ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಮೃತಪಟ್ಟಿಲ್ಲ: ಪಾಕ್ ಮಾಧ್ಯಮ ಸ್ಪಷ್ಟನೆ

|
Google Oneindia Kannada News

ಇಸ್ಲಾಮಾಬಾದ್, ಮಾರ್ಚ್ 4: ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸತ್ತಿಲ್ಲ ಎಂದು ಪಾಕ್ ಮಾಧ್ಯಮ ಸ್ಪಷ್ಟನೆ ನೀಡಿದೆ.

ಮಸೂದ್ ಅಜರ್ ಪಾಕಿಸ್ತಾನದಲ್ಲಿ ನೆಲೆಸಿರುವುದನ್ನು ಪಾಕಿಸ್ತಾನ ಸರ್ಕಾರ ಒಪ್ಪಿಕೊಂಡಿತ್ತು. ರಾವಲ್ಪಿಂಡಿ ಆಸ್ಪತ್ರೆಯಲ್ಲಿದ್ದಾನೆ, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಸಿತ್ತು. ಅದಾದ ಬಳಿಕ ಶನಿವಾರ ಪಾಕ್ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎನ್ನುವ ಸುದ್ದಿ ಹರಿದಾಡಿತ್ತು.

ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲನಾ ಅಜರ್ ಸಾವು? ಜೈಷ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲನಾ ಅಜರ್ ಸಾವು?

ಇದೀಗ ಮಸೂದ್ ಅಜರ್ ಮೃತಪಟ್ಟಿಲ್ಲ ಎಂದು ಪಾಕ್ ಮಾಧ್ಯಮವೊಂದು ಸ್ಪಷ್ಟಪಡಿಸಿದೆ. ಜಿಯೋ ಉರ್ದು ವಾಹಿನಿ ಅಜರ್ ಕುಟುಂಬಸ್ಥರನ್ನು ಸಂಪರ್ಕಿಸಿ ಈ ವರದಿ ಮಾಡಿದೆ. ಆದರೆ ಆತನ ಆರೋಗ್ಯ ಮಾಹಿತಿ ಹೇಗಿದೆ ಎನ್ನುವುದು ತಿಳಿದು ಬಂದಿಲ್ಲ. ಪಾಕಿಸ್ತಾನದ ಸಚಿವ ಫಾವದ್ ಚೌಧರಿ ಅವರಲ್ಲಿ ಈ ವಿಚಾರದ ಬಗ್ಗೆ ಕೇಳಿದಾಗ, ನನಗೆ ಈ ಕ್ಷಣದಲ್ಲಿ ಏನು ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

Jaish-e-Mohammed Chief Masood Azhar Is Not Dead Says Pak Media Report

ಸದ್ಯ ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪಾಕ್ ವಿದೇಶಾಂಗ ಸಚಿವರೇ ಹೇಳಿದ್ದರು. ಅಜರ್ ಸಾವನ್ನಪ್ಪಿದ್ದಾನೆ ಅಥವಾ ಜೀವಂತವಾಗಿದ್ದಾನೆ ಎನ್ನುವ ಬಗ್ಗೆ ಪಾಕಿಸ್ತಾನ ಸರ್ಕಾರ ಯಾವುದೇ ಅಧಿಕೃತ ಮಾಹಿತಿಯನ್ನು ತಿಳಿಸಿಲ್ಲ.

ಬಾಲಕೋಟ್ ಏರ್ ಸ್ಟ್ರೈಕ್ ನಡೆದ ಬಳಿಕ ಹಣಕಾಸು ಸಚಿವ ಅರುಣ್ ಜೇಟ್ಲಿ ಪ್ರತಿಕ್ರಿಯಿಸಿ, ಈಗಿನ ಕಾಲದಲ್ಲಿ ಯಾವುದು ಅಸಾಧ್ಯವಲ್ಲ. ದೂರದ ಅಮೇರಿಕವೇ ಪಾಕ್‌ಗೆ ನುಗ್ಗಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‍ನನ್ನು ಹೊಸಕಿ ಹಾಕಿದೆ. ಇಂತಹ ಕೆಲಸ ನಮ್ಮಿಂದ ಆಗುವುದಿಲ್ಲವೇ? ಎಂದಿದ್ದರು.

English summary
India's most wanted terrorist and Jaish-e-Mohammed chief Masood Azhar is "alive", a Pakistani media report said on Sunday, quoting unnamed sources close to his family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X