Israel attacks Iran: ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಹೈ ಅಲರ್ಟ್: ರಾಯಭಾರಿ ಕಚೇರಿಯಿಂದ ತುರ್ತು ಸುರಕ್ಷತಾ ಮಾರ್ಗಸೂಚಿ ಪ್ರಕಟ
ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ಅತ್ಯಂತ ಜಾಗರೂಕರಾಗಿರುವಂತೆ ಭಾರತೀಯ ರಾಯಭಾರಿ ಕಚೇರಿ ಶನಿವಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರಾದೇಶಿಕ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಭಾರತೀಯರು ಎಲ್ಲಾ ಸಮಯದಲ್ಲೂ ಹೆಚ್ಚಿನ ಎಚ್ಚರಿಕೆಯಿಂದಿರಬೇಕು ಮತ್ತು ಜಾಗರೂಕರಾಗಿರಬೇಕು ಎಂದು ಹೇಳಿದೆ.
ಇಸ್ರೇಲಿ ಅಧಿಕಾರಿಗಳು ಮತ್ತು ಅಲ್ಲಿನ 'ಹೋಮ್ ಫ್ರಂಟ್ ಕಮಾಂಡ್' ನೀಡುವ ಸುರಕ್ಷತಾ ನಿಯಮಗಳನ್ನು ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತುರ್ತು ಸಂದರ್ಭಗಳಲ್ಲಿ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಸಾಧ್ಯವಾಗುವಂತೆ ಸನ್ನದ್ಧರಾಗಿರಿ ಎಂದು ಸೂಚಿಸಲಾಗಿದೆ. ಇಸ್ರೇಲ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ನೆಲೆಸಿದ್ದು, ಅವರ ಸುರಕ್ಷತೆಯ ದೃಷ್ಟಿಯಿಂದ ಈ ತುರ್ತು ಎಚ್ಚರಿಕೆಯನ್ನು ಹೊರಡಿಸಲಾಗಿದೆ.

ಸೂಚನೆಗಳೇನು?
ಇಂದು ಮುಂಜಾನೆ ಇಸ್ರೇಲ್ ಪಡೆಗಳು ಇರಾನ್ ಮೇಲೆ ನಡೆಸಿದ 'ಮುನ್ನೆಚ್ಚರಿಕಾ ದಾಳಿ' ಮತ್ತು ಅದಕ್ಕೆ ಪ್ರತಿಯಾಗಿ ಇರಾನ್ ಕ್ಷಿಪಣಿ ದಾಳಿ ನಡೆಸುವ ಸಾಧ್ಯತೆ ಇರುವ ಕಾರಣ, ಇಸ್ರೇಲ್ ಈಗಾಗಲೇ ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಿದೆ. ನಾಗರಿಕರು ಅನಗತ್ಯ ಓಡಾಟವನ್ನು ಕಡಿಮೆ ಮಾಡಲು ಮತ್ತು ಸ್ಥಳೀಯಾಡಳಿತ ಸೂಚಿಸುವ ಬಂಕರ್ ಅಥವಾ ಸುರಕ್ಷಿತ ಸ್ಥಳಗಳ ಬಗ್ಗೆ ಮಾಹಿತಿ ಹೊಂದಿರಲು ಸಲಹೆ ನೀಡಲಾಗಿದೆ.
In view of the prevailing security situation in the region, all Indian nationals in Israel are advised to exercise utmost caution and remain vigilant at all times. Indian nationals are strongly advised to strictly adhere to the safety guidelines and instructions issued by the… pic.twitter.com/xFKQG2doTl
— ANI (@ANI) February 28, 2026
ಈ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಎಲ್ಲಾ ಭಾರತೀಯ ನಾಗರಿಕರು ಅತ್ಯಂತ ಎಚ್ಚರಿಕೆಯಿಂದ ಇರಲು ಮತ್ತು ಎಲ್ಲಾ ಸಮಯದಲ್ಲೂ ಜಾಗರೂಕರಾಗಿರಲು ಸೂಚಿಸಲಾಗಿದೆ. ನಾಗರಿಕರು ಗೊತ್ತುಪಡಿಸಿದ ಆಶ್ರಯ ತಾಣಗಳ (Shelters) ಹತ್ತಿರದಲ್ಲೇ ಇರಬೇಕು ಮತ್ತು ತಮ್ಮ ವಾಸಸ್ಥಳ ಅಥವಾ ಕೆಲಸದ ಸ್ಥಳದ ಸಮೀಪವಿರುವ ಸುರಕ್ಷಿತ ಜಾಗಗಳ ಬಗ್ಗೆ ಮಾಹಿತಿ ಹೊಂದಿರಬೇಕು. ಮುಂದಿನ ಸೂಚನೆಯವರೆಗೆ ಇಸ್ರೇಲ್‌ನೊಳಗೆ ಅನಗತ್ಯ ಮತ್ತು ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಸಲಹೆ ನೀಡಲಾಗಿದೆ. ಸ್ಥಳೀಯ ಸುದ್ದಿ, ಅಧಿಕೃತ ಪ್ರಕಟಣೆಗಳು ಮತ್ತು ತುರ್ತು ಎಚ್ಚರಿಕೆಗಳನ್ನು ನಿಯಮಿತವಾಗಿ ಗಮನಿಸುತ್ತಿರಿ ಎಂದು ಹೇಳಿದೆ.
ತುರ್ತು ಸಹಾಯವಾಣಿ
ಯಾವುದೇ ತುರ್ತು ಸಂದರ್ಭದಲ್ಲಿ, ಭಾರತೀಯ ನಾಗರಿಕರು ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಈ ಕೆಳಗಿನ 24x7 ಸಹಾಯವಾಣಿಯ ಮೂಲಕ ಸಂಪರ್ಕಿಸಬಹುದು. ರಾಯಭಾರ ಕಚೇರಿಯು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯಕ್ಕೆ ಅನುಗುಣವಾಗಿ ಕಾಲಕಾಲಕ್ಕೆ ಹೆಚ್ಚಿನ ಅಪ್‌ಡೇಟ್‌ಗಳನ್ನು ನೀಡಲಿದೆ.
ದೂರವಾಣಿ ಸಂಖ್ಯೆ: +972-54-7520711
ಇಮೇಲ್ ವಿಳಾಸ: [email protected]












Click it and Unblock the Notifications