Dawood Ibrahim: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲು, ಕಾರಣವೇನು..?
ಪಾಕಿಸ್ತಾನ, ಡಿಸೆಂಬರ್ 18: ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿದ್ದಾನೆ. ವಿಷಪ್ರಾಶಾನದಿಂದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಈ ಹಿಂದೆಯೇ ಖಾಯಿಲೆಯಿಂದ ಬಳಲುತ್ತಿದ್ದ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದ್ದು, ಕಳೆದ ಎರಡು ದಿನಗಳಿಂದ ಕರಾಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತದಿಂದ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಖಚಿತಪಡಿಸಿಲ್ಲ. ಹಾಗೂ ಆಸ್ಪತ್ರೆಗೆ ದಾಖಲಾದ ಕಾರಣದ ಬಗ್ಗೆಯೂ ಯಾವುದೇ ದೃಢೀರಣವಿಲ್ಲ.

ಪಾಕಿಸ್ತಾನದ ಕರಾಚಿ ಆಸ್ಪತ್ರೆಯ ಒಂದು ಪ್ರತ್ಯೇಕ ಮಹಡಿಯಲ್ಲಿ ಇದ್ದ ರೋಗಿಗಳನ್ನು ಬೇರೆ ಕಡೆಗೆ ಶಿಫ್ಟ್ ಮಾಡಿ, ದಾವೂದ್ ಇಬ್ರಾಹಿಂಗೆ ಮಾತ್ರ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ಹಾಗೂ ಆಸ್ಪತ್ರೆಗೆ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಪ್ರಥಮ ಹಂತದ ಆಪ್ತರಿಗಷ್ಟೇ ಆಸ್ಪತ್ರೆಯ ದಾವೂದ್ ಇಬ್ರಾಹಿಂ ಕೊಠಡಿಗೆ ಬಿಡಲಾಗುತ್ತಿದೆ ಎಂದು ವರದಿಯಾಗಿದೆ.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ದಾವೂದ್ ಇಬ್ರಾಹಿಂ ಆರೋಗ್ಯದ ಬಗ್ಗೆ ಹಾಗೂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಹಲವು ವಿಚಾರಗಳು ಹರಿದಾಡುತ್ತಿದ್ದು, ಈವರೆಗೂ ಅಧೀಕೃತವಾಗಿ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ.
ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಯಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅಗ್ರಸ್ಥಾನದಲ್ಲಿದ್ದಾನೆ. ದಾವೂದ್ ಇಬ್ರಾಹಿಂ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. ಭಯೋತ್ಪಾದನೆ, ಮಾದಕವಸ್ತು ಕಳ್ಳಸಾಗಾಣಿಕೆ ಹಾಗೂ ಸಂಘಟಿತ ಅಪರಾಧ ಸೇರಿದಂತೆ ವಿವಿಧ ಗಂಭೀರ ಪ್ರಕರಣಗಳಲ್ಲಿ ದಾವೂದ್ ಇಬ್ರಾಹಿಂ ಪ್ರಮುಖ ಆರೋಪಿಯಾಗಿದ್ದಾನೆ. ಭಾರತ ಮತ್ತು ಅಮೆರಿಕದಿಂದ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸದ್ಯ ಪಾಕಿಸ್ತಾನದ ಕರಾಚಿಯಲ್ಲಿ ವಾಸವಾಗಿದ್ದಾನೆ ಎನ್ನಲಾಗಿದೆ.












Click it and Unblock the Notifications