ಹೊರ್ಮುಜ್ ಜಲಸಂಧಿ ಕೊನೆಗೂ ಮುಕ್ತ: LPG ಸಮಸ್ಯೆಯಲ್ಲಿ ಬೆಂದವರಿಗೆ ಆಶಾ ಕಿರಣ

LPG Good News: ಇರಾನ್, ಲೆಬನಾನ್‌ನಲ್ಲಿ ಜಾರಿಗೆ ಬಂದ ಯುದ್ಧ ವಿರಾಮದ ಬಳಿಕ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಾರ್ಮುಝ್ ಮಾರ್ಗವನ್ನು ಮತ್ತೆ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು ತಿಳಿಸಿದೆ. ಇದರಿಂದ ಇಂಧನ ಮಾರುಕಟ್ಟೆ ಮತ್ತು ಅಂತಾರಾಷ್ಟ್ರೀಯ ವ್ಯಾಪಾರಕ್ಕೆ ದೊಡ್ಡ ಮಟ್ಟದ ಸಮಾಧಾನ ತಂದಿದೆ. ಅದರಲ್ಲೂ ಎಲ್‌ಪಿಜಿ ಬಳಕೆದಾರರಿಗೆ ನೆಮ್ಮದಿಯ ಸುದ್ದಿ ಸಿಕ್ಕಂತಾಗಿದೆ.

ಈಗ ಲೆಬನಾನ್ ಪ್ರದೇಶದಲ್ಲಿ ಪರಿಸ್ಥಿತಿ ಶಾಂತವಾಗುತ್ತಿರುವ ಹಿನ್ನೆಲೆ, ಹಡಗುಗಳ ಸಂಚಾರ ಸುಗಮವಾಗಿಸಲು ಇರಾನ್ ಈ ಕ್ರಮ ಕೈಗೊಂಡಿದೆ. ಈ ನಿರ್ಧಾರದಿಂದ ಜಾಗತಿಕ ತೈಲ ಸರಬರಾಜು ಮತ್ತು ಸಾಗಣೆ ವ್ಯವಸ್ಥೆಯಲ್ಲಿ ಸುಧಾರಣೆ ಕಾಣುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

LPG Iran Opens Strait of Hormuz for Commercial Ships During Hezbollah Ceasefire Know details

ಕಡಲ ನಿರ್ಬಂಧ ತೆರವು

ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಅವರು, ಹಿಜ್ಬುಲ್ಲಾ ಕದನ ವಿರಾಮದ ಉಳಿದ ಅವಧಿಯಲ್ಲಿ ಹಾರ್ಮುಜ್ ಜಲಸಂಧಿಯ ಮೂಲಕ ಎಲ್ಲಾ ವಾಣಿಜ್ಯ ನೌಕೆಗಳ ಸಂಚಾರವನ್ನು ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ. ವಿಶ್ವದ ಅತ್ಯಂತ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ ಇಲ್ಲಿ ವಿಧಿಸಲಾಗಿದ್ದ ಕಡಲ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.

ಇಂಧನ ಬಳಕೆದಾರರಿಗೆ ನೆಮ್ಮದಿಯ ಸುದ್ದಿ

ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಸರಕು ಸಾಗಣೆ ಮತ್ತು ವಾಣಿಜ್ಯ ಹಡಗುಗಳಿಗೆ ಯಾವುದೇ ಅಡೆತಡೆ ಇರುವುದಿಲ್ಲ ಎಂದು ಇರಾನ್ ಭರವಸೆ ನೀಡಿದೆ. ಈ ನಿರ್ಧಾರವು ಲೆಬನಾನ್‌ನಲ್ಲಿ ನಡೆಯುತ್ತಿರುವ ಕದನ ವಿರಾಮ ಪ್ರಕ್ರಿಯೆಯ ಭಾಗವಾಗಿದೆ ಮತ್ತು ಪ್ರಾದೇಶಿಕ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ವಿಶ್ವದ ತೈಲ ಪೂರೈಕೆಯ ಬಹುಪಾಲು ಭಾಗ ಈ ಜಲಮಾರ್ಗದ ಮೂಲಕವೇ ಸಾಗುತ್ತದೆ. ಹಾಗಾಗಿ, ಇರಾನ್‌ನ ಈ ಘೋಷಣೆಯು ಜಾಗತಿಕ ಇಂಧನ ಮಾರುಕಟ್ಟೆ ಮತ್ತು ಅಂತಾರಾಷ್ಟ್ರೀಯ ವ್ಯಾಪಾರಕ್ಕೆ ದೊಡ್ಡ ಮಟ್ಟದ ಸಮಾಧಾನ ತಂದಿದೆ.

ಇರಾನ್ ವಿದೇಶಾಂಗ ಸಚಿವ ಟ್ವಿಟ್‌

ಇರಾನ್ ವಿದೇಶಾಂಗ ಸಚಿವ ಅರಾಗ್ಚಿ ಅವರು ತಮ್ಮ ಹಿಂದಿನ ಟ್ವಿಟರ್‌ನಲ್ಲಿ, "ಲೆಬನಾನ್‌ನಲ್ಲಿನ ಕದನ ವಿರಾಮಕ್ಕೆ ಅನುಗುಣವಾಗಿ, ಹಾರ್ಮುಜ್ ಜಲಸಂಧಿಯ ಮೂಲಕ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರವನ್ನು ಕದನ ವಿರಾಮದ ಉಳಿದ ಅವಧಿಗೆ ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ," ಎಂದು ಬರೆದುಕೊಂಡಿದ್ದಾರೆ.

ಹಡಗುಗಳು ಮನಬಂದಂತೆ ಸಂಚರಿಸುವಂತಿಲ್ಲ, ಇರಾನ್‌ನ ಕಡಲ ಸಂಸ್ಥೆ ನಿಗದಿಪಡಿಸಿದ ನಿರ್ದಿಷ್ಟ ಮಾರ್ಗದಲ್ಲೇ ಚಲಿಸಬೇಕಾಗುತ್ತದೆ. ಈ ಸಡಿಲಿಕೆಯು ಲೆಬನಾನ್ ಕದನ ವಿರಾಮ ಜಾರಿಯಲ್ಲಿರುವ ಅವಧಿಗೆ ಮಾತ್ರ ಅನ್ವಯಿಸುತ್ತದೆ. ವಾಣಿಜ್ಯ ಹಡಗುಗಳಿಗೆ ಸುರಕ್ಷಿತ ಹಾದಿ ಒದಗಿಸುವ ಮೂಲಕ ಜಾಗತಿಕ ವ್ಯಾಪಾರಕ್ಕೆ ಇರಾನ್ ಸಹಕಾರ ನೀಡುವ ಸೂಚನೆ ನೀಡಿದೆ. ಈ ನಿರ್ಧಾರವು ಕಳೆದ ಕೆಲವು ತಿಂಗಳುಗಳಿಂದ ಜಾಗತಿಕ ಮಟ್ಟದಲ್ಲಿ ತಲೆದೂರಿದ್ದ ನೌಕಾ ಸಾರಿಗೆಯ ಆತಂಕವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲಿದೆ.

ಇಸ್ರೇಲ್ ಮತ್ತು ಲೆಬನಾನ್ ನಡುವೆ 10 ದಿನಗಳ ಕದನ ವಿರಾಮಕ್ಕೆ ಉಭಯ ದೇಶಗಳು ಸಮ್ಮತಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಇರಾನ್ ಈ ನಿರ್ಧಾರವನ್ನು ಪ್ರಕಟಿಸಿದೆ.

ಕುತೂಹಲಕಾರಿ ವಿಷಯವೆಂದರೆ, ಟ್ರಂಪ್ ಅವರ ಅಧಿಕೃತ ಹೇಳಿಕೆಯಲ್ಲಿ ಇರಾನ್ ಬೆಂಬಲಿತ ಸಶಸ್ತ್ರ ಗುಂಪು ಹೆಜ್ಬೊಲ್ಲಾ ಬಗ್ಗೆ ಯಾವುದೇ ಉಲ್ಲೇಖವಿರಲಿಲ್ಲ. ಕಳೆದ ಕೆಲವು ವಾರಗಳಿಂದ ಇಸ್ರೇಲ್ ಮೇಲೆ ನಿರಂತರ ದಾಳಿ ನಡೆಸುತ್ತಿರುವುದು ಇದೇ ಗುಂಪು ಎಂಬುದು ಇಲ್ಲಿ ಗಮನಾರ್ಹವಾಗಿದೆ.

ಟ್ರಂಪ್ ಹೇಳಿರುವುದೇನು?

ನಂತರ ತಮ್ಮ 'ಟ್ರೂತ್ ಸೋಶಿಯಲ್' ಜಾಲತಾಣದಲ್ಲಿ ಪೋಸ್ಟ್ ಮಾಡಿದ ಟ್ರಂಪ್, "ಹೆಜ್ಬೊಲ್ಲಾ ಗುಂಪಿಗೆ ಕದನ ವಿರಾಮವನ್ನು ಗೌರವಿಸುವಂತೆ ಸೂಚಿಸಿದರು. ಈ ನಿರ್ಣಾಯಕ ಸಮಯದಲ್ಲಿ ಹೆಜ್ಬೊಲ್ಲಾ ಉತ್ತಮವಾಗಿ ಮತ್ತು ಸಂಯಮದಿಂದ ವರ್ತಿಸುತ್ತದೆ ಎಂದು ನಾನು ಭಾವಿಸುತ್ತೇನೆ," ಎಂದು ಅವರು ಬರೆದುಕೊಂಡಿದ್ದಾರೆ. ಈ ಮೂಲಕ ಇಸ್ರೇಲ್ ಮತ್ತು ಲೆಬನಾನ್ ಗಡಿಯಲ್ಲಿ ನಡೆಯುತ್ತಿದ್ದ ಭೀಕರ ಗುಂಡಿನ ಚಕಮಕಿಗೆ ಈ 10 ದಿನಗಳ ಕದನ ವಿರಾಮವು ತಾತ್ಕಾಲಿಕ ವಿರಾಮ ನೀಡುವ ನಿರೀಕ್ಷೆಯಿದೆ.

ಈ ಘೋಷಣೆಯ ನಂತರ, ಪರಿಸ್ಥಿತಿಯನ್ನು ಶಾಂತಗೊಳಿಸಲು ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಬೆಳೆಸುವ ನಿಟ್ಟಿನಲ್ಲಿ ಮುಂದಿನ ಚರ್ಚೆಗಳಿಗಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಅವರನ್ನು ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಆಹ್ವಾನಿಸಿದ್ದಾರೆ. ಕೇವಲ ತಾತ್ಕಾಲಿಕ ಕದನ ವಿರಾಮಕ್ಕೆ ಸೀಮಿತವಾಗದೆ, ದೀರ್ಘಕಾಲದ ಶಾಂತಿ ಸ್ಥಾಪಿಸುವ ಗುರಿಯನ್ನು ಈ ಆಹ್ವಾನ ಹೊಂದಿದೆ.

ಉಭಯ ದೇಶಗಳ ನಾಯಕರನ್ನು ಒಂದೇ ಕಡೆ ಸೇರಿಸುವ ಮೂಲಕ ಸಂಘರ್ಷಕ್ಕೆ ರಾಜತಾಂತ್ರಿಕ ಪರಿಹಾರ ಕಂಡುಕೊಳ್ಳಲು ಅಮೆರಿಕ ಪ್ರಯತ್ನಿಸುತ್ತಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆ ಕಡಿಮೆ ಮಾಡುವಲ್ಲಿ ಈ ಭೇಟಿ ಅತ್ಯಂತ ಮಹತ್ವದ್ದೆಂದು ಹೇಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+