ಜಪಾನ್ ಚುನಾವಣೆಯಲ್ಲಿ ಅಬೆಗೆ ಭರ್ಜರಿ ಗೆಲುವು, ಮೋದಿ ಅಭಿನಂದನೆ
ನವದೆಹಲಿ, ಅಕ್ಟೋಬರ್ 23: ಜಪಾನ್ ಸಂಸತ್ತಿಗೆ ನಡೆದ ಅವಧಿಪೂರ್ವ ಚುನಾವಣೆಯಲ್ಲಿ ಹಾಲಿ ಪ್ರಧಾನಿ ಶಿಂಜೋ ಅಬೆ ಗೆಲುವು ಸಾಧಿಸಿದ್ದಾರೆ. ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಭಾನುವಾರ ಜಪಾನ್ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಶಿಂಜೋ ಅಬೆಯವರ ಎಲ್.ಡಿ.ಎಫ್ ನೇತೃತ್ವದ ಮೈತ್ರಿಕೂಟ ಮೂರನೇ ಎರಡರಷ್ಟು ಬಹುಮತ ಪಡೆದಿದೆ. ಈ ಮೂಲಕ ಭರ್ಜರಿ ಗೆಲುವಿನೊಂದಿಗೆ ಅಬೆ ಎರಡನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

"ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನನ್ನ ಗೆಳೆಯ ಶಿಂಜೋ ಅಬೆಯವರಿಗೆ ಹೃದಯಪೂರ್ವಕ ಅಭಿನಂದನೆಗಳು. ಅವರ ಜತೆಗೂಡಿ ಭಾರತ-ಜಪಾನ್ ಸಂಬಂಧ ಮತ್ತಷ್ಟು ವೃದ್ಧಿಸುವುದನ್ನು ಎದುರು ನೋಡುತ್ತಿದ್ದೇನೆ," ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Heartiest greetings to my dear friend @AbeShinzo on his big election win. Look forward to further strengthen India-Japan relations with him.
— Narendra Modi (@narendramodi) October 23, 2017
ನರೇಂದ್ರ ಮೋದಿ ಮತ್ತು ಶಿಂಜೋ ಅಬೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇತ್ತೀಚೆಗೆ ಜಪಾನ್ ಶೃಂಗ ಸಮ್ಮೇಳನದಲ್ಲಿ ಭಾಗವಹಿಸಲು ಶಿಂಜೋ ಅಬೆ ಭಾರತಕ್ಕೆ ಭೇಟಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications