂದಿಗೆ, ಲೆಬನಾನ್ ಮತ್ತು ಇತರೆಡೆ ಸೇರಿದಂತೆ ಎಲ್ಲೆಡೆ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ.

ನಾನು ಈ ಚಾಣಾಕ್ಷತನದ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಎರಡೂ ದೇಶಗಳ ನಾಯಕತ್ವಕ್ಕೆ ಆಳವಾದ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಎಲ್ಲಾ ವಿವಾದಗಳನ್ನು ಪರಿಹರಿಸಲು ನಿರ್ಣಾಯಕ ಒಪ್ಪಂದಕ್ಕಾಗಿ ಮತ್ತಷ್ಟು ಮಾತುಕತೆ ನಡೆಸಲು ಅವರ ನಿಯೋಗಗಳನ್ನು ಏಪ್ರಿಲ್ 10, 2026 ರಂದು ಶುಕ್ರವಾರ ಇಸ್ಲಾಮಾಬಾದ್‌ಗೆ ಆಹ್ವಾನಿಸುತ್ತೇನೆ.
ಎರಡೂ ದೇಶಗಳ ನಾಯಕರು ಗಮನಾರ್ಹ ಬುದ್ಧಿವಂತಿಕೆ ಮತ್ತು ತಿಳುವಳಿಕೆಯನ್ನು ಪ್ರದರ್ಶಿಸಿದ್ದಾರೆ ಮತ್ತು ಶಾಂತಿ ಮತ್ತು ಸ್ಥಿರತೆಯನ್ನು ಮುಂದುವರಿಸುವಲ್ಲಿ ರಚನಾತ್ಮಕವಾಗಿ ತೊಡಗಿಸಿಕೊಂಡಿವೆ. ಇಸ್ಲಾಮಾಬಾದ್ ಮಾತುಕತೆಗಳು ಸುಸ್ಥಿರ ಶಾಂತಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗುತ್ತವೆ ಮತ್ತು ಮುಂಬರುವ ದಿನಗಳಲ್ಲಿ ಹೆಚ್ಚಿನ ಒಳ್ಳೆಯ ಸುದ್ದಿಗಳನ್ನು ಹಂಚಿಕೊಳ್ಳಲು ನಾವು ಬಯಸುತ್ತೇವೆ ಎಂದು ನಾವು ಪ್ರಾಮಾಣಿಕವಾಗಿ ಆಶಿಸುತ್ತೇವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಹೇಳಿದ್ದಾರೆ.
ಪ್ರಾರಂಭದಲ್ಲಿ ಒಪ್ಪಿಕೊಳ್ಳದ ಇರಾನ್
ಇನ್ನು ಪ್ರಾರಂಭದ ದಿನಗಳಲ್ಲಿ ಇರಾನ್ - ಪಾಕಿಸ್ತಾನದ ಮಧ್ಯಸ್ಥಿಕೆಗೆ ಇರಾನ್ ಸಹ ಮತ ಸೂಚಿಸಿರಲಿಲ್ಲ. ಇದೀಗ ಇರಾನ್ ಸಹ ಸಹಮತ ವ್ಯಕ್ತಪಡಿಸಿದೆ.












Click it and Unblock the Notifications