ಲಂಡನ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಮೇಲೆ ದಾಳಿಗೆ ಯತ್ನ

ಲಂಡನ್ ಮಾರ್ಚ್ 6: ಬ್ರಿಟನ್ ಪ್ರವಾಸದಲ್ಲಿದ್ದ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮೇಲೆ ಗುರುವಾರ ಲಂಡನ್‌ನಲ್ಲಿ ಖಲಿಸ್ತಾನಿ ಉಗ್ರರು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಜೈಶಂಕರ್ ಅವರು ತಮ್ಮ ಕಾರಿನಲ್ಲಿ ಹೊರಡುತ್ತಿದ್ದಾಗ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಾಥಮ್ ಹೌಸ್ ಕಾರ್ಯಕ್ರಮವನ್ನು ಮುಗಿಸಿಕೊಂಡು ಕಾರಿನಲ್ಲಿ ಜೈಶಂಕರ್ ಅವರು ಹೊರಡುವಾಗ ವ್ಯಕ್ತಿಯೊಬ್ಬ ಅವರ ಕಾರಿನ ಕಡೆಗೆ ಓಡಿಹೋಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದು ಕಂಡುಬಂದಿದೆ. ತಕ್ಷಣ ಲಂಡನ್ ಪೊಲೀಸರು ಈ ವ್ಯಕ್ತಿಯನ್ನು ಹಿಡಿದು ಜೈಶಂಕರ್ ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಕಳುಹಿಸಿದ್ದಾರೆ.

khalistani militants attempt to attack india minister s jaishankar in london

'ವಿಶ್ವದ ಅಭಿವೃದ್ಧಿಯಲ್ಲಿ ಭಾರತದ ಪಾತ್ರ' ಎಂಬ ವಿಷಯದ ಕುರಿತು ಸಂವಾದ ಅಧಿವೇಶನದಲ್ಲಿ ಭಾಗವಹಿಸಲು ಜೈಶಂಕರ್ ಲಂಡನ್‌ನ ಚಾಥಮ್ ಹೌಸ್ ಚಿಂತಕರ ಚಾವಡಿಗೆ ತೆರಳಿದ್ದರು. ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ತಮ್ಮ ಕಾರಿನಲ್ಲಿ ಹಿಂತಿರುಗುತ್ತಿದ್ದರು.

ಇದೇ ವೇಳೆ ರಸ್ತೆಬದಿಯಲ್ಲಿ ಜಮಾಯಿಸಿದ ಖಲಿಸ್ತಾನಿ ಉಗ್ರರು ಭಾರತ ವಿರೋಧಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದಾರೆ. ಜೈಶಂಕರ್ ಕಾರಿನಲ್ಲಿ ಕುಳಿತಿದ್ದಾಗ ಒಬ್ಬ ವ್ಯಕ್ತಿ ಅವರ ಕಾರಿನ ಕಡೆಗೆ ಓಡಿ ಬಂದು ಘೋಷಣೆಗಳನ್ನು ಕೂಗುತ್ತಾ ಕಾರಿನ ಮುಂದೆ ಇದ್ದ ಭಾರತೀಯ ಧ್ವಜವನ್ನು ಹರಿದು ಹಾಕಿದ್ದಾನೆ. ವಿಡಿಯೊದಲ್ಲಿ ಖಲಿಸ್ತಾನಿ ಪರ ಪ್ರತಿಭಟನಾಕಾರರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿರುವುದು ಕೇಳಿ ಬಂದಿದೆ.

ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ

ಈ ಘಟನೆಯ ಕುರಿತು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್ ಈ ರೀತಿ ಹೇಳಿದ್ದಾರೆ- 'ವಿದೇಶಾಂಗ ಸಚಿವರ ಬ್ರಿಟನ್ ಭೇಟಿಯ ಸಮಯದಲ್ಲಿ ಭದ್ರತಾ ಉಲ್ಲಂಘನೆಯ ದೃಶ್ಯಗಳನ್ನು ನಾವು ನೋಡಿದ್ದೇವೆ. ಪ್ರತ್ಯೇಕತಾವಾದಿಗಳು ಮತ್ತು ಉಗ್ರಗಾಮಿಗಳ ಈ ಸಣ್ಣ ಗುಂಪಿನ ಪ್ರಚೋದನಕಾರಿ ಚಟುವಟಿಕೆಗಳನ್ನು ನಾವು ಖಂಡಿಸುತ್ತೇವೆ. ಆ ಶಕ್ತಿಗಳ ಪ್ರಜಾಸತ್ತಾತ್ಮಕ ಸ್ವಾತಂತ್ರ್ಯದ ದುರುಪಯೋಗವನ್ನು ನಾವು ಖಂಡಿಸುತ್ತೇವೆ. ಯುಕೆ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನಾವು ಭಾವಿಸುತ್ತೇವೆ' ಎಂದಿದ್ದಾರೆ.

ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಂಗಳವಾರದಿಂದ ಆರು ದಿನಗಳ ಬ್ರಿಟನ್ ಮತ್ತು ಐರ್ಲೆಂಡ್ ಪ್ರವಾಸದಲ್ಲಿದ್ದಾರೆ. ಜೈಶಂಕರ್ ಅವರು ತಮ್ಮ ಪ್ರವಾಸದ ಆರಂಭದಲ್ಲಿ ಮೊದಲು ಲಂಡನ್ ಗೆ ಭೇಟಿ ನೀಡಿದ್ದರು. ಈ ವೇಳೆ ವಿದೇಶಾಂಗ ಸಚಿವ ಜೈಶಂಕರ್ ಅವರು ಲಂಡನ್‌ನಲ್ಲಿ ಪ್ರಧಾನಿ ಕೀರ್ ಸ್ಟಾರ್ಮರ್ ಮತ್ತು ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಬಂಧಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ಚರ್ಚಿಸಿದರು.

ಜೈಶಂಕರ್ ಅವರ ಭೇಟಿಯ ಕುರಿತು ತನ್ನ ಹೇಳಿಕೆಯಲ್ಲಿ ವಿದೇಶಾಂಗ ಸಚಿವಾಲಯ, ಈ ಭೇಟಿಯು ಎರಡೂ ದೇಶಗಳೊಂದಿಗೆ ಭಾರತದ ಸ್ನೇಹ ಸಂಬಂಧವನ್ನು ಪುನಃ ಸ್ಥಾಪಿಸುತ್ತದೆ ಎಂದು ಹೇಳಿದೆ. ಭಾರತ ಮತ್ತು ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿದ್ದು, ಇದು ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಆರ್ಥಿಕತೆ, ಆರೋಗ್ಯ, ಶಿಕ್ಷಣ, ಜನರಿಂದ ಜನರಿಗೆ ಸಂಬಂಧಗಳು ಸೇರಿದಂತೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಬಲಗೊಂಡಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+