ಜಪಾನಿನ ಅನಿಮೇಶನ್ ಕಂಪನಿ ಕಟ್ಟಡದಲ್ಲಿ ಅಗ್ನಿ ಅವಘಡ: 24 ಮಂದಿ ಸಾವು

ಟೋಕಿಯೋ, ಜುಲೈ 18: ಜಪಾನಿನ ಕ್ಯೋಟೋದ ಅನಿಮೇಶನ್ ಕಂಪನಿಯೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಒಟ್ಟು 24 ಜನ ಮೃತರಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಗುರುವಾರ ಬೆಳಿಗ್ಗೆ ಅನಿಮೇಶನ್ ಕಂಪನಿಯ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅದಕ್ಕೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

ಈಗಾಗಲೇ 24 ಮಂದಿ ಮೃತರಾಗಿದ್ದು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

13 feared dead in a suspected arson attack in Japan

ಘಟನೆಯಲ್ಲಿ 35 ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂದಿದ್ದು, ಅವರಲ್ಲಿ ಹತ್ತು ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಪಾರಾಗುವುದು ಹೇಗೆ ಎಂಬುದೇ ತಿಳಿಯದೆ, ಹಲವರು ಭಯದಿಂದ ಉಸಿರುಕಟ್ಟಿ ಸತ್ತಿದ್ದಾರೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ಆರಿಸುವ ಪ್ರಯತ್ನಕ್ಕೆ ಕೈಹಾಕಿದ್ದರು. ತಕ್ಷಣವೇ ಕಟ್ಟಡದೊಳಗೆ ಸಿಲುಕಿಕೊಂಡವರ ರಕ್ಷಣಾ ಕಾರ್ಯ ಆರಂಭವಾಗಿತ್ತಾದರೂ ಕಟ್ಟಡದಿಂದ ಹೊರಬರುವ ದಾರಿ ತಿಳಿಯದೆ ಹಲವರು ಅಸುನೀಗಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+