ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಂದಿನಿಂದ ಜಾಧವ್ ಮರು ವಿಚಾರಣೆ
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಅವರ ವಿಚಾರಣೆ ಆರಂಭ. ಪಾಕಿಸ್ತಾನ ಮಿಲಿಟರಿ ಕೋರ್ಟ್ ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಜಾಧವ್. ಪಾಕಿಸ್ತಾನದಲ್ಲಿ ಭಾರತದ ಪರವಾಗಿ ಗೂಢಚರ್ಯೆ ನಡೆಸಿದ ಆರೋಪ ಹೊತ್ತಿರುವ ಜಾಧವ್.
Recommended Video

ಹೇಗ್ (ಹಾಲೆಂಡ್), ಸೆಪ್ಟೆಂಬರ್ 13: ಪಾಕಿಸ್ತಾನ ಸೇನಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಕುರಿತಾದ ವಿಚಾರಣೆಯು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 13ರಿಂದ ಪುನರಾರಂಭವಾಗಲಿದೆ.
ಪಾಕಿಸ್ತಾನದಲ್ಲಿ ಗೂಢಚರ್ಯೆ ನಡೆಸಿರುವ ಆರೋಪದ ಮೇರೆಗೆ ಪಾಕಿಸ್ತಾನದ ಸೇನಾ ನ್ಯಾಯಾಲಯವು ಇದೇ ವರ್ಷ ಏಪ್ರಿಲ್ 10ರಂದು ಜಾಧವ್ ಗೆ ಮರಣ ದಂಡನೆಯನ್ನು ವಿಧಿಸಿತ್ತು. ಇದರ ಬೆನ್ನಲ್ಲೇ ಭಾರತ ಸರ್ಕಾರ, ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ಮೆಟ್ಟಿಲೇರಿತ್ತು.

ಇದರ ವಿಚಾರಣೆ ನಡೆಸಿದ್ದ ಐಸಿಜೆ, ಮೇ 18ರಂದು ಜಾಧವ್ ಅವರ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿತಲ್ಲದೆ, ಸೆಪ್ಟೆಂಬರ್ 13ರಿಂದ ಈ ಪ್ರಕರಣದ ವಿಚಾರಣೆಯನ್ನು ಆರಂಭಿಸುವುದಾಗಿ ತಿಳಿಸಿತ್ತು.
ಇದೀಗ, ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿಯು ಜಾಧವ್ ಅವರನ್ನು ಮರಳಿ ಭಾರತಕ್ಕೆ ಕರೆತರುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಲಿದೆ ಎಂಬ ಆಶಾವಾದ ವ್ಯಕ್ತಪಡಿಸಿದೆ.
ನವದೆಹಲಿಯಲ್ಲಿ ಬುಧವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಹಿರಿಯ ನಾಯಕ ಎಸ್. ಪ್ರಕಾಶ್, ''ಕುಲಭೂಷಣ್ ಜಾಧವ್ ಅವರಿಗೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ. ಜಾಧವ್ ಅವರನ್ನು ಭಾರತಕ್ಕೆ ಕರೆ ತರುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಲಿದೆ'' ಎಂದು ಅದು ತಿಳಿಸಿದೆ.












Click it and Unblock the Notifications