ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಭುಗಿಲೆದ್ದ ಯುದ್ಧದ ಕಿಚ್ಚು: ಸೇಡು ತೀರಿಸಿಕೊಳ್ಳುವ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ!
Mojtaba Khamenei: ಅಮೆರಿಕ ಮತ್ತು ಇಸ್ರೇಲ್‌ನ ದಾಳಿಗಳಿಗೆ ಸಂಬಂಧಿಸಿದಂತೆ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. "ಶತ್ರುಗಳಿಂದ ನಾವು ಪರಿಹಾರ ಪಡೆಯುತ್ತೇವೆ ಅಥವಾ ಅಷ್ಟೇ ಪ್ರಮಾಣದಲ್ಲಿ ಅವರ ಆಸ್ತಿಪಾಸ್ತಿಗಳನ್ನು ನಾಶ ಮಾಡುತ್ತೇವೆ" ಎಂದು ಅವರು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಅಮೆರಿಕದ ವಿರುದ್ಧ ಆರ್ಥಿಕ ಮತ್ತು ಭದ್ರತಾ ಒತ್ತಡ ಹೇರುವ ಉದ್ದೇಶದಿಂದ ಹೋರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವನ್ನು ನಿರ್ಬಂಧಿಸುವುದನ್ನು ಮುಂದುವರೆಸಲಾಗುತ್ತದೆ. ಮಧ್ಯಪ್ರಾಚ್ಯದ ನೆರೆಯ ರಾಷ್ಟ್ರಗಳ ಮೇಲಿನ ದಾಳಿಗಳನ್ನು ಇರಾನ್ ನಿಲ್ಲಿಸುವುದಿಲ್ಲ, ಅವು ಮುಂದುವರಿಯಲಿವೆ," ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ ಮೊಜ್ತಬಾ ಖಮೇನಿ ಹೇಳಿಕೆ
ಅಮೆರಿಕ ಮತ್ತು ಇರಾನ್ ನಡುವಿನ ತಿಕ್ಕಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಉಲ್ಬಣಗೊಂಡಿರುವ ಸಮಯದಲ್ಲಿ ಅವರು ಈ ಹೇಳಿಕೆ ನೀಡಿದ್ದು, ಇದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
"ತಕ್ಕ ಪ್ರತ್ಯುತ್ತರ ನೀಡಲಾಗುವುದು"
"ಮಿನಾಬ್ ಶಾಲೆಯ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅವರು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು," ಎಂದು ಆಜ್ಞೆ ಮಾಡಿದ್ದಾರೆ. ಭದ್ರತೆಯ ದೃಷ್ಟಿಯಿಂದ ಮೊಜ್ತಬಾ ಖಮೇನಿ ಅವರು ನೇರವಾಗಿ ಕ್ಯಾಮರಾ ಮುಂದೆ ಬಂದಿಲ್ಲ. ಅವರ ಈ ಹೇಳಿಕೆಯನ್ನು ಸರ್ಕಾರಿ ಮಾಧ್ಯಮದ ಸುದ್ದಿ ನಿರೂಪಕರೊಬ್ಬರು ಓದಿದ್ದಾರೆ ಎಂದು ವರದಿಯಾಗಿದೆ.
ಫೆಬ್ರವರಿ 28, 2026ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟ ನಂತರ, ದೇಶದ ರಾಜಕೀಯ ಮತ್ತು ಭದ್ರತಾ ಪರಿಸ್ಥಿತಿ ತೀವ್ರ ಬದಲಾವಣೆ ಕಂಡಿದೆ. ಈ ಬಿಕ್ಕಟ್ಟಿನ ಸಮಯದಲ್ಲಿ, ಇರಾನ್‌ನ ತಜ್ಞರ ಸಭೆಯು ಅಲಿ ಖಮೇನಿ ಅವರ ಎರಡನೇ ಪುತ್ರ, 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ದೇಶದ ಮೂರನೇ ಸರ್ವೋಚ್ಚ ನಾಯಕರನ್ನಾಗಿ ನೇಮಕ ಮಾಡಿದೆ. 1979ರ ಇಸ್ಲಾಮಿಕ್ ಕ್ರಾಂತಿಯ ನಂತರ ಮೊದಲ ಬಾರಿಗೆ ಅಧಿಕಾರವು ತಂದೆಯಿಂದ ಮಗನಿಗೆ ಹಸ್ತಾಂತರವಾಗಿದೆ.
ಮೊಜ್ತಬಾ ಖಮೇನಿ ಅವರು ದಶಕಗಳಿಂದ ತಮ್ಮ ತಂದೆಯ ಆಡಳಿತದಲ್ಲಿ ಪ್ರಭಾವಿ ವ್ಯಕ್ತಿಯಾಗಿ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೊಂದಿಗೆ ಆಳವಾದ ಸಂಬಂಧವನ್ನು ಹೊಂದಿರುವ ಅವರು, ಅನುಭವಿ ನಾಯಕ ಎಂದು ಗುರುತಿಸಲ್ಪಟ್ಟಿದ್ದಾರೆ. ಆದರೆ, ಅವರು ಈ ಹಿಂದೆ ಯಾವುದೇ ಚುನಾಯಿತ ಸರ್ಕಾರಿ ಹುದ್ದೆಯನ್ನು ಅಲಂಕರಿಸಿರಲಿಲ್ಲ ಎಂಬುದು ಗಮನಾರ್ಹ. ಅವರ ನೇಮಕವು ಇರಾನ್‌ನಲ್ಲಿ ವಂಶಪಾರಂಪರ್ಯ ಆಡಳಿತದ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ.
ಪ್ರಸ್ತುತ ಅಮೆರಿಕ-ಇಸ್ರೇಲ್ ಯುದ್ಧದ ನಡುವೆಯೇ ಅಧಿಕಾರ ವಹಿಸಿಕೊಂಡಿರುವ ಮೊಜ್ತಬಾ, ತಮ್ಮ ಮೊದಲ ಸಾರ್ವಜನಿಕ ಸಂದೇಶದಲ್ಲಿ (ಲಿಖಿತ ರೂಪದಲ್ಲಿ) ಹೋರ್ಮುಜ್ ಜಲಸಂಧಿಯನ್ನು ಅಮೆರಿಕದ ವಿರುದ್ಧ ಅಸ್ತ್ರವಾಗಿ ಬಳಸುವುದಾಗಿ ಘೋಷಿಸಿದ್ದಾರೆ. ಯುದ್ಧದ ಆರಂಭಿಕ ದಿನಗಳಲ್ಲಿ ನಡೆದ ದಾಳಿಯಲ್ಲಿ ಮೊಜ್ತಬಾ ಗಾಯಗೊಂಡಿದ್ದಾರೆ ಎಂಬ ವರದಿಗಳಿದ್ದು, ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಸುರಕ್ಷಿತ ಸ್ಥಳದಿಂದಲೇ ಆಡಳಿತ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಂದೆಯು ತಮ್ಮ ಉತ್ತರಾಧಿಕಾರಿಯಾಗಿ ಮೊಜ್ತಬಾ ಅವರ ಆಯ್ಕೆಯನ್ನು ವಿರೋಧಿಸಿದ್ದರು ಎಂಬ ವರದಿಗಳು ಹೊರಬಿದ್ದಿರುವ ನಡುವೆಯೇ, ಇರಾನ್‌ನ ಸವಾಲಿನ ಪರಿಸ್ಥಿತಿಯಲ್ಲಿ ಅವರ ನಾಯಕತ್ವವು ಭಾರಿ ಕುತೂಹಲ ಹುಟ್ಟುಹಾಕಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications