Modi-Trump: ಅಮೆರಿಕ - ಭಾರತ ತೆರಿಗೆ ಸಮರಕ್ಕೆ ಬ್ರೇಕ್: ಸುಂಕ ಶೇ 18ರಷ್ಟು ಇಳಿಕೆ, ಗೆಳಯನೊಂದಿಗೆ ಮಾತನಾಡಿದೆ ಮೋದಿ ಟ್ವೀಟ್
Modi-Trump Tariff Reduction: ಭಾರತ ಹಾಗೂ ಅಮೆರಿಕದ ನಡುವೆ ಕಳೆದ ಐದಾರು ತಿಂಗಳಿನಿಂದಲೂ ಸೃಷ್ಟಿಯಾಗಿದ್ದ ಗೊಂದಲಕ್ಕೆ ತೆರೆ ಬಿದ್ದಿದೆ. ಭಾರತ ಹಾಗೂ ಅಮೆರಿಕದ ನಡುವೆ ಕಳೆದ ಐದಾರು ತಿಂಗಳಿನಿಂದಲೂ ತೆರಿಗೆ ವಿಚಾರಕ್ಕೆ ಸಂಘರ್ಷ ಏರ್ಪಟ್ಟಿತ್ತು. ರಷ್ಯಾದಿಂದ ಭಾರತವು ಕಚ್ಚಾ ತೈಲವನ್ನು ಖರೀದಿ ಮಾಡುತ್ತಿರುವುದನ್ನು ವಿರೋಧಿಸಿದ್ದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಪರೀತವಾದ ತೆರಿಗೆಯನ್ನು ವಿಧಿಸಿದ್ದರು. ಇದೀಗ ಕೊನೆಗೂ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕರೆ ಮಾಡಿದ್ದಾರೆ. ಭಾರತದ ಮೇಲೆ ವಿಧಿಸಲಾಗಿದ್ದ ಸುಂಕವನ್ನು ಅಮೆರಿಕ ಶೇ 25ರಿಂದ 18ಕ್ಕೆ ಇಳಿಸಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ್ದು. ಭಾರತದ ಮೇಲಿನ ಸುಂಕವನ್ನು ಇಳಿಸಿರುವುದಾಗಿ ಹೇಳಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ವೈರಲ್ ಆಗುತ್ತಿದೆ. ಅಮೆರಿಕದ ಸುಂಕ ಇಳಿಕೆ ಹಾಗೂ ಡೊನಾಲ್ಡ್ ಟ್ರಂಪ್ ಪೋನ್ ಕಾಲ್‌ನ ಬಗ್ಗೆ ನರೇಂದ್ರ ಮೋದಿ ಅವರು ಸಂತೋಷದಿಂದ ಟ್ವೀಟ್ ಮಾಡಿದ್ದಾರೆ.

Modi-Trump Tariff Reduction: ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ನನ್ನ ಆತ್ಮೀಯ ಗೆಳೆಯ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿದ್ದು ಅದ್ಭುತವಾಗಿತ್ತು. ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಈಗ 18% ಕಡಿಮೆ ಸುಂಕ ಇರಲಿದೆ ಎನ್ನುವುದು ಸಂತೋಷ ತಂದಿದೆ. ಈ ಅದ್ಭುತ ಘೋಷಣೆಗಾಗಿ ಭಾರತದ 1.4 ಶತಕೋಟಿ ಜನರ ಪರವಾಗಿ ಅಧ್ಯಕ್ಷ ಟ್ರಂಪ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಎರಡು ದೊಡ್ಡ ಆರ್ಥಿಕತೆಗಳು ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಗಳು ಒಟ್ಟಾಗಿ ಕೆಲಸ ಮಾಡಿದಾಗ, ಅದು ನಮ್ಮ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಪರಸ್ಪರ ಪ್ರಯೋಜನಕಾರಿ ಸಹಕಾರಕ್ಕಾಗಿ ಅಪಾರ ಅವಕಾಶಗಳನ್ನು ತೆರೆಯುತ್ತದೆ.
Wonderful to speak with my dear friend President Trump today. Delighted that Made in India products will now have a reduced tariff of 18%. Big thanks to President Trump on behalf of the 1.4 billion people of India for this wonderful announcement.
— Narendra Modi (@narendramodi) February 2, 2026
When two large economies and the…
ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಅಧ್ಯಕ್ಷ ಟ್ರಂಪ್ ಅವರ ನಾಯಕತ್ವ ಅತ್ಯಗತ್ಯ. ಶಾಂತಿಗಾಗಿ ಅವರ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಮ್ಮ ಪಾಲುದಾರಿಕೆಯನ್ನು ಅಭೂತಪೂರ್ವ ಎತ್ತರಕ್ಕೆ ಕೊಂಡೊಯ್ಯಲು ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications