ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮ್ಯಾನ್ಮಾರ್: ಆಂಗ್ ಸಾನ್ ಸೂಕಿ ವಿರುದ್ಧ ಪ್ರಕರಣ ದಾಖಲು

|
Google Oneindia Kannada News

ನೇಪಿಡಾವ್, ಫೆಬ್ರವರಿ 3: ಸಂವಹನ ಸಾಧನಗಳನ್ನು ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿದ್ದ ಆರೋಪದಡಿ ಮ್ಯಾನ್ಮಾರ್‌ನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಮುಂದಿನ ವಿಚಾರಣೆಗಳಿಗಾಗಿ ಅವರನ್ನು ಫೆಬ್ರವರಿ 15ರವರೆಗೂ ಬಂಧನದಲ್ಲಿ ಇರಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮ್ಯಾನ್ಮಾರ್‌ನ ಸೇನೆಯು ಸೋಮವಾರ ಕ್ಷಿಪ್ರ ದಂಗೆ ನಡೆಸಿ ಅಧಿಕಾರವನ್ನು ತನ್ನ ಹಿಡಿತಕ್ಕೆ ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ನೊಬೆಲ್ ಶಾಂತಿ ಪುರಸ್ಕೃತೆ ಆಂಗ್ ಸಾನ್ ಸೂಕಿ ಅವರನ್ನು ವಶಕ್ಕೆ ತೆಗೆದುಕೊಂಡಿದೆ. ರಾಜಧಾನಿ ನೇಪಿಡಾವ್‌ನಲ್ಲಿನ ಸೂಕಿ ಅವರ ಮನೆಯಲ್ಲಿ ಶೋಧನೆ ನಡೆಸಿದ ಸಂದರ್ಭದಲ್ಲಿ ವಾಕಿ ಟಾಕಿ ರೇಡಿಯೋಗಳು ಪತ್ತೆಯಾಗಿವೆ. ಈ ರೇಡಿಯೋಗಳನ್ನು ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗಿದೆ ಮತ್ತು ಅನುಮತಿ ಇಲ್ಲದೆ ಬಳಸಲಾಗಿದೆ ಎಂದು 75 ವರ್ಷದ ಸೂಕಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದಿಢೀರ್ ಸೇನಾ ಕ್ರಾಂತಿ, ಸೂಕಿ ಅರೆಸ್ಟ್, ಚೀನಿ ಗ್ಯಾಂಗ್ ಕೈವಾಡ..?ದಿಢೀರ್ ಸೇನಾ ಕ್ರಾಂತಿ, ಸೂಕಿ ಅರೆಸ್ಟ್, ಚೀನಿ ಗ್ಯಾಂಗ್ ಕೈವಾಡ..?

ಉಚ್ಚಾಟಿತ ಅಧ್ಯಕ್ಷ ವಿನ್ ಮಿಂಟ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ.

Myanmar Police File Charges Against Ousted Leader Aung San Suu Kyi After Military Coup

ಸೇನಾ ಕ್ರಾಂತಿಯ ನಡುವೆಯೂ ತನ್ನ ವೃತ್ತಿ ಮರೆಯದ ಶಿಕ್ಷಕಿ..! ಸೇನಾ ಕ್ರಾಂತಿಯ ನಡುವೆಯೂ ತನ್ನ ವೃತ್ತಿ ಮರೆಯದ ಶಿಕ್ಷಕಿ..!

2020ರ ನವೆಂಬರ್‌ನಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನು ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಕಾರಣಕ್ಕೆ ರಾತ್ರೋರಾತ್ರಿ ಕ್ರಾಂತಿ ನಡೆಸಿದ ಅಲ್ಲಿನ ಸೇನೆ, ಒಂದು ವರ್ಷದವರೆಗೂ ತುರ್ತು ಪರಿಸ್ಥಿತಿ ಹೇರಿದ್ದು, ಹಂಗಾಮಿ ಅಧ್ಯಕ್ಷರನ್ನು ನೇಮಿಸಿದೆ.

English summary
Myanmar police have filed charges against ousted leader Aung San Suu Kyi for illegally importanting communications equipments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X