ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಬೂಲ್ : ಮದುವೆ ಛತ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ, 63 ಸಾವು

|
Google Oneindia Kannada News

ಕಾಬೂಲ್, ಆಗಸ್ಟ್ 18: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮದುವೆ ಛತ್ರವೊಂದರಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ 63ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದು ಆತ್ಮಾಹುತಿ ದಾಳಿ ಎಂದು ದೃಢಪಟ್ಟಿದೆ. ಈ ದುರ್ಘಟನೆಯಲ್ಲಿ 180ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಾಗಿ ಶಿಯಾ ಮುಸ್ಲಿಂ ಪಂಗಡದವರು ವಾಸಿಸುವ ಕಾಬೂಲಿನ ಪಶ್ಚಿಮ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆಗೂ ನಮಗೂ ಸಂಬಂಧವಿಲ್ಲ ಎಂದು ತಾಲಿಬಾನಿ ಉಗ್ರ ಸಂಘಟನೆ ಘೋಷಿಸಿದೆ. ಬೇರೆ ಯಾವುದೇ ಉಗ್ರ ಸಂಘಟನೆಯೂ ಈ ಘಟನೆಯ ಹೊಣೆ ಹೊತ್ತುಕೊಂಡಿಲ್ಲ.

Kabul: 63 killed, 180 injured in blast at wedding hall

ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತ ಶಿಯಾ ಹಜಾರಾ ಪಂಗಡದ ಸುನ್ನಿ ಮುಸ್ಲಿಂ ಬೆಂಬಲಿತ ಉಗ್ರಪಡೆ ಅಗಾಗ ದಾಳಿ ನಡೆಸುತ್ತಲೇ ಇರುತ್ತದೆ. ಇವರಲ್ಲಿ ತಾಲಿಬಾನಿ, ಇಸ್ಲಾಮಿಕ್ ಸ್ಟೇಟ್ ಸಂಘಟನೆಯವರು ಸೇರಿದ್ದಾರೆ.

ಕಳೆದ 10 ದಿನಗಳ ಹಿಂದೆ ಕಾಬೂಲಿನ ಪೊಲೀಸ್ ಠಾಣೆ ಬಳಿ ನಡೆದ ಬಾಂಬ್ ಸ್ಫೋಟದಲ್ಲಿ 14 ಮಂದಿ ಸಾವನ್ನಪ್ಪಿ, 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

English summary
A bomb exploded in a wedding hall, Kabul, Afghanistan, more than 63 people killed and 180 injured.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X