ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಡೊಮಿನಿಕಾ ಕೋರ್ಟ್ ತಡೆ

|
Google Oneindia Kannada News

ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೊಮೆನಿಕಾದಲ್ಲಿ ಬಂಧಿಸಲಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಡೊಮಿನಿಕಾ ಕೋರ್ಟ್ ತಡೆ ನೀಡಿದೆ.

ಮೆಹುಲ್ ಚೋಕ್ಸಿ ಅವರಿಗೆ ಕಾನೂನು ಸಲಹೆ ಪಡೆಯಲು ಅವಕಾಶ ನೀಡದಿರುವುದಕ್ಕೆ ಅವರ ಪರ ವಕೀಲರು, ಡೊಮಿನಿಕಾ ನ್ಯಾಯಾಲಯದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ನ್ಯಾಯಾಲಯ ಚೋಕ್ಸಿ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಮೆಹುಲ್ ಚೋಕ್ಸಿ ಭಾರತಕ್ಕೆ ಹಸ್ತಾಂತರ:ಆಂಟಿಗುವಾ ಪ್ರಧಾನಿ ಮುಂದಿನ 48 ಗಂಟೆಗಳಲ್ಲಿ ಮೆಹುಲ್ ಚೋಕ್ಸಿ ಭಾರತಕ್ಕೆ ಹಸ್ತಾಂತರ:ಆಂಟಿಗುವಾ ಪ್ರಧಾನಿ

ಡೊಮಿನಿಕಾದ ಚೋಕ್ಸಿ ಪರ ಕಾನೂನು ತಂಡವು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಮೆಹುಲ್ ಚೋಕ್ಸಿಯ ಹಸ್ತಾಂತರ ಪ್ರಕ್ರಿಯೆಗೆ ನ್ಯಾಯಾಲಯ ತಡೆ ನೀಡಿದೆ. ಈ ವಿಷಯವು ಮೇ 28 ರಂದು ಮತ್ತೆ ವಿಚಾರಣೆಗೆ ಬರುವ ಸಾಧ್ಯತೆ ಇದೆ.

Mehul Choksis Repatriation Stayed By Dominica Court

ಕಾನೂನು ತಂಡವು ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿಗಾಗಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದೆ ಮತ್ತು ಚೋಕ್ಸಿಗೆ ಕಾನೂನು ಸಲಹೆ ಪಡೆಯಲು ಅವಕಾಶ ನಿರಾಕರಿಸಿದೆ.

ಕಣ್ಣುಗಳು ಊದಿಕೊಂಡಿವೆ, ಮತ್ತು ಚೋಕ್ಸಿ ದೇಹದ ಮೇಲೆ ಗಾಯದ ಗುರುತುಗಳಿವೆ, ಚೋಕ್ಸಿ ಆಂಟಿಗುವಾ ಪ್ರಜೆಯಾಗಿದ್ದಾರೆ, ಭಾರತಕ್ಕೆ ಕಳುಹಿಸಲು ಭಾರತದ ಪ್ರಜೆಯಲ್ಲ ಎಂದು ಮಾರ್ಚ್ ಹೇಳಿದ್ದಾರೆ.

ಚೋಕ್ಸಿಯನ್ನು ಆಂಟಿಗುವಾ ಮರಳಿಸದಂತೆ ಮನವಿ ಮಾಡಲಾಗಿದೆ. ಆಂಟಿಗುವಾದಲ್ಲಿ ಮೆಹುಲ್ ಚೋಕ್ಸಿ ಎಲ್ಲ ರೀತಿಯ ನಾಗರಿಕ ಹಕ್ಕುಗಳನ್ನು ಹೊಂದಿದ್ದು, ಅವರನ್ನು ಆಂಟಿಗುವಾಗೆ ಕರೆತಂದರೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ. ನೇರವಾಗಿ ಅವರನ್ನು ಭಾರತಕ್ಕೆ ರವಾನಿಸಲು ಕೋರಲಾಗಿತ್ತು .

ಭಾರತದೊಂದಿಗೆ ಸಹಕರಿಸುತ್ತಿದೆ.

ಭಾರತದೊಂದಿಗೆ ಸಹಕರಿಸುತ್ತಿದೆ.

ಡೊಮಿನಿಕಾ ಸರ್ಕಾರವು ಆಂಟಿಗುವಾ ಮತ್ತು ಭಾರತ ಸರ್ಕಾರಗಳೊಂದಿಗೆ ಸಹಕರಿಸುತ್ತಿದೆ. ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ಹೊಂದಿದ್ದಾರೆ. ಆದರೆ ಆಂಟಿಗುವಾಕ್ಕೆ ಚೋಕ್ಸಿಯನ್ನು ವಾಪಸ್ ಕಳುಹಿಸದಂತೆ ನಾವು ಡೊಮಿನಿಕಾ ಕಾನೂನು ಜಾರಿ ಸಂಸ್ಥೆಗಳಿಗೆ ಮನವಿ ಮಾಡಿದ್ದೇವೆ. ಚೋಕ್ಸಿಯನ್ನು ನೇರವಾಗಿ ಭಾರತಕ್ಕೆ ವಾಪಸ್​ ಕಳುಹಿಸಲು ಭಾರತೀಯ ಕಾನೂನು ಜಾರಿ ಸಂಸ್ಥೆಗಳು ಅಗತ್ಯ ವ್ಯವಸ್ಥೆ ಮಾಡಬೇಕೆಂದು ನಾವು ವಿನಂತಿ ಮಾಡಿದ್ದೇವೆ ಎಂದು ಹೇಳಿದರು.

ಅಕ್ರಮ ಪ್ರವೇಶ ಮಾಡಿದ್ದಕ್ಕಾಗಿ ಬಂಧನ

ಅಕ್ರಮ ಪ್ರವೇಶ ಮಾಡಿದ್ದಕ್ಕಾಗಿ ಬಂಧನ

ಡೊಮಿನಿಕಾದ ರಾಷ್ಟ್ರೀಯ ಭದ್ರತಾ ಸಚಿವಾಲಯ ಮತ್ತು ಗೃಹ ಸಚಿವಾಲಯ ಹೇಳುವ ಪ್ರಕಾರ, ಅಕ್ರಮ ಪ್ರವೇಶ ಮಾಡಿದ್ದರಿಂದ ಚೋಕ್ಸಿಯನ್ನು ಬಂಧಿಸಲಾಗಿತ್ತು. ಜೊತೆಗೆ ಮೆಹುಲ್ ಚೋಕ್ಸಿಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಆಂಟಿಗುವಾ ಮತ್ತು ಬಾರ್ಬುಡಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಆಂಟಿಗುವಾ ಅಧಿಕಾರಿಗಳು ಮಾಹಿತಿ ಒದಗಿಸಿದ ಬಳಿಕ, ಮೆಹುಲ್​ ಚೋಕ್ಸಿಯನ್ನು ಆಂಟಿಗುವಾಕ್ಕೆ ವಾಪಸ್​ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದೆ.

ಡೊಮಿನಿಕಾದಲ್ಲಿ ಬಂಧಿಸಲಾಗಿತ್ತು

ಡೊಮಿನಿಕಾದಲ್ಲಿ ಬಂಧಿಸಲಾಗಿತ್ತು

ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ ಸಾವಿರಾರು ಕೋಟಿ ರೂ. ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯನ್ನು ಮಂಗಳವಾರ ರಾತ್ರಿ ದ್ವೀಪ ರಾಷ್ಟ್ರ ಡೊಮಿನಿಕಾದಲ್ಲಿ ಬಂಧಿಸಲಾಗಿತ್ತು. ಈ ಹಿಂದೆ ಆಂಟಿಗುವಾ ಮತ್ತು ಬಾರ್ಬುಡಾದಿಂದಲೂ ಚೋಕ್ಸಿ ದಿಢೀರ್ ನಾಪತ್ತೆಯಾಗಿದ್ದ. ಚೋಕ್ಸಿ ವಿರುದ್ಧ ಇಂಟರ್‌ಪೋಲ್‌ ಯೆಲ್ಲೋ ನೋಟಿಸ್‌ ಜಾರಿಗೊಳಿಸಿತ್ತು. ಈತನ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದರು. ಮಂಗಳವಾರ ರಾತ್ರಿ ಚೋಕ್ಸಿ ಬೋಟ್​ ನಲ್ಲಿ ಪರಾರಿಯಾಗುತ್ತಿದ್ದ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ

ಹೆಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ

ಕಾನೂನು ತಂಡವು ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿಗಾಗಿ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದೆ ಮತ್ತು ಚೋಕ್ಸಿಗೆ ಕಾನೂನು ಸಲಹೆ ಪಡೆಯಲು ಅವಕಾಶ ನಿರಾಕರಿಸಿದೆ. ಇದು ಸಾಂವಿಧಾನಿಕ ಹಕ್ಕುಗಳ ಅಭಾವವನ್ನು ಎತ್ತಿ ತೋರುತ್ತದೆ ಎಂದು ಅವರ ಕಾನೂನು ಸಲಹೆಗಾರ ವಿಜಯ್ ಅಗರ್ವಾಲ್ ಅಭಿಪ್ರಾಯಪಟ್ಟಿದ್ದಾರೆ.

English summary
PNB Fraud Case, Businessman Mehul Choksi, Mehul Choksi Arrest, Mehul Choksi's Repatriation Stayed By Dominica Court, Mehul Choksi Arrested In Dominica,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X