ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಪಾಕಿಸ್ತಾನದ ಮಾಜಿ ಮಿಲಿಟರಿ ಜನರಲ್ ಪರ್ವೇಜ್ ಮುಷರಫ್ ದೇಹಸ್ಥಿತಿ ತೀವ್ರ ಗಂಭೀರ

|
Google Oneindia Kannada News

ದುಬೈ, ಜೂನ್ 10: ಪಾಕಿಸ್ತಾನದ ಮಾಜಿ ಮಿಲಿಟರಿ ಜನರಲ್(ನಿವೃತ್ತ), ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಕೆಲ ಕಾಲದಿಂದ ಅನಾರೋಗ್ಯ ಪೀಡಿತರಾಗಿದ್ದ ಮುಷರಫ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಂಟಿಲೇಟರ್ ನೆರವಿನಿಂದ ಉಸಿರಾಡುತ್ತಿದ್ದಾರೆ, ಬದುಕುಳಿಯುವ ಸಾಧ್ಯತೆ ಕ್ಷೀಣಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. ಪರ್ವೇಜ್ ಅವರ ಮೇಲೆ 2007ರಲ್ಲಿ ಪಾಕಿಸ್ತಾನದಲ್ಲಿ ಸಾಂವಿಧಾನಿಕ ತುರ್ತು ಪರಿಸ್ಥಿತಿ ಬಲವಂತವಾಗಿ ಹೇರಿಕೆ, ದೇಶದ್ರೋಹ ಎಸಗಿದ ಆರೋಪವಿತ್ತು.

ಆರೋಪ ಸಾಬೀತಾದ ಹಿನ್ನಲೆಯಲ್ಲಿ ನವೆಂಬರ್ 19ರಂದು ವಿಚಾರಣೆ ಅಂತ್ಯಗೊಂಡು ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಲಾಗಿತ್ತು, ಡಿಸೆಂಬರ್ 17ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ. ಸದ್ಯ ಅನಾರೋಗ್ಯ ಪೀಡಿತರಾಗಿರುವ ಮುಷರಫ್ ಅವರು ದುಬೈನಲ್ಲಿ ನೆಲೆಸಿದ್ದರು.

"ಪಾಕಿಸ್ತಾನಕ್ಕಾಗಿ ಯುದ್ಧಗಳನ್ನು ಎದುರಿಸಿದ ನನ್ನ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರೆಸಿರುವುದು ಎಷ್ಟು ಸರಿ" ಎಂದು ಈ ಹಿಂದೆ ಪರ್ವೇಜ್ ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Breaking News: Former military ruler General (retd) Pervez Musharraf passes away

2007ರಲ್ಲಿ ಪಾಕಿಸ್ತಾನ ಮೇಲೆ ತುರ್ತು ಪರಿಸ್ಥಿತಿ ಹೇರಿದ ಬಳಿಕ ತಮ್ಮ ಆದೇಶದ ಅನ್ವಯ ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದ ಮುಖ್ಯ ನ್ಯಾಯಮೂರ್ತಿ ಇಫ್ತಿಕಾರ್ ಮುಹಮದ್ ಚೌಧರಿ ಸೇರಿದಂತೆ 60 ನ್ಯಾಯಾಧೀಶರನ್ನು ಮುಷರ‌್ರಫ್ ವಜಾಗೊಳಿಸಿ ಜೈಲಿಗೆ ಕಳುಹಿಸಿದ್ದರು. ಈ ಬಗ್ಗೆ 2009ರ ಆ.11ರಂದು ಮುಷರ‌್ರಫ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ನ್ಯಾಯಾಲಯಕ್ಕೆ ಆಗಮಿಸಿ ವಿವರಣೆ ನೀಡುವಂತೆ ಆದೇಶಿಸಿದ್ದ ನ್ಯಾಯಾಲದ ಸೂಚನೆಯನ್ನು ಮುಷರ‌್ರಫ್ ಲಘುವಾಗಿ ಪರಿಗಣಿಸಿದ್ದರು. ಆದ್ದರಿಂದ ಅವರನ್ನು ಬಂಧಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಸ್ವಯಂ ಗಡಿಪಾರಿಗೆ ಒಳಗಾಗಿ ದುಬೈ, ಲಂಡನ್ ನಲ್ಲಿ ಆಶ್ರಯ ಬಯಸಿದ್ದರು.


ಆಲ್ ಪಾಕಿಸ್ತಾನ್ ಮುಸ್ಲಿಂ ಲೀಗ್ (ಎಪಿಎಂ ಎಲ್) ಎಂಬ ರಾಜಕೀಯ ಪಕ್ಷದ ಸ್ಥಾಪಕರೂ ಆಗಿರುವ ಎಪ್ಪತ್ತಾರು ವರ್ಷದ ಮುಷರಫ್ ಮೇಲೆ ಪಾಕಿಸ್ತಾನದ ಮಾಜಿ ಪ್ರಧಾನಿ ಬೆನ್ ಜಿರ್ ಭುಟ್ಟೋ, ಬಲೂಚಿಸ್ತಾನದ ಮುಖಂಡ ನವಾಬ್ ಅಕ್ಬರ್ ಬುಗ್ತಿ ಹತ್ಯೆ ಮಾಡಿದ ಆರೋಪವೂ ಇದೆ. ಇಸ್ಲಾಮಾಬಾದ್ ಸಮೀಪವಿರುವ ತೋಟದ ಮನೆ ಹಾಗೂ ಹಲವಾರು ನಿವೇಶನ ಇತ್ಯಾದಿಗಳನ್ನು ನ್ಯಾಯಾಲಯವು ಮುಟ್ಟುಗೋಲು ಹಾಕಿಕೊಂಡಿದೆ.

2006ರಲ್ಲಿ ನಡೆದ ಸೇನಾ ಕಾರ್ಯಚರಣೆಯಲ್ಲಿ ಬಲೂಚಿಸ್ತಾನದ ಮುಖಂಡ ನವಾಬ್ ಅಕ್ಬರ್ ಬುಗ್ತಿ ಅವರನ್ನು ಹತ್ಯೆ ಮಾಡಲಾಗಿತ್ತು. ಈ ವೇಳೆ ಪಾಕಿಸ್ತಾನದ ಮಿಲಿಟರಿ ಮುಖ್ಯಸ್ಥನಾಗಿದ್ದ ಮುಷರಫ್ ಅವರು ಹತ್ಯೆ ಪ್ರಕರಣದ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಬಲೂಚಿಸ್ತಾನದಪೊಲೀಸರು ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ಪರ್ವೇಜ್ ಒಮ್ಮೆ ಬಂಧನಕ್ಕೂ ಒಳಗಾಗಿದ್ದರು. ಪರ್ವೇಜ್ ಮುಷರಫ್ ಸ್ವದೇಶಕ್ಕೆ ಮರಳುವುದಾಗಿ ತಿಳಿಸಿರುವ ಬೆನ್ನಲ್ಲಿಯೇ ಅವರನ್ನು ಹತ್ಯೆಗೈದವರಿಗೆ 10.10 ಕೋಟಿ ರೂಪಾಯಿ ಮೌಲ್ಯದ ಬಹುಮಾನ ನೀಡುವುದಾಗಿ ಬಲೂಚಿಸ್ತಾನದ ಮಾಜಿ ಮುಖಂಡ ಅಕ್ಬರ್ ಬುಗ್ತಿ ಮೊಮ್ಮಗ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Breaking News: Former military ruler General (retd) Pervez Musharraf passed away. He had been hospitalized in Dubai after his health deteriorated.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X