ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ: 13 ಮಂದಿ ಬಲಿ
ಪೆಶಾವರ, ಜುಲೈ 11: ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 13 ಮಂದಿ ಮೃತರಾಗಿದ್ದು, 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟದಲ್ಲಿ ಅವಾಮಿ ನ್ಯಾಶ್ನಲ್ ಪಾರ್ಟಿಯ ಮುಖಂಡ ಹಾರೂನ್ ಬಿಲೌರ್ ಎಂಬುವವರು ಸಹ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಗಾಯಾಳುಗಳನ್ನು ಲೇಡಿ ರೀಡಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತೆಹ್ರಿಕ್ ಇ ತಾಲಿಬಾನ್ ಪಾಕಿಸ್ತಾನ್ ಉಗ್ರ ಸಂಘಟನೆ ಈ ಸ್ಫೋಟದ ಹೊಣೆ ಹೊತ್ತಿದೆ.
ನಿನ್ನೆ ತಡರಾತ್ರಿ ರಾಜಕೀಯ ಸಭೆಯೊಂದು ನಡೆಯುತ್ತಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ. ಪಾಕಿಸ್ತಾನದಲ್ಲಿ ಜುಲೈ 25 ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಚುನಾವಣಾ rally ಯ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಈ ತಿಂಗಳ ಆರಂಭದಲ್ಲಿ ಇಲ್ಲಿನ ತಕ್ತಿಖೇಲ್ ಎಂಬಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಈ ದಾಳಿಗಳನ್ನು ಕಟುವಾಗಿ ಟೀಕಿಸಿರುವ ಮುಖ್ಯ ಚುನಾವಣಾಧಿಕಾರಿ ಸರ್ದಾರ್ ಮುಹ್ಮದ್ ರಾಜಾ, 'ನಮ್ಮ ಭದ್ರತಾ ಸಂಸ್ಥೆಯ ದೌರ್ಬಲ್ಯ ಮತ್ತು ಪಾರದರ್ಶಕ ಚುನಾವಣೆಯ ವಿರುದ್ಧ ನಡೆಯುತ್ತಿರುವ ಪಿತೂರಿಯನ್ನು ಇದು ತೋರಿಸಿಕೊಡುತ್ತದೆ' ಎಂದಿದ್ದಾರೆ.












Click it and Unblock the Notifications