ಟೋಕಿಯೋದಲ್ಲಿ ನಡೆಯುವ ಕ್ವಾಡ್ ಸಮ್ಮೇಳನದಲ್ಲಿ ಬೈಡನ್-ಮೋದಿ
ನ್ಯೂಯಾರ್ಕ್, ಏಪ್ರಿಲ್ 28: ಮುಂಬರುವ ಮೇ ತಿಂಗಳಿನಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್ ದಕ್ಷಿಣ ಕೊರಿಯಾ ಮತ್ತು ಜಪಾನ್ ರಾಷ್ಟ್ರಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಜಪಾನಿನ ಟೋಕಿಯೋದಲ್ಲಿ ನಡೆಯಲಿರುವ ಕ್ವಾಡ್ ಸಮ್ಮೇಳನದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಶ್ವೇತ ಭವನ ಹೇಳಿದೆ.
ಮೇ 20 ರಿಂದ 24ರವರೆಗೆ ಜಪಾನ್ ಪ್ರವಾಸದಲ್ಲಿರುವ ಜೋ ಬೈಡನ್, ಕ್ವಾಡ್ ಸಮ್ಮೇಳನದಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.
"ಈ ಪ್ರವಾಸವು ಉಚಿತ ಮತ್ತು ಮುಕ್ತ ಇಂಡೋ-ಪೆಸಿಫಿಕ್ಗೆ ಬೈಡೆನ್-ಹ್ಯಾರಿಸ್ ಆಡಳಿತದ ಬದ್ಧತೆಯನ್ನು ಮುನ್ನಡೆಸುತ್ತದೆ" ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಬುಧವಾರ ಹೇಳಿದ್ದಾರೆ.

ದಕ್ಷಿಣ ಕೊರಿಯಾ, ಜಪಾನ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ:
ದಕ್ಷಿಣ ಕೊರಿಯಾದ ಅಧ್ಯಕ್ಷ ಯುನ್ ಸುಕ್ ಯೋಲ್ ಮತ್ತು ಜಪಾನ್ನ ಪ್ರಧಾನಿ ಕಿಶಿದಾ ಫುಮಿಯೊ ಜೊತೆಗೆ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.
"ನಮ್ಮ ಪ್ರಮುಖ ಭದ್ರತಾ ಸಂಬಂಧಗಳನ್ನು ಮತ್ತಷ್ಟು ಗಾಢಗೊಳಿಸಬೇಕಿದೆ. ಆರ್ಥಿಕ ಸಂಬಂಧಗಳನ್ನು ಹೆಚ್ಚಿಸಲು ಹಾಗೂ ನಿಕಟ ಸಹಕಾರವನ್ನು ವಿಸ್ತರಿಸುವ ಅವಕಾಶಗಳ ಕುರಿತು ನಾಯಕರು ಚರ್ಚಿಸಲಿದ್ದಾರೆ. ಟೋಕಿಯೊದಲ್ಲಿ, ಅಧ್ಯಕ್ಷ ಬೈಡೆನ್, ಆಸ್ಟ್ರೇಲಿಯಾ, ಜಪಾನ್, ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ನ ಕ್ವಾಡ್ ಗುಂಪಿನ ನಾಯಕರು ಪರಸ್ಪರ ಭೇಟಿ ಆಗಲಿದ್ದಾರೆ. ಈ ಪ್ರವಾಸದ ಕುರಿತು ಶೀಘ್ರದಲ್ಲೇ ಹೆಚ್ಚಿನ ವಿವರಗಳನ್ನು ನೀಡಲಾಗುವುದು," ಎಂದು ಪ್ಸಾಕಿ ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications