ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಬ್ಬರು ಸಿಖ್ಖರನ್ನು ಗುಂಡಿಕ್ಕಿ ಕೊಂದ ಐಎಸ್‌ಕೆಪಿ ಭಯೋತ್ಪಾದಕರು

|
Google Oneindia Kannada News

ಇಸ್ಲಾಮಾಬಾದ್, ಮೇ 16: ವಾಯುವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಸಿಖ್ ಪುರುಷರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಸ್ಲಾಮಿಕ್ ಸ್ಟೇಟ್ ವಿಲಾಯಾ ಖೊರಾಸನ್ (ISKP) ಹಾಗೂ ಇಸ್ಲಾಮಿಕ್ ಸ್ಟೇಟ್ಸ್‌ನ ಆಫ್ಘನ್ ಉಪಶಾಖೆ (ಮೇ 15) ಭಾನುವಾರದಂದು ಪಾಕಿಸ್ತಾನದಲ್ಲಿ ಇಬ್ಬರು ಸಿಖ್ ಉದ್ಯಮಿಗಳ ಉದ್ದೇಶಿತ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದೆ.

ಮೃತರನ್ನು ಸಲ್ಜೀತ್ ಸಿಂಗ್ (42) ಮತ್ತು ರಂಜೀತ್ ಸಿಂಗ್ (38) ಎಂದು ಗುರುತಿಸಲಾಗಿದೆ. ಇವರ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇದು ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಮೇಲೆ ನಡೆದ ಇತ್ತೀಚಿನ ದಾಳಿಯಾಗಿದೆ.

ಇಬ್ಬರು ಸಿಖ್ ಪುರುಷರ ಹತ್ಯೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಘಟನೆಯ ಬಗ್ಗೆ ಮಾತನಾಡಿರುವ ವಿದೇಶಾಂಗ ಸಚಿವಾಲಯದ ವಕ್ತಾರರು, "ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರಿದಿರುವ ಬಗ್ಗೆ ವಿರೋಧ ವ್ಯಕ್ತಪಡಿಸುತ್ತೇವೆ. ಈ ಬಗ್ಗೆ ಪಾಕಿಸ್ತಾನ ಸರ್ಕಾರಕ್ಕೆ ತನಿಖೆಗೆ ಒತ್ತಾಯಿಸುತ್ತೇವೆ. ಈ ವಿಷಯವನ್ನು ಪ್ರಾಮಾಣಿಕವಾಗಿ ತನಿಖೆ ಮಾಡಲು ಮತ್ತು ಈ ಶೋಚನೀಯ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಾವು ಕರೆ ನೀಡುತ್ತೇವೆ" ಎಂದು ಟ್ವೀಟ್ ಮಾಡಿದ್ದಾರೆ.

"ಪಾಕಿಸ್ತಾನ ಸರ್ಕಾರ ತನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದು ಅದರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ನೋಡಿಕೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ" ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ISKP terrorists who shot and killed 2 Sikhs

ಇದರ ಬೆನ್ನಲ್ಲೇ, ಪೇಶಾವರ ಹತ್ಯೆಯ ಹಿಂದಿನ ಸತ್ಯಾಂಶಗಳನ್ನು ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಹೇಳಿದ್ದಾರೆ. ಜೊತೆಗೆ ಹಂತಕರನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ.

ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಕೂಡ ಘಟನೆಯನ್ನು ಖಂಡಿಸಿದ್ದಾರೆ. "ಪಾಕಿಸ್ತಾನದಲ್ಲಿ ಮತ್ತೊಂದು ಸಿಖ್ಖರ ಹತ್ಯೆಯಾಗಿದೆ. ಪೇಶಾವರದಲ್ಲಿ ರಂಜೀತ್ ಸಿಂಗ್ ಮತ್ತು ಸಲ್ಜೀತ್ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಇದು ಅತ್ಯಂತ ಖಂಡನೀಯ. ನಾನು ಯಾವಾಗಲೂ ಹೇಳುತ್ತಿದ್ದೆ, @GovtofPakistan ಸಿಖ್ಖರ ಭದ್ರತೆಯನ್ನು ಖಾತ್ರಿಪಡಿಸದೆ ಅವರ ಮೇಲೆ ಇಂತಹ ಕೃತ್ಯಗಳನ್ನು ಎಸಗುತ್ತದೆ" ಎಂದಿದ್ದಾರೆ.

ISKP terrorists who shot and killed 2 Sikhs

ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಮಹಮೂದ್ ಖಾನ್ ಅವರು ಅಪರಾಧಿಗಳನ್ನು ಬಂಧಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಈ ಘಟನೆಯು ಸರ್ವಧರ್ಮ ಸೌಹಾರ್ದತೆಗೆ ಭಂಗ ತರುವ ಷಡ್ಯಂತ್ರ ಎಂದು ಬಣ್ಣಿಸಿರುವ ಅವರು, ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸಲಾಗುವುದು ಎಂದಿದ್ದಾರೆ.

English summary
Saljit Singh and Ranjit Singh two Sikhs have been shot dead in Pakistan's Khyber Pakhtunkhwa province the Ministry has Order of Inquiry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X