ಪಾಕಿಸ್ತಾನ ಮಿಲಿಟರಿ ಕೋರ್ಟ್ ನಲ್ಲಿ ಕುಲಭೂಷಣ್ ಜಾಧವ್ ಗೆ ಮರಣದಂಡನೆ

Posted By:
Subscribe to Oneindia Kannada

ಇಸ್ಲಾಮಾಬಾದ್, ಏಪ್ರಿಲ್ 10: ಭಾರತದ ಗೂಢಚಾರ ಎಂಬ ಆರೋಪದ ಮೇಲೆ ಬಂಧಿಸಲಾಗಿದ್ದ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಸೋಮವಾರ ಮರಣದಂಡನೆ ವಿಧಿಸಿದೆ. ಕರಾಚಿ ಹಾಗೂ ಬಲೂಚಿಸ್ತಾನದಲ್ಲಿ ಗೂಢಚರ್ಯೆ, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿದ ಆರೋಪದಲ್ಲಿ ಜಾಧವ್ ನನ್ನು ಮಾರ್ಚ್ 11, 2016ರಲ್ಲಿ ಬಲೂಚಿಸ್ತಾನದ ಮಶ್ಕೆಲ್ ಪ್ರದೇಶದಲ್ಲಿ ಬಂಧಿಸಲಾಗಿತ್ತು.

ಕುಲಭೂಷಣ್ ರನ್ನು ಪಾಕಿಸ್ತಾನ ಸೇನಾ ಕಾಯ್ದೆ ಅಡಿಯಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಿಯಲ್ ವಿಚಾರಣೆ ನಡೆಸಿ, ಮರಣದಂಡನೆ ವಿಧಿಸಲಾಗಿದೆ. ಈ ವಿಚಾರವನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಟ ಜನರಲ್ ಖಮರ್ ಜಾವೇದ್ ಬಾಜ್ವಾ ಖಾತ್ರಿ ಪಡಿಸಿದ್ದಾರೆ. ತಜ್ಞರ ಪ್ರಕಾರ, ಜಾಧವ್ ವಿಚಾರಣೆ ಹಾಗೂ ಶಿಕ್ಷೆ ಕ್ರಮವು ಭಾರತ ಸೇರಿದಂತೆ ಇತರೆ ರಾಷ್ಟ್ರಗಳ ಪಾಲಿಗೆ ಬಲವಾದ ಸಂದೇಶ ರವಾನಿಸಿದಂತಾಗಿದೆ.[ಕಾಶ್ಮೀರದ ಪ್ರತ್ಯೇಕತಾವಾದಿಗಳಿಗೆ 800 ಕೋಟಿ ರು ಸುಪಾರಿ!]

Khulbhushan Yadav sentenced to death in Pakistan

ಫೀಲ್ಡ್ ಜನರಲ್ ಕೋರ್ಟ್ ಮಾರ್ಷಿಯಲ್ (FGCM) ಸೆಕ್ಷನ್ 59 ಪಾಕಿಸ್ತಾನ ಸೇನಾ ಕಾಯ್ದೆ ಹಾಗೂ ಸೆಕ್ಷನ್ 3 ಅಧಿಕೃತ ರಹಸ್ಯ ಕಾಯ್ದೆ 1923ರ ಅಡಿಯಲ್ಲಿ ವಿಚಾರಣೆ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನ್ಯಾಯಾಧೀಶರು ಹಾಗೂ ಕೋರ್ಟ್ ಮುಂದೆ ಜಾಧವ್ ತಪ್ಪೊಪ್ಪಿಕೊಂಡಿದ್ದು, ಭಾರತದ ಗೂಢಚಾರ ಸಂಸ್ಥೆ 'ರಾ' ತನ್ನನ್ನು ನೇಮಿಸಿತ್ತು. ಗೂಢಚರ್ಯೆ ಹಾಗೂ ವಿಧ್ವಂಸಕ ಕೃತ್ಯ ಎಸಗುವುದಕ್ಕೆ ಸೂಚಿಸಿತ್ತು ಎಂದು ಒಪ್ಪಿಕೊಂಡಿರುವುದಾಗಿ ಡಾನ್ ಪತ್ರಿಕೆಯಲ್ಲಿ ವರದಿಯಾಗಿದೆ.

ಪಾಕಿಸ್ತಾನದ ಕಾನೂನಿನ ಪ್ರಕಾರ ಆರೋಪಿ ಕುಲಭೂಷಣ್ ಗೆ ಕಾನೂನು ನೆರವು ನೀಡಲಾಗಿತ್ತು ಎಂದು ತಿಳಿಸಲಾಗಿದೆ. ಚೀನಾ-ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಯೋಜನೆ, ಅದರಲ್ಲೂ ವಿಶೇಷವಾಗಿ ಗ್ವದಾರ್ ಬಂದರನ್ನು ಗುರಿಯಾಗಿಸಿಕೊಳ್ಳಲಾಗಿತ್ತು. ಆದರೆ ಪಾಕಿಸ್ತಾನದಲ್ಲಿ ಭಾರತದ ಕೈವಾಡ ಇರುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಬಾಜ್ವಾ ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kulbhushan Jhadhav who was accused by Pakistan of being spy has been sentenced to death. He was arrested in Balochistan in 2016 on charges of spying on Pakistan, a charge that India had vehemently denied.
Please Wait while comments are loading...