• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾಡೆಲ್‌ ಫೋಟೋಶೂಟ್ ವಿವಾದ: ಪಾಕಿಸ್ತಾನದ ರಾಯಭಾರಿಗೆ ಸಮನ್ಸ್

|
Google Oneindia Kannada News

ಕರ್ತಾರಪುರ್, ನವೆಂಬರ್ 30: ಕರ್ತಾರ್‌ಪುರ ಸಾಹಿಬ್‌ನಲ್ಲಿ ಪಾಕಿಸ್ತಾನಿ ಮಾಡೆಲ್ ವರ್ತನೆಯನ್ನು ಪ್ರಶ್ನಿಸಿ ಭಾರತವು ಮಂಗಳವಾರ ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರಿಗೆ ಸಮನ್ಸ್ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ,"ಪಾಕಿಸ್ತಾನ ವಿಶ್ವದಾದ್ಯಂತ ಸಿಖ್ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿದೆ. ಇದು ಖಂಡನೀಯ ಘಟನೆಯಾಗಿದೆ" ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ತಾರಪುರದಲ್ಲಿರುವ ಗುರುದ್ವಾರ ದರ್ಬಾರ್ ಸಾಹೀಬ್ ಸಿಖ್ ಜನಾಂಗದ ಅತ್ಯಂತ ಪವಿತ್ರ ಕ್ಷೇತ್ರ. ಈ ಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬರೂ ತಲೆಯನ್ನು ಕರವಸ್ತ್ರ, ದುಪ್ಪಟ್ಟದಿಂದ ಮುಚ್ಚಿರಬೇಕೆಂಬ ನಿಯಮವಿದೆ. ಅದನ್ನರಿಯದ ಪಾಕ್ ಮಾಡೆಲ್ ಸ್ವಲಾ ಫ್ರೀ ಹೇರ್ ಬಿಟ್ಟು, ಗುರುದ್ವಾರದ ಎದರು ಫೋಟೋಗೆ ಫೋಸ್ ಕೊಟ್ಟಿದ್ದಾರೆ. ಮಾತ್ರವಲ್ಲದೇ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ಭಾರಿ ವಿವಾದವನ್ನೇ ಸೃಷ್ಟಿ ಮಾಡಿದೆ.

"ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು ಮತ್ತು ಅಗೌರವದಿಂದ ನಡೆದುಕೊಳ್ಳುವ ಇಂತಹ ಘಟನೆಗಳು ಈ ಸಮುದಾಯಗಳ ನಂಬಿಕೆಗೆ ಧಕ್ಕೆಯನ್ನುಂಟು ಮಾಡುತ್ತಿರುವುದು ಎತ್ತಿ ತೋರಿಸುತ್ತವೆ" ಎಂದು MEA ಹೇಳಿಕೆಯಲ್ಲಿ ಹೇಳಲಾಗಿದೆ. ಈ ವಿಷಯದ ಬಗ್ಗೆ ಪ್ರಾಮಾಣಿಕ ತನಿಖೆ ಮತ್ತು ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮವನ್ನು ನಿರೀಕ್ಷಿಸುವುದಾಗಿ ಭಾರತವು ಪಾಕಿಸ್ತಾನದ ರಾಜತಾಂತ್ರಿಕರಿಗೆ ತಿಳಿಸಿದೆ ಎಂದು ಅದು ಹೇಳಿದೆ.

ಪಾಕಿಸ್ತಾನದ ಪಂಜಾಬ್‌ನ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಅವರು ಆಕ್ರೋಶವನ್ನು ಪರಿಗಣಿಸಿ ಮತ್ತು ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿಯಿಂದ ವರದಿಯನ್ನು ಕೇಳಿದ್ದಾರೆ. ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುವುದು ಎಂದು ಬುಜ್ದಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ "ಎಲ್ಲಾ ಧರ್ಮಗಳನ್ನು ಗೌರವಿಸಲಾಗುತ್ತದೆ" ಎಂದು ಅವರು ಪುನರುಚ್ಚರಿಸಿದ್ದಾರೆ.

ಜೊತೆಗೆ ಪಾಕಿಸ್ತಾನದ ಪಂಜಾಬ್‌ನ ಪೊಲೀಸರು ಘಟನೆಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ತನಿಖೆ ನಡೆಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಫವಾದ್ ಹುಸೇನ್ ಕೂಡ ಟ್ವಿಟರ್‌ನಲ್ಲಿ ಬಟ್ಟೆ ಬ್ರಾಂಡ್ ಮಾಲೀಕರು ಮತ್ತು ಮಾಡೆಲ್‌ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. "ಕರ್ತಾರಪುರ ಸಾಹಿಬ್ ಧಾರ್ಮಿಕ ಸಂಕೇತವಾಗಿದೆ ಮತ್ತು ಚಲನಚಿತ್ರ ಸೆಟ್ ಅಲ್ಲ" ಎಂದು ಅವರು ಬರೆದಿದ್ದಾರೆ. ಸ್ವಲಾ ವಿರುದ್ಧ ತನಿಖೆ ನಡೆಸಿ, ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಪಾಕ್ ಪೊಲೀಸರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟೀಕೆ, ವ್ಯಂಗ್ಯ, ವಿರೋಧ ವ್ಯಕ್ತವಾದ ಬೆನ್ನಲ್ಲೆ ಸ್ವಲಾ ತಮ್ಮ ಫೋಟೋಗಳನ್ನೆಲ್ಲ ಡಿಲೀಟ್ ಮಾಡಿ, ಇನ್‌ಸ್ಟಾಗ್ರಾಂನಲ್ಲಿ ಕ್ಷಮೆ ಕೇಳಿದ್ದಾರೆ. ನನಗೆ ಯಾರಿಗೂ ಅವಮಾನ ಮಾಡುವ, ಯಾರ ಭಾವನೆಗೂ ಧಕ್ಕೆ ಉಂಟು ಮಾಡುವ ಉದ್ದೇಶ ಇರಲಿಲ್ಲ. ಕರ್ತಾರಪುರ ಸಾಹೀಬ್‌ಗೆ ಪ್ರವಾಸಕ್ಕೆ ಹೋಗಿದ್ದೆ. ಅದರ ನೆನಪಿಗಾಗಿ ಫೋಟೋಗಳನ್ನು ತೆಗೆಸಿಕೊಂಡಿದ್ದೆ. ಕಾರ್ತರಪುರದ ಇತಿಹಾಸ, ಸಿಝ್ ಸಮುದಾಯದ ಆಚರಣೆ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ನಾನು ಅಲ್ಲಿಗೆ ಹೋಗಿದ್ದೆ. ನಾನು ಒಂದು ಸಮುದಾಯದ ಸಂಸ್ಕೃತಿ, ನಂಬಿಕೆಗೆ ಧಕ್ಕೆ ತಂದಿದ್ದೇನೆ ಎಂದು ಹೇಳಲಾಗುತ್ತಿದೆ. ಹಾಗೆ ಭಾವಿಸಬೇಡಿ. ನನ್ನ ಮನಸಲ್ಲಿ ಅಂಥ ಭಾವನೆ ಇರಲಿಲ್ಲ. ದಯವಿಟ್ಟು ಕ್ಷಮಿಸಿ ಎಂದು ತಮ್ಮ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ.

English summary
India on Tuesday summoned Pakistan's second senior-most diplomat in the country to convey "deep concern" over the incident in Kartarpur Sahib involving a Pakistani model and a clothing brand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X