ಅಲ್ಪಸಂಖ್ಯಾತರ ನಿರ್ಮೂಲನೆಗೆ ಮುಂದಾದ ಇಸ್ಲಾಮಾಬಾದ್: 15 ದಿನಗಳಲ್ಲಿ ನಾಲ್ಕನೇ ಅಪಹರಣ
ಇಸ್ಲಾಮಾಬಾದ್ ಅಕ್ಟೋಬರ್ 11: ಪಾಕಿಸ್ತಾನದಲ್ಲಿ ಮತ್ತೊಬ್ಬ ಹಿಂದೂ ಹುಡುಗಿಯನ್ನು ಅಪಹರಿಸಲಾಗಿದೆ. ಈ ದೇಶದಲ್ಲಿ ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಜನರ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದೆ. ಪ್ರತಿದಿನ ಹೆಣ್ಣು ಮಕ್ಕಳನ್ನು ಅಪಹರಿಸಿ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಇದರ ಪರಿಣಾಮವೆಂದರೆ ದೇಶದಲ್ಲಿ ಇಸ್ಲಾಂ ಧರ್ಮವನ್ನು ನಂಬದವರ ಅಲ್ಪಸಂಖ್ಯಾತರ ಜನಸಂಖ್ಯೆಯು ಶೇಕಡಾ 3.5 ಕ್ಕೆ ಇಳಿದಿದೆ. 15 ದಿನಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ಹುಡುಗಿಯರ ಅಪಹರಣದ ನಾಲ್ಕನೇ ಪ್ರಮುಖ ಘಟನೆ ಇದಾಗಿದೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಹೈದರಾಬಾದ್ ನಗರದಲ್ಲಿ ಹಿಂದೂ ಯುವತಿಯೊಬ್ಬಳನ್ನು ಅಪಹರಿಸಲಾಗಿದೆ. ತಮ್ಮ ಮಗಳನ್ನು ಹೈದರಾಬಾದ್‌ನ ಫತೇ ಚೌಕ್ ಪ್ರದೇಶದಿಂದ ಅಪಹರಿಸಲಾಗಿದೆ ಎಂದು ಬಾಲಕಿಯ ಪೋಷಕರು ತಿಳಿಸಿದ್ದಾರೆ. ವರದಿ ಪ್ರಕಾರ, ಪೊಲೀಸ್ ಠಾಣೆಯಲ್ಲಿ ಬಾಲಕಿಯ ಅಪಹರಣದ ದೂರು ದಾಖಲಾಗಿದೆ. ಆದರೆ, ಬಾಲಕಿ ಎಲ್ಲಿ, ಯಾವ ಸ್ಥಿತಿಯಲ್ಲಿದ್ದಾರೆ ಎಂಬ ಮಾಹಿತಿ ಇನ್ನೂ ಬಂದಿಲ್ಲ.
ಕೆಲವೇ ದಿನಗಳ ಹಿಂದೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೂವರು ಮಹಿಳೆಯರನ್ನು ಅಪಹರಿಸಿ ಬಲವಂತವಾಗಿ ಮತಾಂತರಿಸಲಾಗಿತ್ತು. ಈ ವಿಷಯ ಇನ್ನೂ ತಣ್ಣಗಾಗಿರಲಿಲ್ಲ. ಅದಾಗಲೇ ಸಿಂಧ್ ಪ್ರಾಂತ್ಯದಿಂದ ಮತ್ತೊಬ್ಬ ಬಾಲಕಿಯನ್ನು ಅಪಹರಿಸಲಾಗಿದೆ. ನಿಜ ಹೇಳಬೇಕೆಂದರೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ನರಕಯಾತನೆಯ ಜೀವನ ನಡೆಸುವಂತಾಗಿದೆ. ಅವರು ಪ್ರತಿದಿನ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ.

ಅಲ್ಪಸಂಖ್ಯಾತರ ವಿರುದ್ಧ ಕಿರುಕುಳದ ದೊಡ್ಡ ಪಟ್ಟಿ
ಪಾಕಿಸ್ತಾನದಲ್ಲಿ ಹಿಂದೂ ಹುಡುಗಿಯರು ಮತ್ತು ಇತರ ಅಲ್ಪಸಂಖ್ಯಾತರ ಅಪಹರಣದ ದೊಡ್ಡ ಪಟ್ಟಿ ಇದೆ. ಸೆಪ್ಟೆಂಬರ್ 24 ರಂದು ಮೀನಾ ಮೇಘವಾರ್ ಎಂಬ 14 ವರ್ಷದ ಬಾಲಕಿಯನ್ನು ನಾಸರ್‌ಪುರ ಪ್ರದೇಶದಿಂದ ಅಪಹರಿಸಲಾಗಿತ್ತು. ಇಷ್ಟು ಮಾತ್ರವಲ್ಲದೆ ಮಿರ್ಪುರ್ಖಾಸ್ ಪಟ್ಟಣದಿಂದ ಮನೆಗೆ ಹಿಂದಿರುಗುತ್ತಿದ್ದ ಮತ್ತೊಬ್ಬ ಬಾಲಕಿಯನ್ನು ಕೂಡ ಅಪಹರಿಸಲಾಗಿತ್ತು. ಈ ಬಗ್ಗೆ ಅಲ್ಲಿನ ಸರ್ಕಾರ ಮೌನವಾಗಿದೆ. ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಸಲು ಅವರು ಮೌನ ಒಪ್ಪಿಗೆ ನೀಡಿದಂತಿದೆ.

ನಾಪತ್ತೆಯಾದವರೆಲ್ಲ ಸ್ವಂತ ಇಚ್ಚೆಯಿಂದ ವಿವಾಹವಾಗಿರುವ ಹೇಳಿಕೆ
ಪಾಕಿಸ್ತಾನದಲ್ಲಿ ಅವಿವಾಹಿತ ಹುಡುಗಿಯರನ್ನು ಮಾತ್ರ ಅಪಹರಿಸಲಾಗುತ್ತಿಲ್ಲ. ಅಲ್ಪಸಂಖ್ಯಾತ ವಿವಾಹಿತ ಮಹಿಳೆಯರನ್ನೂ ಅಪಹರಿಸಿ ಬಲವಂತವಾಗಿ ಮದುವೆಯಾಗುವ ಮೂಲಕ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ. ಈ ಹಿಂದೆ ರವಿ ಕುರ್ಮಿ ಎಂಬ ಹಿಂದೂ ವ್ಯಕ್ತಿ ತನ್ನ ಪತ್ನಿ ರಾಖಿಯನ್ನು ಪಾಕಿಸ್ತಾನದ ಮಿರ್ಪುರ್ಖಾಸ್ ಪಟ್ಟಣದಲ್ಲಿ ಅಪಹರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನಂತರ ಆಕೆಯನ್ನು ಮುಸಲ್ಮಾನನನ್ನಾಗಿ ಮಾಡಿ ಮುಸ್ಲಿಂ ವ್ಯಕ್ತಿಯೊಂದಿಗೆ ವಿವಾಹ ಮಾಡಲಾಗಿದೆ ಎಂದು ಬೆಳಕಿಗೆ ಬಂದಿದೆ. ನಾಪತ್ತೆಯಾಗಿದ್ದ ಮಹಿಳೆ ಇಸ್ಲಾಂಗೆ ಮತಾಂತರಗೊಂಡ ನಂತರವೇ ರವಿ ಅವರಿಗೆ ಕಾಣಿಸಿಕೊಂಡಳು. ಇದರಿಂದ ರವಿ ದೂರು ಕೂಡ ದಾಖಲಿಸಿದ್ದರು. ಆದರೆ ರಾಖಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಅಹ್ಮದ್ ಚಾಂಡಿಯೋ ಎಂಬ ಮುಸ್ಲಿಂ ವ್ಯಕ್ತಿಯನ್ನು ತನ್ನ ಸ್ವಂತ ಇಚ್ಛೆಯಿಂದ ವಿವಾಹವಾಗಿದ್ದಾಳೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.

ಪಾಕಿಸ್ತಾನದಲ್ಲಿ ಹಿಂದೂ ಹುಡುಗಿಯರ ಶೋಷಣೆ
ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಗಳು ಗಣನೀಯವಾಗಿ ಹೆಚ್ಚುತ್ತಿವೆ. ಈ ವರ್ಷದ ಜೂನ್‌ನಲ್ಲಿ ಕರೀನಾ ಕುಮಾರಿ ಎಂಬ ಹಿಂದೂ ಹುಡುಗಿ ತನ್ನನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಎಂದು ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದಳು. ನಂತರ ಆಕೆ ಮುಸ್ಲಿಂ ವ್ಯಕ್ತಿಯೊಂದಿಗೆ ವಿವಾಹವಾದರು. ಅದಕ್ಕೂ ಮೊದಲು ಇತರ ಮೂವರು ಹಿಂದೂ ಹುಡುಗಿಯರನ್ನು ಇಸ್ಲಾಂಗೆ ಮತಾಂತರಿಸುವಂತೆ ಒತ್ತಾಯಿಸಲಾಯಿತು ಮತ್ತು ನಂತರ ಅವರನ್ನು ಮುಸ್ಲಿಂ ಯುವಕರೊಂದಿಗೆ ವಿವಾಹಮಾಡಲಾಯಿತು.
ಪಾಕಿಸ್ತಾನದಲ್ಲಿ ಹುಡುಗಿ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದರೆ, ಅವಳನ್ನು ಕೊಲ್ಲಲಾಗುತ್ತದೆ. ಮಾರ್ಚ್ 21 ರಂದು, ಮುಸ್ಲಿಂ ವ್ಯಕ್ತಿಯಿಂದ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ಕಾರಣ ಪೂಜಾ ಕುಮಾರಿ ಎಂಬ ಹಿಂದೂ ಹುಡುಗಿಯನ್ನು ಸುಕ್ಕರ್‌ನಲ್ಲಿ ಆಕೆಯ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು. h

ಬಲವಂತದದ ಮತಾಂತರಕ್ಕೆ ಪಾಕ್ ಹೇಳಿಕೆ ಏನು?
ಕಳೆದ ವರ್ಷ ಅಕ್ಟೋಬರ್‌ನಲ್ಲಿ, ದೇಶದ ಸಂಸದೀಯ ಸಮಿತಿಯು ಬಲವಂತದ ಮತಾಂತರದ ವಿರುದ್ಧದ ಮಸೂದೆಯನ್ನು ತಿರಸ್ಕರಿಸಿತು. ಈ ಬಗ್ಗೆ ಆಗಿನ ಧಾರ್ಮಿಕ ವ್ಯವಹಾರಗಳ ಸಚಿವ ನೂರುಲ್ ಹಕ್ ಖಾದ್ರಿ ಅವರು ಬಲವಂತದ ಮತಾಂತರದ ವಿರುದ್ಧ ಕಾನೂನು ಜಾರಿಗೆ ತರಲು ಈ ಸಮಯ ಅನುಕೂಲಕರವಾಗಿಲ್ಲ ಎಂದು ವಾದಿಸಿದರು. ಡಾನ್ ವರದಿಯ ಪ್ರಕಾರ, ಬಲವಂತದ ಮತಾಂತರದ ವಿರುದ್ಧದ ಕಾನೂನು ದೇಶದ ಶಾಂತಿಯನ್ನು ಕದಡಬಹುದು ಎಂದು ಸಚಿವರು ಹೇಳಿದ್ದಾರೆ. ಇದು ಅಲ್ಪಸಂಖ್ಯಾತ ಸಮುದಾಯವನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ. ಇದರಿಂದಾಗಿ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿಯ ಫ್ಯಾಕ್ಟ್‌ಬುಕ್ ಪ್ರಕಾರ, ಹಿಂದೂ, ಕ್ರಿಶ್ಚಿಯನ್ ಮತ್ತು ಇತರ ಅಲ್ಪಸಂಖ್ಯಾತರು 2020 ರ ಪಾಕಿಸ್ತಾನದ ಜನಸಂಖ್ಯೆಯ ಕೇವಲ 3.5 ಪ್ರತಿಶತವನ್ನು ಹೊಂದಿದ್ದಾರೆ ಎಂದು ಕೇಂದ್ರೀಯ ಗುಪ್ತಚರ ಸಂಸ್ಥೆಯ ಫ್ಯಾಕ್ಟ್‌ಬುಕ್ ತಿಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications