ಪ್ರವಾದಿ ಮಹಮ್ಮದ್ ಜನ್ಮದಿನ ಕಾರ್ಯಕ್ರಮದಲ್ಲೇ ಆತ್ಮಹತ್ಯಾ ಬಾಂಬ್ ಸ್ಫೋಟ, 50ಕ್ಕೂ ಹೆಚ್ಚು ಸಾವು

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಮಂಗಳವಾರ ಆತ್ಮಹತ್ಯಾ ಬಾಂಬರ್ ಸ್ಫೋಟ ಮಾಡಿಕೊಂಡು, 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ದಾಳಿಯಲ್ಲಿ ಎಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಜೀಬ್ ದಾನಿಶ್ ಮಾಹಿತಿ ನೀಡಿದ್ದಾರೆ.

ಪ್ರವಾದಿ ಮಹಮ್ಮದ್ ರ ಜನ್ಮ ದಿನಾಚರಣೆ ಸಮಾರಂಭ ಆಚರಿಸುವ ಸಲುವಾಗಿ ಇಸ್ಲಾಮಿಕ್ ಧಾರ್ಮಿಕ ಪಂಡಿತರೆಲ್ಲ ಸೇರಿ ಮದುವೆ ಸಭಾಂಗಣವೊಂದರಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಆ ಕಾರ್ಯಕ್ರಮದಲ್ಲಿ, ಸಮಾರಂಭ ನಡೆಯುತ್ತಿದ್ದ ಸಭಾಂಗಣದಲ್ಲಿ ಆತ್ಮಹತ್ಯಾ ಬಾಂಬರ್ ಸ್ಫೋಟ ಮಾಡಿಕೊಂಡು, ಸಾವು-ನೋವು ಸಂಭವಿಸಿದೆ.

Many people killed in suicide bomb blast at religious gathering in Kabul

ಆತ್ಮಹತ್ಯಾ ಬಾಂಬ್ ದಾಳಿಗೆ ಸಂಬಂಧಿಸಿದಂತೆ ಈ ವರೆಗೆ ಯಾವುದೇ ಉಗ್ರ ಸಂಘಟನೆಯು ಹೊಣೆಯನ್ನು ಹೊತ್ತಿಕೊಂಡಿಲ್ಲ. ಇತ್ತೀಚೆಗೆ ತಾಲಿಬಾನ್ ಉಗ್ರರು ನಡೆಸಿದ್ದ ದಾಳಿಯಲ್ಲಿ ಮೂವತ್ತು ಪೊಲೀಸರು ಸಾವನ್ನಪ್ಪಿದ್ದರು. ಇತ್ತೀಚೆಗೆ ಅಫ್ಘಾನಿಸ್ತಾನದಲ್ಲಿ ಪ್ರತಿ ದಿನವೂ ತಾಲಿಬಾನ್ ಉಗ್ರರು ಒಂದಲ್ಲ ಒಂದು ಕಡೆ ದಾಳಿ ನಡೆಸುತ್ತಿದ್ದು, ಭಾರೀ ಸಾವು-ನೋವು ಸಂಭವಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+