ಪಾಕಿಸ್ತಾನದಲ್ಲೇ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್
ಇಸ್ಮಮಾಬಾದ್, ಸೆಪ್ಟೆಂಬರ್ 15: ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅಫ್ಘಾನಿಸ್ತಾನದಲ್ಲಿ ಇದ್ದಾನೆ ಎಂದು ತಾಲಿಬಾನಿ ವಕ್ತಾರ ಜಬೀವುಲ್ಲಾ ಮುಜಾಹಿದ್ ನಿರಾಕರಿಸಿದ್ದಾರೆ. ಅವರು ಸದ್ಯ ಪಾಕಿಸ್ತಾನದಲ್ಲಿದ್ದಾರೆ ಎಂದು ಅಫ್ಘಾನಿಸ್ತಾನದ ಸ್ಥಳೀಯ ಮಾಧ್ಯಮ ಟೋಲೋ ನ್ಯೂಸ್ ಹೇಳಿದೆ.
ಜೈಶ್-ಎ-ಮೊಹಮ್ಮದ್ (ಜೆಇಎಂ) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್‌ನನ್ನು ಬಂಧಿಸುವಂತೆ ಪಾಕಿಸ್ತಾನವು ಅಫ್ಘಾನಿಸ್ತಾನಕ್ಕೆ ಪತ್ರ ಬರೆದಿರುವ ಕಾರಣ, ಬೋಲ್ ನ್ಯೂಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಮೌಲಾನಾ ಮಸೂದ್ ಅಜರ್ ಬಹುಶಃ ಅಫ್ಘಾನಿಸ್ತಾನದ ನಂಗರ್‌ಹಾರ್ ಮತ್ತು ಕನ್ಹರ್ ಪ್ರದೇಶಗಳಲ್ಲಿ ಇದ್ದಾನೆ ಎಂದು ಹೇಳಿದೆ.
ಆದಾಗ್ಯೂ, ಪತ್ರಕ್ಕೆ ಪ್ರತಿಕ್ರಿಯಿಸಿದ ಇಸ್ಲಾಮಿಕ್ ಎಮಿರೇಟ್ ವಕ್ತಾರ ಜಬೀವುಲ್ಲಾ ಮುಜಾಹಿದ್, "ಜೈಶ್-ಎ-ಮೊಹಮ್ಮದ್ ಗುಂಪಿನ ನಾಯಕ ಅಫ್ಘಾನಿಸ್ತಾನದಲ್ಲಿ ಇಲ್ಲ. ಇದು ಪಾಕಿಸ್ತಾನದಲ್ಲಿ ಇರಬಹುದಾದ ಸಂಸ್ಥೆಯಾಗಿದ್ದು, ಅವರು ಅಫ್ಘಾನಿಸ್ತಾನದಲ್ಲಿಲ್ಲ. ಇದರ ಬಗ್ಗೆ ನಾವು ಸುದ್ದಿಯಲ್ಲಿ ಕೇಳಿದ್ದು, ಇದು ನಿಜವಲ್ಲ ಎಂಬುದು ನಮ್ಮ ಪ್ರತಿಕ್ರಿಯೆ," ಎಂದು ಉಲ್ಲೇಖಿಸಿದ್ದಾರೆ.

ದಾಖಲೆಗಳಿಲ್ಲದೇ ಆರೋಪ ಸರಿಯಲ್ಲ ಎಂದ ಅಫ್ಘಾನ್:
ಇಂತಹ ಆರೋಪಗಳು ಕಾಬೂಲ್ ಮತ್ತು ಇಸ್ಲಾಮಾಬಾದ್ ನಡುವಿನ ಸಂಬಂಧಗಳ ಮೇಲೆ ಪರಿಣಾಮ ಬೀರಬಹುದು ಎಂದು ತಾಲಿಬಾನ್ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MoFA) ಹೇಳಿದೆ. "ಯಾವುದೇ ಪುರಾವೆ ಮತ್ತು ದಾಖಲೆಗಳ ಕೊರತೆಯಿರುವ ಇಂತಹ ಆರೋಪಗಳಿಂದ ದೂರವಿರಲು ನಾವು ಎಲ್ಲಾ ಪಕ್ಷಗಳಿಗೆ ಕರೆ ನೀಡುತ್ತೇವೆ. ಇಂತಹ ಮಾಧ್ಯಮದ ಆರೋಪಗಳು ದ್ವಿಪಕ್ಷೀಯ ಸಂಬಂಧಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ತಾಲಿಬಾನಿ ವಕ್ತಾರ ಅಬ್ದುಲ್ ಕಹರ್ ಬಾಲ್ಖಿ ಹೇಳಿದ್ದಾರೆ.
ಪ್ಯಾರಿಸ್ ಮೂಲದ ಅಂತರಾಷ್ಟ್ರೀಯ ವಾಚ್‌ಡಾಗ್ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಇಸ್ಲಾಮಾಬಾದ್‌ಗೆ ವಿಶ್ವಸಂಸ್ಥೆಯು ಗೊತ್ತುಪಡಿಸಿದ ಕೆಲವು ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ನಂತರ ಈ ವರದಿ ಬಂದಿದೆ.
ಲಷ್ಕರ್ ಇ ತೋಯ್ಬಾ (ಎಲ್‌ಇಟಿ) ಕಾರ್ಯಾಚರಣೆಯ ಕಮಾಂಡರ್ ಸಾಜಿದ್ ಮಿರ್‌ನ ಮೇಲೆ ಪಾಕಿಸ್ತಾನದ ಇತ್ತೀಚಿನ ಕ್ರಮದ ಬಗ್ಗೆ ಇಲ್ಲಿಯವರೆಗೆ ಸ್ಪಷ್ಟತೆ ಇಲ್ಲ. ಇಂದಿಗೂ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸುತ್ತಲೇ ಇದ್ದು, ಪಾಕಿಸ್ತಾನದ ಮೇಲೆ FATF ನಿರಂತರ ಒತ್ತಡದ ಪರಿಣಾಮವಾಗಿದೆ.
ಪಾಕಿಸ್ತಾನದ ವಾದವೇನು?:
ಅಜರ್ ಪಾಕಿಸ್ತಾನದಲ್ಲಿ ಇಲ್ಲ ಮತ್ತು ಅಫ್ಘಾನಿಸ್ತಾನದಲ್ಲಿ ಇರುವ ಸಾಧ್ಯತೆಯಿದೆ ಎಂದು ಪಾಕಿಸ್ತಾನ ಸಮರ್ಥಿಸುತ್ತದೆ. ಆತನನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ಪಾಕಿಸ್ತಾನದ ಹೇಳಿಕೆಗಳ ಹೊರತಾಗಿಯೂ, ಅವರು ಪಾಕಿಸ್ತಾನದ ಸಾಮಾಜಿಕ ಮಾಧ್ಯಮ ನೆಟ್‌ವರ್ಕ್‌ಗಳಲ್ಲಿ ಜೆಇಎಂ ಕಾರ್ಯಕರ್ತರನ್ನು ಜಿಹಾದ್‌ನಲ್ಲಿ ತೊಡಗಿಸಿಕೊಳ್ಳಲು ಮತ್ತು ಕಾಬೂಲ್‌ನ ತಾಲಿಬಾನ್ ಸ್ವಾಧೀನವನ್ನು ಶ್ಲಾಘಿಸುವ ಲೇಖನಗಳನ್ನು ಪ್ರಕಟಿಸುವುದನ್ನು ಮುಂದುವರೆಸಿದ್ದಾರೆ. ತಾಲಿಬಾನ್ ವಿಜಯವು ಇತರೆಡೆ ಮುಸ್ಲಿಂ ವಿಜಯಗಳಿಗೆ ಮಾರ್ಗಗಳನ್ನು ತೆರೆಯುತ್ತದೆ ಎಂದು ದಕ್ಷಿಣ ಏಷ್ಯಾ ವರದಿ ಮಾಡಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications