ಗ್ರೀಸ್ ರಾಜಧಾನಿ ಅಥೆನ್ಸ್ ನಲ್ಲಿ ಕಾಳ್ಗಿಚ್ಚಿಗೆ 20 ಮಂದಿ ಬಲಿ
ಗ್ರೀಸ್ ರಾಜಧಾನಿ ಅಥೆನ್ಸ್ ನ ಅಟ್ಟಿಕಾ ಬಳಿ ಎರಡು ಕಡೆ ಸಂಭವಿಸಿದ ಕಾಳ್ಗಿಚ್ಚಿಗೆ ಕನಿಷ್ಠ 20 ಮಂದಿ ಬಲಿಯಾಗಿದ್ದಾರೆ.
ಈ ಕಾಳ್ಗಿಚ್ಚಿನಲ್ಲಿ 20 ಜನ ಮೃತರಾಗಿದ್ದರೆ, 69 ಜನ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಇಲ್ಲಿನ ಸ್ಥಳೀಯ ಪತ್ರಿಕೆಗಳು ತಿಳಿಸಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಮಧ್ಯಾಹ್ನ ಅಟ್ಟಿಕಾದ ಪಶ್ಚಿಮ ಭಾಗದಲ್ಲಿರುವ ಗೆರೆನಿಯಾ ಮೌಂಟೇನ್ಸ್ ನಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿತ್ತು. ನಂತರ ಅಟ್ಟಿಕಾದ ಈಶಾನ್ಯ ಭಾಗದಲ್ಲೂ ಕಾಳ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಈ ದುರಂತ ಸಂಭವಿಸಿದ್ದು, ಸ್ಥಳಿಯರನ್ನು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯಲಾಗಿದೆ.

ಅಗ್ನಿಶಾಮಕ ದಳದ 70 ಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಾಳ್ಗಿಚ್ಚಿನಿಂದ ಸಾಕಷ್ಟು ವನ್ಯ ಜೀವಿಗಳೂ ಅಸುನೀಗಿರಬಹುದೆಂದು ಅಂದಾಜಿಸಲಾಗಿದೆ.











Click it and Unblock the Notifications