ಫ್ರಾನ್ಸ್‌ಗೆ ಮೋದಿ ಭೇಟಿ: ಭಾರತೀಯ ನೌಕಾಪಡೆಗೆ ಸೇರಲಿವೆ 26 ರಫೇಲ್ ಯುದ್ಧ ವಿಮಾನ
ದೇಶದಲ್ಲಿ ಭಾರೀ ಸಂಚಲನ ಮೂಡಿಸಿದ್ದ ರಫೇಲ್ ಯುದ್ಧ ವಿಮಾನಗಳ ಖರೀದಿ ಅಂತಿಮ ಹಂತವನ್ನು ತಲುಪಿದೆ. ರಫೇಲ್ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಈ ವಿಚಾರವಾಗಿ ಭಾರೀ ಪರ - ವಿರೋಧ ವ್ಯಕ್ತವಾಗಿತ್ತು. ದೇಶದ ರಕ್ಷಣೆ ವಿಷಯಗಳ ಬಗ್ಗೆ ಕಾಂಗ್ರೆಸ್ ಅನವಶ್ಯಕ ಚರ್ಚೆ ನಡೆಸುತ್ತಿದೆ ಎಂದು ಬಿಜೆಪಿ ದೂರಿತ್ತು.
ಇದೀಗ ಪ್ಯಾರಿಸ್‌ನಲ್ಲಿ ನಡೆಯಲಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence Action) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಫ್ರಾನ್ಸ್‌ನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿಯಲ್ಲಿ ಪ್ಯಾರಿಸ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ. ಇದರ ನಡುವೆ ಯುದ್ಧ ವಿಮಾನಗಳ ಖರೀದಿ ವಿಚಾರ ಮುನ್ನೆಲೆಗೆ ಬಂದಿದೆ. ಇದರ ವಿವರ ಇಲ್ಲಿದೆ.

ಭಾರತ ಹಾಗೂ ಫ್ರಾನ್ಸ್‌ನ ನಡುವೆ ಎರಡು ಪ್ರಮುಖ ಹಾಗೂ ದೊಡ್ಡ ಮಟ್ಟದ ರಕ್ಷಣಾ ಒಪ್ಪಂದಗಳು ಅಂತಿಮ ಹಂತಕ್ಕೆ ಬಂದು ತಲುಪಿವೆ.
ಭಾರತೀಯ ನೌಕಾಪಡೆಗೆ 26 ರಫೇಲ್-ಎಂ ಫೈಟರ್ ಜೆಟ್‌ಗಳ ಖರೀದಿ ಹಾಗೂ ಮೂರು ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳ ಖರೀದಿ ಇದರಲ್ಲಿ ಸೇರಿದೆ ಎಂದು ಹೇಳಲಾಗಿದೆ. ದೇಶದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಪ್ರಮುಖ ಒಪ್ಪಂದಗಳ ವಿಚಾರವು ಮುಂದಿನ ಎರಡು ವಾರಗಳಲ್ಲಿ ಭಾರತದ ಭದ್ರತಾ ಸಂಪುಟ ಸಮಿತಿಯ ಮುಂದೆ ಇರಿಸಿ ಅನುಮೋದನೆ ಪಡೆದುಕೊಳ್ಳುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ.
ರಫೇಲ್ ಯುದ್ಧ ವಿಮಾನಗಳ ವಿಚಾರವು ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಒಪ್ಪಂದಗಳಲ್ಲಿ ಒಂದಾಗಿದೆ. ಇದು ಬರೋಬ್ಬರಿ 10 ಬಿಲಿಯನ್‌ಗಿಂತಲೂ ಹೆಚ್ಚು ಮೊತ್ತದ ರಕ್ಷಣಾ ಒಪ್ಪಂದ ಇದಾಗಿದೆ ಎಂದು ಹೇಳಲಾಗಿದೆ. ದೇಶದ ರಕ್ಷಣಾ ಕ್ಷೇತ್ರಕ್ಕೆ ಇದರಿಂದ ಆನೆ ಬಲ ಬರಲಿದೆ ಎಂದೇ ಹೇಳಲಾಗಿತ್ತು. ಆದರೆ, ಈ ಯುದ್ಧ ವಿಮಾನದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎನ್ನುವ ವಿಚಾರ ಜೋರಾಗಿ ಚರ್ಚೆಗೆ ಒಳಪಟ್ಟಿತ್ತು.

ಪ್ರಧಾನಿ ಮೋದಿಗೆ ಆಹ್ವಾನ: ಪ್ಯಾರಿಸ್‌ನಲ್ಲಿ ನಡೆಯಲಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಕೊಡಲಾಗಿದೆ. ಇದೇ ಫೆಬ್ರವರಿ 10 ಹಾಗೂ 11ರಂದು ಈ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭಕ್ಕೆ ಮೋದಿ ಅವರಿಗೂ ಆಹ್ವಾನ ನೀಡಿರುವುದಾಗಿ ಫ್ರೆಂಚ್ ಅಧ್ಯಕ್ಷರ ಕಚೇರಿಯಿಂದ ಅಧಿಕೃತ ಪ್ರಕಟಣೆ ನೀಡಲಾಗಿದೆ.
64 ಕೋಟಿ ಲಂಚ ಪ್ರಕರಣ: ಕೋಟ್ಯಾಂತರ ರೂಪಾಯಿ ಮೊತ್ತದ ಯುದ್ಧ ವಿಮಾನ ಖರೀದಿಯಲ್ಲಿ ಮಧ್ಯವರ್ತಿ ಸುಸೇನ್ ಗುಪ್ತಾಗೆ ಫ್ರಾನ್ಸ್ ಸಂಸ್ಥೆ ಡಸಾಲ್ಟ್ ಏವಿಯೇಷನ್ ಎನ್ನುವುದರಿಂದ ಬರೋಬ್ಬರಿ 64 ಕೋಟಿ ರೂಪಾಯಿ ಲಂಚ ನೀಡಲಾಗಿತ್ತು ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು. 2009 ಹಾಗೂ 2012ರ ಅವಧಿಯಲ್ಲಿ ಈ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications