ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

24 ಗಂಟೆಯಲ್ಲಿ 100ಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ಪಕ್ಕಾ!

|
Google Oneindia Kannada News

ಜೆರುಸಲೆಂ, ಮಾರ್ಚ್.18: ಚೀನಾದಲ್ಲಿ ಹುಟ್ಟಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಡ್ರ್ಯಾಗನ್ ರಾಷ್ಟ್ರದಲ್ಲೇ ಕುಸಿತ ಕಂಡಿದೆ. ಆದರೆ ಹೊರರಾಷ್ಟ್ರಗಳಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ.

ಇಸ್ರೇಲ್ ನಲ್ಲಿ ಕಳೆದ 24 ಗಂಟೆಗಳಲ್ಲೇ ಶೇ.40ರಷ್ಟು ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಇದುವರೆಗೂ ರಾಷ್ಟ್ರದಲ್ಲಿ 427ಕ್ಕೂ ಅಧಿಕ ಮಂದಿಗೆ ಸೋಂಕು ತಗಲಿರುವುದನ್ನು ಇಸ್ರೇಲ್ ಆರೋಗ್ಯ ಸಚಿವರು ದೃಢಪಡಿಸಿದ್ದಾರೆ.

ಚೀನಾದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಕೇಳಿದರೆ ಅಚ್ಚರಿ!ಚೀನಾದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಕೇಳಿದರೆ ಅಚ್ಚರಿ!

ಗೃಹ ದಿಗ್ಬಂಧನದಲ್ಲಿ ಸೋಂಕಿತರನ್ನು ಇರಿಸಿದ್ದು ತಂತ್ರಜ್ಞಾನದ ಸಹಾಯದಿಂದ ಅವರ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ. ಪ್ರತಿನಿತ್ಯ 3 ಸಾವಿರಕ್ಕೂ ಅಧಿಕ ಮಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ಬೆಂಜಿಮನ್ ನೆತನ್ಯಾಹು ತಿಳಿಸಿದ್ದಾರೆ.

 More Than 100 Infected Cases Found Last 24 Hours In Israel

24 ಗಂಟೆ 100ಕ್ಕೂ ಹೆಚ್ಚು ಸೋಂಕಿತರು ಪತ್ತೆ:

ಇಸ್ರೇಲ್ ನಲ್ಲಿ ಪ್ರತಿದಿನ 100ಕ್ಕೂ ಹೆಚ್ಚು ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿರುವ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ ಎಂದು ಆರೋಗ್ಯ ಸಚಿವರ ನಿರ್ದೇಶಕ ಮೊಶೆ ಬಾರ್ ಸಿಮನ್-ತೊವ್ ತಿಳಿಸಿದ್ದಾರೆ. ಸೋಮವಾರ 304 ಜನರಿಗೆ ಕೊರೊನಾ ವೈರಸ್ ಸೋಂಕು ತಗಲಿದ್ದು, ಮಂಗಳವಾರ ಒಂದೇ ದಿನ 123 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು, ಬುಧವಾರ 90ಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ತಗಲಿರುವುದು ದೃಢಪಟ್ಟಿದೆ.

English summary
Coronavirus: More Than 100 Infected Cases Found Last 24 Hours In Israel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X