US-Elections: ಉತ್ತರ ಕೆರೊಲಿನಾದಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು
ವಾಷಿಂಗ್ಟನ್, ನವೆಂಬರ್ 06: ವಿಶ್ವದಾದ್ಯಂತ ಅಮೆರಿಕದ ಅಧ್ಯಕೀಯ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ. ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಪೈಪೋಟಿ ನಡೆಯುತ್ತಿದೆ. ಭಾರತೀಯ ಕಾಲಮಾನ 11.45ರಂತೆ ಡೊನಾಲ್ಡ್ ಟ್ರಂಪ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಧ್ಯಕೀಯ ಹುದ್ದೆಗೇರಲು ಬೇಕಾದ ಮ್ಯಾಜಿಕ್ ನಂಬರ್ 270 ಆಗಿದೆ.
ವಿವಿಧ ರಾಜ್ಯಗಳಲ್ಲಿ ಗೆಲ್ಲುವ ಮೂಲಕ ಕಮಲಾ ಹ್ಯಾರಿಸ್ ಮತ್ತು ಡೊನಾಲ್ಡ್ ಟ್ರಂಪ್ ತಮ್ಮ ಮತಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸದ್ಯದ ಮಾಹಿತಿಯಂತೆ ಕಮಲಾ ಹ್ಯಾರೀಸ್ 205, ಡೊನಾಲ್ಡ್ ಟ್ರಂಪ್ 230 ಮತಗಳನ್ನು ಪಡೆದಿದ್ದಾರೆ. ಮತದಾನ ಮುಕ್ತಾಯವಾಗುತ್ತ ಸಾಗಿದ್ದು, ಮತ ಎಣಿಕೆಯೂ ಜೊತೆಗೇ ನಡೆಯುತ್ತಿದೆ.

ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಉತ್ತರ ಕೆರೊಲಿನಾದಲ್ಲಿ 16 ಎಲೆಕ್ಟ್ರಾಲ್ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಟ್ರಂಪ್ ಪಾಲಿಗೆ ಉತ್ತರ ಕೆರೊಲಿನಾ ಬಹುದೊಡ್ಡ ಶಕ್ತಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಉತ್ತರ ಕೆರೊಲಿನಾದ ಚುನಾವಣೆ 2020ಕ್ಕಿಂತ 20216ರ ನೆನಪು ಮಾಡಿಕೊಡುತ್ತಿದೆ. ಇನ್ನೂ ಹಲವು ಮತಗಳ ಎಣಿಕೆ ಪ್ರಕ್ರಿಯೆ ಇಲ್ಲಿ ಬಾಕಿ ಇದೆ ಎಂದು ಸಿಎನ್‌ಎನ್‌ನ ಚರಿಸ್ ವ್ಯಾಲೆನ್ಸ್ ಹೇಳಿದ್ದಾರೆ.
ಸಾಮಾನ್ಯವಾಗಿ ಉತ್ತರ ಕೆರೊಲಿನಾದ ಚುನಾವಣೆ ವಿಶ್ಲೇಷಣೆ ಮಾಡಿದಾಗ 2020ಕ್ಕಿಂತ ಹೆಚ್ಚು ಮತಗಳನ್ನು ಡೊನಾಲ್ಡ್ ಟ್ರಂಪ್ ಪಡೆಯಲಿದ್ದಾರೆ. ಕಮಲಾ ಹ್ಯಾರೀಸ್ 2020ಕ್ಕಿಂತ ಕಡಿಮೆ ಮತಗಳನ್ನು ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಅಮೆರಿಕದ ಅಧ್ಯಕೀಯ ಚುನಾವಣೆಯಲ್ಲಿ ಏಳು ರಾಜ್ಯಗಳು ಪ್ರಮುಖವಾದವು ಎಂದು ಅಂದಾಜಿಸಲಾಗಿದೆ. ಇದರಲ್ಲಿ 6 ರಾಜ್ಯಗಳಲ್ಲಿ ಕಮಲಾ ಹ್ಯಾರೀಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಉತ್ತರ ಕೆರೊಲಿನಾದಲ್ಲಿ ಟ್ರಂಪ್ ಗೆಲುವು ಸಾಧಿಸಿದ್ದಾರೆ.
ಅಮೆರಿಕದ ಹಾಲಿ ಉಪಾಧ್ಯಕ್ಷೆ ಆಗಿರುವ ಕಮಲಾ ಹ್ಯಾರೀಸ್ ಪೆನ್ಸಿಲ್ವೇನಿಯಾ, ಅರಿಜೋನಾ, ಜಾರ್ಜಿಯಾ, ಮಿಷಿಗನ್, ವಿಸ್ಕಾನ್‌ಸ್ಕಿನ್ ಮತ್ತು ನೆವಾಡದಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಮೆರಿಕದ ಚುನಾವಣೆಯಲ್ಲಿ 7 ರಾಜ್ಯದ ಮತದಾರರು ನಿರ್ಣಾಯಕ ಎಂದು ಪರಿಗಣಿಸಲಾಗುತ್ತದೆ. ಉಳಿದ ರಾಜ್ಯಗಳ ಮತದಾರರು ಪ್ರತಿ ಚುನಾವಣೆಯಲ್ಲಿಯೂ ಒಂದೇ ಪಕ್ಷವನ್ನು ಬೆಂಬಿಲಿಸುತ್ತಾ ಬರುತ್ತಿದ್ದಾರೆ.
ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕೆರೊಲಿನಾ ನಿರ್ಣಾಯಕ ಎಂದು ಪರಿಗಣಿಸಲಾಗಿತ್ತು. ಈಗ ರಾಜ್ಯದಲ್ಲಿ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಉಳಿದ 6 ರಾಜ್ಯಗಳಲ್ಲಿ ಕಮಲಾ ಮುನ್ನಡೆ ಪಡೆದುಕೊಂಡಿದ್ದಾರೆ.
ಅಮೆರಿಕದ ಅಧ್ಯಕೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಮುನ್ನಡೆ ಪಡೆಯುತ್ತಿದ್ದಂತೆಯೇ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮಾಡಬೇಕಿದ್ದ ಭಾಷಣ ರದ್ದುಗೊಳಿಸಿದ್ದಾರೆ. ಹಾರ್ವರ್ಡ್ ವಿವಿಯ ಅಲ್ಮಾ ಮಥರ್‌ನಲ್ಲಿ ಅವರು ಭಾಷಣ ಮಾಡಬೇಕಿತ್ತು. ಫಲಿತಾಂಶ ಪ್ರಕಟವಾದ ಬಳಿಕ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಫ್ಲೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲಾನ್ ಮಸ್ಕ್ ಸಹ ಟ್ರಂಪ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇದೆ.
ಅಮೆರಿಕದ ಮಾಜಿ ಅಧ್ಯಕ್ಷರೂ ಆಗಿರುವ ರಿಪಬ್ಲಿಕನ್ ಪಕ್ಷದ 74 ವರ್ಷದ ಡೊನಾಲ್ಡ್ ಟ್ರಂಪ್ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. 50 ರಾಜ್ಯಗಳ, 538 ಜನಪ್ರತಿನಿಧಿಗಳು ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ.












Click it and Unblock the Notifications