Get Updates
Get notified of breaking news, exclusive insights, and must-see stories!

ಪೂರ್ವ ಲಡಾಖ್‌ನ ಗೋಗ್ರಾದಿಂದ ಹಿಂದೆ ಸರಿಯಲು ಭಾರತ-ಚೀನಾ ಸಮ್ಮತಿ

ನವದೆಹಲಿ, ಆಗಸ್ಟ್ 6: ಭಾರತ ಮತ್ತು ಚೀನಾ ನಡುವೆ ಶನಿವಾರ ನಡೆದ 12ನೇ ಕಾರ್ಪ್ ಕಮಾಂಡರ್ ಸಭೆಯ ನಂತರದಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಲಡಾಖ್‌ನ ಗೋಗ್ರಾ ಪ್ರದೇಶದಿಂದ ಸೇನೆಯನ್ನು ಹಿಂಪಡೆದುಕೊಳ್ಳಲು ಒಪ್ಪಿಕೊಳ್ಳಲಾಗಿದ್ದು, ಈ ಪ್ರದೇಶದಲ್ಲಿ ಹೊಸ ಗಡಿ ನಿಯಂತ್ರಣ ರೇಖೆಯನ್ನು ಮರುಸ್ಥಾಪಿಸಲಾಗಿದೆ ಎಂದು ಸರ್ಕಾರವು ಶುಕ್ರವಾರ ಹೇಳಿದೆ.

ಉಭಯ ರಾಷ್ಟ್ರಗಳ ಸೇನಾ ಕಮಾಂಡರ್ ಸಭೆ ನಂತರದ ಸೋಮವಾರ ಜಂಟಿ ಸುದ್ದಿಗೋಷ್ಠಿ ನಡೆಸಲಾಯಿತು. "ಭಾರತ-ಚೀನಾ ಗಡಿ ಪ್ರದೇಶಗಳಲ್ಲಿ ಪಶ್ಚಿಮ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಸೇನೆ ನಿಷ್ಕ್ರಿಯಗೊಳಿಸುವ ನಿಟ್ಟಿನಲ್ಲಿ ಉಭಯ ಸೇನಾ ಪಡೆಗಳು ಪರಸ್ಪರ ವಿಷಯ ವಿನಿಮಯ ಮಾಡಿಕೊಂಡಿವೆ," ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಲಾಗಿದೆ. ಈ ಸುತ್ತಿನ ಮಾತುಕತೆಯಲ್ಲಿ ಉಭಯ ಸೇನಾಪಡೆಗಳು ಪರಸ್ಪರ ಹೊಂದಾಣಿಯನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ರಚನಾತ್ಮಕ ಅಂಶಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದರು.

ಇದರ ಬೆನ್ನಲ್ಲೇ ಗಡಿಯಲ್ಲಿ ಸ್ಥಾಪಿಸಲಾಗಿದ್ದ ಎಲ್ಲಾ ತಾತ್ಕಾಲಿಕ ಸೇನಾ ಶಿಬಿರಗಳನ್ನು ಅಲ್ಲಿಂದ ತೆರವುಗೊಳಿಸಲಾಗಿದೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಆ ಮೂಲಕ ಕಳೆದ ವರ್ಷದ ಆರಂಭದಲ್ಲಿ ತೀವ್ರಗೊಂಡಿದ್ದ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ನಡೆಸಿದ 12ನೇ ಕಾರ್ಪ್ ಕಮಾಂಡರ್ ಸಭೆ ನಂತರದಲ್ಲಿ ಆಗಿರುವ ಪ್ರಮುಖ ಬೆಳವಣಿಗೆಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

 Ladakh standoff: India, China agree to disengage troops from Gogra in Eastern Ladakh

12ನೇ ಕಾರ್ಪ್ ಕಮಾಂಡರ್ ಸಭೆ ನಂತರದ ಪ್ರಮುಖ ನಿರ್ಧಾರಗಳು:

* ಚೀನಾದ ಗಡಿರೇಖೆಗೆ ಹೊಂದಿಕೊಂಡಂತೆ ಮಾಲ್ಡೋ ಪ್ರದೇಶದಲ್ಲಿ ಜುಲೈ 31ರ 2021ರಂದು ಬೆಳಗ್ಗೆ 10.30ಕ್ಕೆ ಭಾರತ ಮತ್ತು ಚೀನಾದ ಹಿರಿಯ ಕಮಾಂಡರ್ ಹಂತದ ಸಭೆ ನಡೆಸಿದ್ದು, ಸುಮಾರು 9 ಗಂಟೆಗಳವರೆಗೂ ಚರ್ಚೆ ನಡೆಸಲಾಯಿತು.

* ಭಾರತ ಚೀನಾದ ಪಶ್ಚಿಮ ಗಡಿಗೆ ಹೊಂದಿಕೊಂಡಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸೇನೆ ನಿಷ್ಕ್ರಿಯಗೊಳಿಸುವ ಬಗ್ಗೆ ಉಭಯ ಸೇನಾ ಮುಖಂಡರು ವಿಚಾರ ವಿನಿಮಯ ಮಾಡಿಕೊಂಡಿದ್ದರು. ಈ ಸಭೆಯ ನಂತರದಲ್ಲಿ ಗೋಗ್ರಾ ಪ್ರದೇಶದ ಎರಡೂ ಕಡೆಗಳಲ್ಲಿ ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ಬಗ್ಗೆ ಒಮ್ಮತ ಅಭಿಪ್ರಾಯ ವ್ಯಕ್ತವಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಇದೇ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಯ ಯೋಧರು ಮುಖಾಮುಖಿಯಾಗಿದ್ದರು.

* ಒಪ್ಪಂದದ ಪ್ರಕಾರ, ಎರಡೂ ಕಡೆಯವರು ಈ ಪ್ರದೇಶದಲ್ಲಿ ಹಂತ ಹಂತವಾಗಿ, ಸಮನ್ವಯ ಮತ್ತು ಪರಿಶೀಲಿಸಿದ ರೀತಿಯಲ್ಲಿ ಸೇನಾಪಡೆಯನ್ನು ಮುಂದೆ ನಿಯೋಜಿಸುವುದನ್ನು ಬಿಟ್ಟಿದ್ದಾರೆ. ಆಗಸ್ಟ್ 4 ಮತ್ತು ಆಗಸ್ಟ್ 5ರಂದು ಉಭಯ ರಾಷ್ಟ್ರಗಳು ತಮ್ಮ ಸೇನಾ ಪಡೆಗಳನ್ನು ವಾಪಸ್ ಪಡೆದುಕೊಂಡಿದ್ದು, ಎರಡೂ ಕಡೆಯ ಯೋಧರು ಇದೀಗ ತಮ್ಮ ಶಾಶ್ವತ ನೆಲೆಗಳಲ್ಲಿವೆ.

* ಈ ಪ್ರದೇಶದಲ್ಲಿ ರಚಿಸಲಾದ ಎಲ್ಲಾ ತಾತ್ಕಾಲಿಕ ಶಿಬಿರಗಳನ್ನು ಮತ್ತು ಇತರ ಸಂಬಂಧಿತ ಮೂಲಸೌಕರ್ಯಗಳನ್ನು ಪರಸ್ಪರ ಪರಿಶೀಲಿಸಲಾಗಿ ನಂತರ ತೆಗೆದು ಹಾಕಲಾಗಿದೆ. ಎರಡೂ ಕಡೆಯ ಭೂ ಸ್ವರೂಪವನ್ನು ಮೊದಲಿನ ಪ್ರದೇಶಗಳಲ್ಲಿ ಮರುಸ್ಥಾಪಿಸಲಾಗಿದೆ.

* ಈ ಒಪ್ಪಂದದ ಪ್ರಕಾರ, ಈ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯನ್ನು ಎರಡೂ ಕಡೆಯಿಂದ ಕಟ್ಟುನಿಟ್ಟಾಗಿ ಗಮನಿಸಲಾಗುವುದು. ಉಭಯ ರಾಷ್ಟ್ರಗಳು ಗಡಿಯನ್ನು ಪರಸ್ಪರ ಗೌರವಿಸುತ್ತದೆ ಮತ್ತು ಯಥಾಸ್ಥಿತಿಯಲ್ಲಿ ಏಕಪಕ್ಷೀಯ ಬದಲಾವಣೆ ಇರುವುದಿಲ್ಲ ಎಂದು ಖಚಿತಪಡಿಸಲಾಗಿದೆ.

* ಈ ಒಪ್ಪಂದದ ಮೂಲಕ ಮುಖಾಮುಖಿಯ ಸೂಕ್ಷ್ಮ ಪ್ರದೇಶದ ಸಮಸ್ಯೆಯೊಂದನ್ನು ಇತ್ಯರ್ಥಪಡಿಸಲಾಗಿದೆ. ಪಶ್ಚಿಮ ವಲಯದ ಎಲ್‌ಎಸಿಯಲ್ಲಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಎರಡೂ ಕಡೆಯಿಂದ ಮಾತುಕತೆ ಮುಂದುವರಿಸಲು ಬದ್ಧತೆ ತೋರಿದ್ದಾರೆ.

* ಐಟಿಬಿಪಿಯೊಂದಿಗೆ ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪಶ್ಚಿಮ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಶಾಂತಿ ಮತ್ತು ಸಮಾನತೆಯನ್ನು ಕಾಪಾಡಿಕೊಳ್ಳಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಉಲ್ಲೇಖಿಸಲಾಗಿದೆ.

9 ಗಂಟೆಗಳವರೆಗೂ ನಡೆದ ಸಭೆ:

ಚೀನಾದ ಗಡಿರೇಖೆಗೆ ಹೊಂದಿಕೊಂಡಂತೆ ಮಾಲ್ಡೋ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 10.30ಕ್ಕೆ ಭಾರತ ಮತ್ತು ಚೀನಾದ ಹಿರಿಯ ಕಮಾಂಡರ್ ಹಂತದ ಸಭೆ ಶುರುವಾಗಿದ್ದು, ಸುಮಾರು 9 ಗಂಟೆಗಳವರೆಗೂ ಚರ್ಚೆ ನಡೆಸಲಾಯಿತು. ಈ ವೇಳೆ ಹಿರಿಯ ಅಧಿಕಾರಿಗಳು ಪೂರ್ವ ಲಡಾಖ್ ಭಾಗದ ವಿವಾದಿತ ಹಾಟ್ ಸ್ಪ್ರಿಂಗ್ಸ್ ಮತ್ತು ಗೋಗ್ರಾ ಹೈಟ್ಸ್ ಪ್ರದೇಶಗಳಲ್ಲಿ ಸೇನಾ ನಿಷ್ಕ್ರಿಯಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.

ಉಭಯ ರಾಷ್ಟ್ರಗಳು ಪರಸ್ಪರ ಭದ್ರತಾ ಕಾಳಜಿಯಿಂದಾಗಿ ಎರಡೂ ಕಡೆಗಳ ಸೇನೆಗಳು ಸರಿಸಮನಾಗಿ ವಾಪಸ್ ತೆಗೆದುಕೊಳ್ಳುವ ಬಗ್ಗೆ ಭಾರತೀಯ ಸೇನೆ ಉಲ್ಲೇಖಿಸಿದೆ. ಗಡಿ ಪ್ರದೇಶದ ಎತ್ತರದ ಸ್ಥಳಗಳಿಂದ ಸೇನೆಯನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಭಾರತ ಸಿದ್ಧವಿದೆ, ಆದರೆ ಚೀನಾ ಕೂಡ ಅಷ್ಟೇ ಸಂಖ್ಯೆಯ ಸೇನೆಯನ್ನು ಅಲ್ಲಿಂದ ವಾಪಸ್ ತೆಗೆದುಕೊಳ್ಳಬೇಕು ಎಂದು ಭಾರತೀಯ ಸೇನೆಯು ಷರತ್ತು ವಿಧಿಸಿತ್ತು.

ಗಲ್ವಾನ್ ಗಡಿಯಲ್ಲಿ ಸೇನೆ ನಿಷ್ಕ್ರಿಯ:

ಕಳೆದ ಜುಲೈ ತಿಂಗಳಿನಲ್ಲಿ ಗಲ್ವಾನ್ ಗಡಿ ಪ್ರದೇಶದ ಪೆಟ್ರೋಲಿಂಗ್ ಪಾಯಿಂಟ್ 14ರಿಂದ ಸೇನೆಗಳನ್ನು ಹಿಂಪಡೆಯಲಾಗಿತ್ತು. ತದನಂತರದಲ್ಲಿ ಪೆಟ್ರೋಲಿಂಗ್ ಪಾಯಿಂಟ್ 14 ಮತ್ತು 17ರ ಗೋಗ್ರಾ ಹೈಟ್ಸ್ ಮತ್ತು ಹಾಟ್ ಸ್ಪ್ರಿಂಗ್ಸ್ ಪ್ರದೇಶದಲ್ಲಿ ಸೇನೆ ನಿಷ್ಕ್ರಿಯಗೊಳಿಸುವ ಬಗ್ಗೆ ಚರ್ಚಿಸಲಾಗುತ್ತಿದೆ. ಆದರೆ ಆಗಸ್ಟ್ ತಿಂಗಳ ಹೊತ್ತಿಗೆ ದಕ್ಷಿಣದ ಬ್ಯಾಂಕ್ ಆಫ್ ಪ್ಯಾಂಗೊಂಗ್ ತ್ಸೊದಲ್ಲಿ ಸೇನೆಯು ಆಕ್ರಮಣಕಾರಿ ನಿಲುವು ಪ್ರದರ್ಶಿಸಿತ್ತು.

ಭಾರತ ಚೀನಾ ಯೋಧರ ನಡುವೆ ಸಂಘರ್ಷ

2020ರ ಜೂನ್.06ರಂದು ಲಡಾಖ್ ಗಡಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ಶಾಂತಿಸಭೆ ನಡೆಸಲಾಗಿತ್ತು. ಈ ಸಭೆಯು ವಿಫಲವಾದ ಬೆನ್ನಲ್ಲೇ 2020ರ ಜೂನ್ 15 ಮತ್ತು 16ರ ರಾತ್ರಿ ಲಡಾಖ್ ಪೂರ್ವ ಗಡಿ ಪ್ರದೇಶದ ಗಾಲ್ವಾನ್ ಕಣಿವೆಯ ಬಳಿ ಭಾರತ-ಚೀನಾ ಯೋಧರ ನಡುವೆ ಸಂಘರ್ಷ ನಡೆಯಿತು. ರೌಡಿಗಳಂತೆ ವರ್ತಿಸಿದ ಚೀನಾ ಯೋಧರು ಮಾರಕಾಸ್ತ್ರಗಳಿಂದ ಭಾರತೀಯ ಯೋಧರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಭಾರತದ 20 ಯೋಧರು ಹುತಾತ್ಮರಾಗಿದ್ದು, 70 ಯೋಧರು ಗಾಯಗೊಂಡಿದ್ದರು.

ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರ ಸಾವಿಗೆ ಕಾರಣವಾದ ಚೀನಾದ ವಿರುದ್ಧ ಭಾರತೀಯ ಯೋಧರು ಪ್ರತೀಕಾರ ತೀರಿಸಿಕೊಂಡರು. ಭಾರತ ನಡೆಸಿದ ಪ್ರತಿದಾಳಿಯಲ್ಲಿ ಚೀನಾದ 40ಕ್ಕೂ ಹೆಚ್ಚು ಯೋಧರು ಹತರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಚೀನಾ ಮಾತ್ರ ಸೈನಿಕರ ಸಾವು-ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ವಾದಿಸಿತು.

ಲಡಾಖ್ ಗಡಿ ವಿವಾದಕ್ಕೆ ಕಾರಣವಾಗಿರುವುದು ಏನು?

ಭಾರತ ಮತ್ತು ಚೀನಾ ಗಡಿಯ ಪ್ಯಾಂಗಾಂಗ್ ತ್ಸೋ, ಗಲ್ವಾನ್ ವ್ಯಾಲಿ ಪ್ರದೇಶದಲ್ಲಿ ಈ ಹಿಂದೆ 2,500 ಯೋಧರು ಶಸ್ತ್ರಸಜ್ಜಿತರಾಗಿ ನಿಂತಿದ್ದರು. ಪ್ಯಾಂಗಾಂಗ್ ತ್ಸೋ ಸುತ್ತಮುತ್ತಲು 180 ಕಿ.ಮೀ ವ್ಯಾಪ್ತಿಯಲ್ಲಿ ರಕ್ಷಣಾ ಮೂಲಸೌಕರ್ಯಗಳ ಕಾಮಗಾರಿ ಚಟುವಟಿಕೆ ನಡೆಸುತ್ತಿರುವುದು ಉಪಗ್ರಹ ಸೆರೆ ಹಿಡಿದ ಫೋಟೋಗಳಲ್ಲಿ ಸಾಬೀತಾಗಿತ್ತು. ಇದಕ್ಕೂ ಮೊದಲು ದರ್ಬಕ್-ಶಯೊಕ್ ನಿಂದ ದೌಲತ್ ಬೆಗ್ ಒಲ್ಡಿಯೆಗೆ ಗಾಲ್ವಾನ್ ವ್ಯಾಲಿಯಲ್ಲಿ ರಸ್ತೆ ನಿರ್ಮಿಸುವುದಕ್ಕೆ ಭಾರತವು ಮುಂದಾಗಿತ್ತು. ಪ್ಯಾಂಗಾಂಗ್ ತ್ಸೋ ತುದಿಯಲ್ಲಿರುವ ಪ್ರದೇಶದಲ್ಲಿ ರಸ್ತೆ ಕಾಮಗಾರಿಗೆ ಚೀನಾ ವಿರೋಧಿಸಿತ್ತು. ಪ್ಯಾಂಗಾಂಗ್ ತ್ಸೋ ಪ್ರದೇಶ ತೀರಾ ಮಹತ್ವವಾಗಿದೆ ಎಂದು ಭಾರತ ಕೂಡಾ ಪರಿಗಣಿಸಿತ್ತು. ಆದರೆ ಚೀನಾ ವಿರೋಧದ ಹಿನ್ನೆಲೆ ಗಡಿಯಲ್ಲಿ ಯಾವುದೇ ರೀತಿ ಸೇನೆ ನಿಯೋಜಿಸದಿರಲು ಭಾರತವು ತೀರ್ಮಾನಿಸಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+