ಮುಂದಿನ 48 ಗಂಟೆಗಳಲ್ಲಿ ಮೆಹುಲ್ ಚೋಕ್ಸಿ ಭಾರತಕ್ಕೆ ಹಸ್ತಾಂತರ:ಆಂಟಿಗುವಾ ಪ್ರಧಾನಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೊಮೆನಿಕಾದಲ್ಲಿ ಬಂಧಿಸಲಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು 48 ಗಂಟೆಗಳಲ್ಲಿ ಭಾರತಕ್ಕೆ ಹಸ್ತಾಂತರಿಸಲಾಗುತ್ತದೆ ಎಂದು ಆಂಟಿಗುವಾ ಪ್ರಧಾನಿ ಗಸ್ಟನ್ ಬ್ರೌನೇ ಹೇಳಿದ್ದಾರೆ.
ಡೊಮೆನಿಕಾದಲ್ಲಿ ಚೋಕ್ಸಿಯನ್ನು ಬಂಧಿಸಲಾಗಿದ್ದು, ಆಂಟಿಗುವಾ ಪೊಲೀಸರು ಕೂಡ ಡೊಮೆನಿಕಾ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ, ಶೀಘ್ರದಲ್ಲೇ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಡೊಮೆನಿಕಾದಿಂದಲೇ ನೇರವಾಗಿ ಭಾರತಕ್ಕೆ ಹಸ್ತಾಂತರಿಸುವ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.
ಅತ್ತ ಡೊಮೆನಿಕಾದಲ್ಲಿ ಮೆಹುಲ್ ಚೋಕ್ಸಿ ಬಂಧನವಾಗುತ್ತಿದ್ದಂತೆಯೇ ಇತ್ತ WIONನ ಪ್ರಧಾನ ರಾಜತಾಂತ್ರಿಕ ವರದಿಗಾರ ಸಿಧಾಂತ್ ಸಿಬಲ್ ರೊಂದಿಗೆ ವರ್ಚುವಲ್ ಮೀಟಿಂಗ್ ನಲ್ಲಿ ಪಾಲ್ಗೊಂಡು ಹೇಳಿಕೆ ನೀಡಿರುವ ಪ್ರಧಾನಿ ಗಸ್ಟನ್ ಬ್ರೌನೇ, ಯಾವುದೇ ಕಾನೂನು ತೊಡಕುಗಳಿಲ್ಲದಿದ್ದರೆ ಮುಂದಿನ 48 ಗಂಟೆಗಳಲ್ಲಿ ಚೋಕ್ಸಿಯನ್ನು ಖಾಸಗಿ ಜೆಟ್‌ನಲ್ಲಿ ಭಾರತಕ್ಕೆ ವಾಪಾಸು ಕಳುಹಿಸಲಾಗುದೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ತಾವು ಡೊಮೆನಿಕಾ ಪ್ರಧಾನಿ ರೂಸ್ವೆಲ್ಟ್ ಸ್ಕೆರ್ರಿಟ್ ರೊಂದಿಗೆ ಚರ್ಚೆ ನಡೆಸಿದ್ದು, ಚೋಕ್ಸಿಯನ್ನು ಆಂಟಿಗುವಾ ಮರಳಿಸದಂತೆ ಮನವಿ ಮಾಡಲಾಗಿದೆ. ಆಂಟಿಗುವಾದಲ್ಲಿ ಮೆಹುಲ್ ಚೋಕ್ಸಿ ಎಲ್ಲ ರೀತಿಯ ನಾಗರಿಕ ಹಕ್ಕುಗಳನ್ನು ಹೊಂದಿದ್ದು, ಅವರನ್ನು ಆಂಟಿಗುವಾಗೆ ಕರೆತಂದರೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ. ನೇರವಾಗಿ ಅವರನ್ನು ಭಾರತಕ್ಕೆ ರವಾನಿಸಲು ಕೋರಲಾಗಿದೆ ಎಂದು ಹೇಳಿದ್ದಾರೆ.
14,000 ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ಭಾರತದ ಕೇಂದ್ರೀಯ ತನಿಖಾ ತಂಡ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಯನ್ನು ಹಸ್ತಾಂತರಿಸುವಂತೆ ಪ್ರಯತ್ನಿಸುತ್ತಿರುವ ನಡುವೆ ಆರೋಪಿ ನಾಪತ್ತೆಯಾಗಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಬಹುಕೋಟಿ ವಂಚನೆ ಪ್ರಕರಣದ ಆರೋಪಿ ಮೆಹುಲ್ ಚೋಕ್ಸಿ ಬೋಟ್ ಮೂಲಕ ಡೊಮಿನಿಕಾಗೆ ತಲುಪಿದ್ದನು. ಆತನ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿರುವ ಹಿನ್ನೆಲೆ ಆರೋಪಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದು, ಆತನನ್ನು ವಶದಲ್ಲಿ ಇರಿಸಿಕೊಂಡಿದ್ದಾರೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications