3ನೇ ಮಹಾಯುದ್ಧಕ್ಕೆ ಮುಹೂರ್ತ ಫಿಕ್ಸ್? ಮ್ಯಾನ್ಮಾರ್ ವಿರುದ್ಧ ಅಮೆರಿಕ ಯುದ್ಧ?
ಇದು ಭಯಾನಕ ಕೃತ್ಯ, ಅತಿರೇಕದ ಘಟನೆ. ನಾಗರಿಕರನ್ನ ಕೊಲೆ ಮಾಡುತ್ತಿರುವ ಮ್ಯಾನ್ಮಾರ್ ಸೇನೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ. ಹೀಗೆ ಕಡು ಕೋಪದಿಂದ ವಾರ್ನಿಂಗ್ ಕೊಟ್ಟವರು ಅಮೆರಿಕ ಅಧ್ಯಕ್ಷ ಜೋ ಬೈಡನ್. ವಾರ್ನಿಂಗ್ ಕೊಟ್ಟಿದ್ದು ಮ್ಯಾನ್ಮಾರ್‌ನಲ್ಲಿ ರಕ್ತದ ಕೋಡಿ ಹರಿಸುತ್ತಿರುವ ಸರ್ವಾಧಿಕಾರಿಗಳಿಗೆ. 1 ತಿಂಗಳಿಂದಲೂ ಮ್ಯಾನ್ಮಾರ್ ಹೊತ್ತಿ ಉರಿಯುತ್ತಿದೆ. ಅಲ್ಲಿ ಜನರನ್ನು ಕೋಳಿಗಳಂತೆ ಕೊಂದು ಹಾಕುತ್ತಿದೆ ಅಲ್ಲಿನ ಸೇನೆ.
ಇದು ಜಗತ್ತನ್ನೇ ರೊಚ್ಚಿಗೇಳುವಂತೆ ಮಾಡಿದೆ. ಹೀಗಿರುವಾಗಲೇ ಅಮೆರಿಕ ಸುಮ್ಮನೆ ಕೂರಲು ಆಗುತ್ತಾ ನೀವೆ ಹೇಳಿ? ನೋ ಚಾನ್ಸ್. ಯಾಕಂದ್ರೆ ವಿಶ್ವದ ಎದುರು ದೊಡ್ಡಣ್ಣ ಎಂದು ಬಿಲ್ಡಪ್ ಕೊಡುವ ಅಮೆರಿಕ ಮ್ಯಾನ್ಮಾರ್ ಸೇನೆ ವಿರುದ್ಧ ಗರಂ ಆಗಿದೆ.
ಅಮೆರಿಕ ಅಧ್ಯಕ್ಷ ಬೈಡನ್ ಮ್ಯಾನ್ಮಾರ್‌ನ ಸೇನಾಧಿಕಾರಿಗಳಿಗೆ ಈ ಮೂಲಕ ಪರೋಕ್ಷ ಯುದ್ಧದ ಎಚ್ಚರಿಕೆ ನೀಡಿದ್ದಾರೆ. ಯಾಂಗೂನ್‌ನ ಅಮೆರಿಕ ರಾಯಭಾರ ಕಚೇರಿ ಮೇಲೂ ಮ್ಯಾನ್ಮಾರ್ ಸೇನೆ ಗುಂಡಿನ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಧಗಧಗಿಸುತ್ತಿರುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

3ನೇ ಮಹಾಯುದ್ಧಕ್ಕೆ ರಣಕಹಳೆ..?
ಜಗತ್ತಿನಲ್ಲಿ ಕಮ್ಯುನಿಸ್ಟ್ ರಾಷ್ಟ್ರಗಳಿಗೂ, ಅಮೆರಿಕದ ನಾಯಕರಿಗೂ ಜಿದ್ದು ಇದ್ದೇ ಇದೆ. ಅದರಲ್ಲೂ ಮಿಲಿಟರಿ ಆಡಳಿತ ಶುರುವಾಯಿತು ಅಂದರೆ ಸಾಕು, ಅಮೆರಿಕ ಏನಾದರೂ ಒಂದು ಕ್ಯಾತೆ ತೆಗೆದು ಅಲ್ಲಿಗೆ ನುಗ್ಗಿಬಿಡುತ್ತೆ ಎಂಬ ಆರೋಪ ಇದೆ. ಹೀಗೆ ಮ್ಯಾನ್ಮಾರ್ ಮೇಲೂ ಅಮೆರಿಕ ಸೇನೆ ದಾಳಿ ನಡೆಸುವ ಮಾತುಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ಅಕಸ್ಮಾತ್ ಹೀಗೆ ದಾಳಿ ನಡೆದಿದ್ದೇ ಆದರೆ ಪರಿಸ್ಥಿತಿ ಭಯಾನಕವಾಗಲಿದೆ. ಮ್ಯಾನ್ಮಾರ್ ಪಕ್ಕದಲ್ಲೇ ಕೂತಿರುವ ಅಮೆರಿಕ ಪಾಲಿನ ಶತ್ರು ಚೀನಾ ತಿರುಗಿ ಬೀಳಬಹುದು. ಆಗ ಈ ಕೋಳಿ ಜಗಳ 3ನೇ ಮಹಾಯುದ್ಧಕ್ಕೆ ಆಹ್ವಾನ ನೀಡಿದಂತೆ ಆಗುತ್ತದೆ. ಏಕೆಂದರೆ ಈ ಮೊದಲು ನಡೆದಿರುವ ಮಹಾಯುದ್ಧಗಳು ಕೂಡ ಕೋಳಿ ಜಗಳದ ರೀತಿಯೇ ಆರಂಭವಾಗಿದ್ದವು ಎನ್ನುವುದನ್ನು ನೆನಪಿಡಬೇಕು.

ಮಿಲಿಟರಿ ಆಡಳಿತ ಶುರು..!
ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ. ಕಂಡ ಕಂಡಲ್ಲಿ ಗುಂಡಿಟ್ಟು ಜನರನ್ನ ಕೊಲೆ ಮಾಡುತ್ತಿದೆ ಮ್ಯಾನ್ಮಾರ್ ಸೇನೆ.

450ಕ್ಕೂ ಹೆಚ್ಚು ಹೋರಾಟಗಾರರು ಬಲಿ..?
ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 450ಕ್ಕೂ ಹೆಚ್ಚು ಜನರನ್ನು ಮ್ಯಾನ್ಮಾರ್ ಸೇನೆ ಬಲಿಪಡೆದಿರುವ ಆರೋಪವಿದೆ. ಹೀಗಾಗಿ ನಾಗರಿಕರನ್ನ ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಆವರಿಸಿದೆ.

ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!
ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್‌ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನ ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್‌ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನ ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೆ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?
ಮ್ಯಾನ್ಮಾರ್‌ನಲ್ಲಿ 2020ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್‌ಎಲ್‌ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications