ಮೆಕ್ಸಿಕೋ ನೈಟ್ ಕ್ಲಬ್ ನಲ್ಲಿ ಗುಂಡಿನ ಮೊರೆತ, ಐವರ ಸಾವು
ಮೆಕ್ಸಿಕೋ, ಜನವರಿ 16: ಸಂಗೀತ ಹಬ್ಬವೊಂದರಲ್ಲಿ ವ್ಯಕ್ತಿಯೊಬ್ಬ ಬಂದೂಕಿನಿಂದ ಗುಂಡು ಹಾರಿಸಿ ಐವರನ್ನು ಕೊಂದ ಘಟನೆ ಮೆಕ್ಸಿಕೋ ನಗರದ ಪ್ಲಾಯಾ ಡೆಲ್ ಕಾರ್ಮೆನ್ ನಲ್ಲಿ ನಡೆದಿದೆ. ಮೃತರಲ್ಲಿ ಇಬ್ಬರು ಕೆನಡಿಯನ್, ಇಟಲಿ ಹಾಗೂ ಕೊಲಂಬಿಯಾ ನಾಗರಿಕರು ಸೇರಿದ್ದಾರೆ ಎಂದು ಕ್ವಿಂಟಾನಾ ರೂ ಅಟಾರ್ನಿ ಜನರಲ್ ಮಿಗೆಲ್ ಆಂಗೆಲೆ ಪೆಚ್ ಹೇಳಿದ್ದಾರೆ.
ಇನ್ನು ಮೃತಪಟ್ಟ ಐದನೆಯವರು ಮಹಿಳೆಯಾಗಿದ್ದು, ಗುಂಡು ಹಾರಿಸಿದ ನಂತರ ನಡೆದ ನೂಕುನುಗ್ಗಲಿನಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯು ಬ್ಲೂ ಪ್ಯಾರೆಟ್ ಕ್ಲಬ್ ನಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ನಡೆದಿದೆ. ಈ ಬಗ್ಗೆ ಮೊದಲಿಗೆ ಫೇಸ್ ಬುಕ್ ನಲ್ಲಿ ಬಂದ ಮಾಹಿತಿ ಪ್ರಕಾರ, ಬ್ಲೂ ಪ್ಯಾರೆಟ್ ಕ್ಲಬ್ ಹೊರಗಡೆ ವ್ಯಕ್ತಿಯೊಬ್ಬ ಬಂದೂಕಿನಿಂದ ಗುಂಡು ಹಾರಿಸಿ ನಾಲ್ವರನ್ನು ಕೊಂದಿದ್ದಾನೆ ಎಂದು ತಿಳಿಸಲಾಗಿತ್ತು.[ಮೆಕ್ಸಿಕೋ ಪಟಾಕಿ ಮಾರುಕಟ್ಟೆ ದುರಂತ, ಕನಿಷ್ಠ 26 ಮಂದಿ ಸಾವು]

ಮೃತರಲ್ಲಿ ಮೂವರು ಕಾರ್ಯಕ್ರಮದ ರಕ್ಷಣಾ ಸಿಬ್ಬಂದಿ. ಸ್ಥಳದಲ್ಲಿದ್ದ ಪ್ರೇಕ್ಷಕರನ್ನು ರಕ್ಷಿಸುವ ಯತ್ನದಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಆ ನಂತರ ಸ್ಥಳೀಯ ಪೊಲೀಸರು ನೀಡಿದ ಮಾಹಿತಿ ಪ್ರಕಾರ ಐವರು ಮೃತಪಟ್ಟು, ಹದಿನೈದು ಮಂದಿ ಗಾಯಗೊಂಡಿದ್ದಾರೆ.
ಈ ಸಂಗೀತ ಕಾರ್ಯಕ್ರಮಕ್ಕೆ ಯುಎಸ್ ಎ, ಯುಕೆ ಸೇರಿದಂತೆ ವಿವಿಧ ದೇಶದವರು ಭಾಗವಹಿಸುತ್ತಾರೆ. ಇದು ಹತ್ತನೇ ವರ್ಷದ ಕಾರ್ಯಕ್ರಮವಾಗಿತ್ತು. ಮೊದಲಿಗೆ ಜೋರು ಗುಂಡಿನ ಶಬ್ದ ಕೇಳಿದಾಗ, ಪಟಾಕಿ ಸದ್ದು ಎಂದು ರಕ್ಷಣಾ ಸಿಬ್ಬಂದಿ ಹೇಳಿದ್ದಾಗಿ ಪ್ರೇಕ್ಷಕರೊಬ್ಬರು ತಿಳಿಸಿದ್ದಾರೆ.
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ









Click it and Unblock the Notifications