ಲಂಡನ್ : ಚಾಕುವಿನಿಂದ ಹಲ್ಲೆ, ಮಹಿಳೆ ಸಾವು

Posted By:
Subscribe to Oneindia Kannada

ಲಂಡನ್, ಆಗಸ್ಟ್ 04: ಇಲ್ಲಿನ ರಸಲ್ ಚೌಕದಲ್ಲಿ ಬುಧವಾರ ರಾತ್ರಿ ದುಷ್ಕರ್ವಿುಯೊಬ್ಬ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, 5 ಜನರು ಗಾಯಗೊಂಡಿದ್ದಾರೆ.

ಬುಧವಾರ ರಾತ್ರಿ 10.30 (BST) ರ ಸುಮಾರಿಗೆ 19 ವರ್ಷದ ದುಷ್ಕರ್ವಿು ಚಾಕು ಹಿಡಿದು ದಾಳಿ ನಡೆಸಿದ್ದಾನೆ. . ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.ಮೃತಪಟ್ಟ ಮಹಿಳೆ 60 ವರ್ಷ ಆಸುಪಾಸಿನವರು ಎಂದು ತಿಳಿದು ಬಂದಿದೆ

ದಾಳಿ ನಡೆದ ಸ್ಥಳಕ್ಕೆ ಸಮೀಪದಲ್ಲೇ ಬ್ರಿಟಿಷ್ ಮ್ಯೂಸಿಯಂ ಮತ್ತು ಲಂಡನ್ ವಿಶ್ವವಿದ್ಯಾಲಯವಿದೆ. ಜತೆಗೆ ಇದು ಪ್ರವಾಸಿಗರು ಹೆಚ್ಚಾಗಿ ಓಡಾಡುವ ಜಾಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

London stabbings: One dead, five hurt in knife attack

ದಾಳಿ ಮಾಡಿದ ಯುವಕನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ತಿಳಿದು ಬಂದಿದ್ದು, ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ದಾಳಿಯಲ್ಲಿ ಗಾಯಗೊಂಡ ಆರು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿಕೋರನ ಕುರಿತು ಪೂರ್ಣ ಮಾಹಿತಿ ಲಭ್ಯವಾಗಿಲ್ಲ.

ಇದೊಂದು ಭಯೋತ್ಪಾದಕ ದಾಳಿ ಸಹ ಇರಬಹುದು. ತನಿಖೆ ನಡೆಸಲಾಗುತ್ತಿದೆ. ದುಷ್ಕರ್ವಿು ಮಾನಸಿಕ ಅಸ್ವಸ್ಥ ಸಹ ಆಗಿರಬಹುದು, ಈ ನಿಟ್ಟಿನಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
A woman has died and five other people were injured in a knife attack in Russell Square, central London.
Please Wait while comments are loading...