Myanmar Earthquake: ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪ 100ಕ್ಕೂ ಹೆಚ್ಚು ಮಂದಿ ಸಾವು
Myanmar Earthquake: ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 1೦೦ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 2೦೦ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮ್ಯಾನ್ಮಾರ್ ಸಂಭವಿಸಿದ ಭೂಕಂಪದಿಂದ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಂದು ಮ್ಯಾಂಡಲೆಯಲ್ಲಿ ನೆಲೆಸಿರುವ ರಕ್ಷಣಾ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುತ್ತಲೇ ಇದೆ. ಮತ್ತೊಂದೆಡೆ ಅಲ್ಲಿನ ಜನರ ರಕ್ಷಣಾ ಕಾರ್ಯಾಚರಣೆಗಳಿ ನಡೆಯುತ್ತಿವೆ. ಆದರೆ ಸಾವಿನ ಸಂಖ್ಯೆ ಎಷ್ಟೆಂದು ಇನ್ನೂ ನಿಖರವಾಗಿ ತಿಳಿದಿಲ್ಲ. ಆದರೆ ಇದೀಗ ಸಾವನ್ನಪ್ಪಿದ್ದವರು ಕನಿಷ್ಠ ನೂರಾರು ಸಂಖ್ಯೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.
ಮ್ಯಾನ್ಮಾರ್‌ನಲ್ಲಿ ಸತತ ಎರಡು ಭೂಕಂಪಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ಮಧ್ಯ ಮ್ಯಾನ್ಮಾರ್‌ನಲ್ಲಿದ್ದು, ಸಾಗಿಂಗ್ ನಗರದ ವಾಯುವ್ಯಕ್ಕೆ ಸುಮಾರು 16 ಕಿ.ಮೀ ಕಿಲೋ ಮೀಟರ್ ಇದೆ ಎಂದು ತಿಳಿದುಬಂದಿದೆ.
ಮ್ಯಾನ್ಮಾರ್‌ನ ಮಂಡಲೇಯಲ್ಲಿರುವ ಐಕಾನಿಕ್ ಅವಾ ಸೇತುವೆ ಭೂಕಂಪದಲ್ಲಿ ಕುಸಿದು ಬಿದ್ದಿದೆ. ಒಂದು ಮಸೀದಿ ಭಾಗಶಃ ಕುಸಿದು ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ. ಹಲವಾರು ಕಟ್ಟಡಗಳು ಕುಸಿದು ರಸ್ತೆಗಳು ಬಿರುಕು ಬಿಟ್ಟಿವೆ. ಈ ದೊಡ್ಡ ದೊಡ್ಡ ಅವಾಂತರಗಳಿಂದ ಇಲ್ಲಿನ ಜನರು ಬೆಚ್ಚಿ ಬಿದ್ದಿದ್ದಾರೆ.
ಥೈಲ್ಯಾಂಡ್‌ನ ಹಲವಾರು ಭಾಗಗಳಲ್ಲಿಯೂ ಭೂಕಂಪದ ಅನುಭವವಾಯಿತು. ಭೂಕಂಪದ ನಂತರ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಗಗನಚುಂಬಿ ಕಟ್ಟಡ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಹಲವು ಮಂದಿ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಭೂಕಂಪದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಹೇಳಿದ್ದಾರೆ. ಭಾರತೀಯ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಸೂಚನೆ ನೀಡಿದ್ದಾರೆ.












Click it and Unblock the Notifications