ಜರ್ಮನಿಯಲ್ಲಿ ಭಾರೀ ಪ್ರವಾಹ; ಮೂವತ್ತು ಮಂದಿ ಸಾವು
ಬರ್ಲಿನ್, ಜುಲೈ 15: ಜರ್ಮನಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಲ್ಲಿ ಗುರುವಾರ ಸುಮಾರು ಮೂವತ್ತು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಜರ್ಮನಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಹಲವು ಮನೆಗಳು ನಾಶವಾಗಿ ರಸ್ತೆಗಳು ಜಲಾವೃತವಾಗಿವೆ. ರಹಿನೆಲ್ಯಾಂಡ್-ಪಾಲಟಿನೇಟ್ ಎಂಬಲ್ಲಿ ಬುಧವಾರ ರಾತ್ರಿ ಪ್ರವಾಹದಲ್ಲಿ ಆರು ಮನೆಗಳು ಕುಸಿದುಬಿದ್ದಿವೆ ಎಂದು ಎಸ್ಡಬ್ಲುಆರ್ ಬ್ರಾಡ್ಕಾಸ್ಟರ್ ತಿಳಿಸಿದೆ.
ಯುಸ್ಕಿರ್ಚೆನ್ ಎಂಬಲ್ಲಿ ಪ್ರವಾಹದಲ್ಲಿ ಸುಮಾರು ಮೂವತ್ತು ಮಂದಿ ಸಾವನ್ನಪ್ಪಿದ್ದು, 70ಕ್ಕೂ ಅಧಿಕ ಮಂದಿ ಕಣ್ಮರೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿರುವುದಾಗಿ ಮಾಹಿತಿ ನೀಡಿದ್ದಾರೆ.

ಹೆಲಿಕಾಪ್ಟರ್ ಹಾಗೂ ಬೋಟ್ಗಳ ಮುಖಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗುತ್ತಿದೆ. 200 ಯೋಧರನ್ನು ಜರ್ಮನ್ ಸೇನೆ ರಕ್ಷಣಾ ಕಾರ್ಯಕ್ಕೆ ನಿಯೋಜಿಸಿದೆ.
ಪರ್ವತ ಪ್ರದೇಶದ ಶ್ಲುಲ್ಡ್ ಗ್ರಾಮದಲ್ಲಿ 25ಕ್ಕೂ ಹೆಚ್ಚು ಮನೆಗಳು ಕುಸಿಯುವ ಹಂತದಲ್ಲಿವೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಜನರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಗೊಳಿಸಲಾಗುತ್ತಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications