ಡೊನಾಲ್ಡ್ ಟ್ರಂಪ್ ಸೋಲಿಗೆ ಮತ್ತಷ್ಟು ಹತ್ತಿರ? ಕಮಲಾ ಹ್ಯಾರಿಸ್‌ಗೆ ಭರ್ಜರಿ ಬೆಂಬಲ!

ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಖಾಡದಲ್ಲಿ ಭಾರತ ಮೂಲದ ಕಮಲಾ ಹ್ಯಾರಿಸ್ ಈ ಬಾರಿ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದಾರೆ. ಕಮಲಾ ಹ್ಯಾರಿಸ್ ಜಾಗತಿಕ ಮಟ್ಟದಲ್ಲಿ ದೊಡ್ಡ ಹೆಸರು ಗಳಿಸಿರುವ ಮಹಿಳೆ ಮಾತ್ರವಲ್ಲ, ಕಳೆದ 4 ವರ್ಷಗಳಿಂದಲೂ ಅಮೆರಿಕದಲ್ಲಿ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೇ ಕಾರಣಕ್ಕೆ ಡೆಮಾಕ್ರಟಿಕ್ ಪಕ್ಷದ ಎಲ್ಲಾ ನಾಯಕರು ಒಗ್ಗೂಡಿ ಟ್ರಂಪ್ ಸೋಲಿಗೆ ರಣಕಹಳೆ ಮೊಳಗಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಈ ಬಾರಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲಬಾರದು ಎಂಬ ಒನ್‌ಲೈನ್ ಅಜೆಂಡಾ ಇಟ್ಟುಕೊಂಡು, ಡೆಮಾಕ್ರಟಿಕ್ ಪಕ್ಷದ ನಾಯಕರು ಅಖಾಡ ಪ್ರವೇಶ ಮಾಡಿದ್ದಾರೆ. ಇದೇ ಕಾರಣಕ್ಕೆ ಜೋ ಬೈಡನ್ ಅವರನ್ನು ಅಮೆರಿಕ ಅಧ್ಯಕ್ಷೀಯ ಚುನಾವಣೆ ಕಣದಿಂದ ಹಿಂದೆ ಸರಿಯುವಂತೆ ಮಾಡಿದ್ದಾರೆ. ಅಲ್ಲದೆ ಡೊನಾಲ್ಡ್ ಟ್ರಂಪ್ ಎದುರು ಈಗಿನ ಪರಿಸ್ಥಿತಿಗೆ ತಕ್ಕಂತೆ ಸರಿಯಾದ ತಿರುಗೇಟು ನೀಡುವ ಅಭ್ಯರ್ಥಿಯಾಗಿ ಕಮಲ ಹ್ಯಾರಿಸ್ ಅವರನ್ನ ಡೆಮಾಕ್ರಟಿಕ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಕೆಲವು ದಿನಗಳ ಹಿಂದೆಯೇ ಕಮಲಾ ಅವರನ್ನು ಅಭ್ಯರ್ಥಿ ಎಂದು ಆಯ್ಕೆ ಮಾಡಿದ್ದರೂ, ಅಧಿಕೃತ ಘೋಷಣೆ ಇದೀಗ ಆಗಿದೆ.

Kamala Harris Has Been Selected Officially As US Presidential Election Candidate From Democratic

ಡೊನಾಲ್ಡ್ ಟ್ರಂಪ್ ಸೋಲುವುದು ಗ್ಯಾರಂಟಿ?

ಹೌದು, ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಆಯ್ಕೆ ಆಗಿದ್ದಾರೆ. ಕಮಲಾ ಹ್ಯಾರಿಸ್‌ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಕ್ಕೆ ಅಗತ್ಯ ಇರುವಷ್ಟು ಬೆಂಬಲವನ್ನ ಪಡೆದಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆ ಸಂಪ್ರದಾಯದ ಪ್ರಕಾರ, ಚುನಾವಣೆಗೆ ಮೊದಲು ಪಕ್ಷದ ಒಳಗೆ ನಡೆಯುವ ಮತದಾನ ಗೆಲ್ಲಬೇಕು. ಇದೀಗ ಕಮಲಾ ಡೆಮಾಕ್ರಟಿಕ್‌ ಪಕ್ಷದ ಪ್ರತಿನಿಧಿಗಳಿಂದ ಅತಿಹೆಚ್ಚು ಬೆಂಬಲ ಪಡೆದು ಟ್ರಂಪ್‌ಗೆ ಶಾಕ್ ನೀಡಿದ್ದಾರೆ.

59 ವರ್ಷದ ಕಮಲಾ ಹ್ಯಾರಿಸ್!

ಅಮೆರಿಕದ ಎಲ್ಲಾ ರಾಜ್ಯಗಳಿಂದ ವರ್ಚುವಲ್‌ ಅಂದ್ರೆ ವಿಡಿಯೋ ಮೀಟಿಂಗ್ ಮೂಲಕವೇ ನಡೆದ ನಾಮನಿರ್ದೇಶನ ಪ್ರಕ್ರಿಯೆಯಲ್ಲಿ, ಕಮಲಾ ಹ್ಯಾರಿಸ್ ಹೆಚ್ಚಿನ ಮತ ಗಳಿಸಿದ್ದಾರೆ. ಹೀಗೆ ಪಕ್ಷದ ಅಭ್ಯರ್ಥಿಯಾಗುವ ಅರ್ಹತೆ ಪಡೆದಿದ್ದು, ಕಮಲಾ ಹ್ಯಾರಿಸ್ ಆಯ್ಕೆ ಬಗ್ಗೆ ಡೆಮಾಕ್ರಟಿಕ್‌ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜೈಮೆ ಹ್ಯಾರಿಸನ್ ಮಾಹಿತಿ ನೀಡಿದ್ದಾರೆ. 59 ವರ್ಷದ ಕಮಲಾ ಹ್ಯಾರಿಸ್ ಇದೇ ವರ್ಷದ ನವೆಂಬರ್ 5 ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಕುದುರೆ ಆಗಿದ್ದಾರೆ. ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಮಲಾ ಹ್ಯಾರಿಸ್ ಸೆಣೆಸಾಟ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+