‘ಸಾಯುವವರೆಗೂ ಶೂಟ್ ಮಾಡಿ’: ಹೇಗಿತ್ತು ಗೊತ್ತಾ ಅಲ್ಲಿ ಸೇನೆಯ ದೌರ್ಜನ್ಯ..?
ಪೊಲೀಸರ ಕೈಗೆ ಸಬ್‌ಮಷಿನ್ ಗನ್ ಕೊಟ್ಟು, ಪ್ರತಿಭಟನೆ ನಡೆಸುವವರನ್ನು ಸಾಯುವವರೆಗೂ ಬಿಡಬೇಡಿ ಅಂತಾ ಮ್ಯಾನ್ಮಾರ್ ಸೇನಾಧಿಕಾರಿಗಳು ಆದೇಶ ನೀಡಿದ್ದರಂತೆ. ಮ್ಯಾನ್ಮಾರ್ ಮಿಲಿಟರಿ ದೌರ್ಜನ್ಯದಿಂದ ದೇಶ ಬಿಟ್ಟು ಭಾರತಕ್ಕೆ ಓಡಿ ಬಂದ ಮ್ಯಾನ್ಮಾರ್‌ನ ಪೊಲೀಸ್ ಅಧಿಕಾರಿಗಳು ಈ ಆಘಾತಕಾರಿ ವಿಚಾರ ತಿಳಿಸಿದ್ದಾರೆ.
ಮ್ಯಾನ್ಮಾರ್‌ನಲ್ಲಿ ಹೋರಾಟ ಹತ್ತಿಕ್ಕಲು ಸೇನೆ ಹಿಂಸೆಗೆ ಇಳಿದಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಾತನಾಡಿರುವ ಮ್ಯಾನ್ಮಾರ್ ಪೊಲೀಸ್ ಅಧಿಕಾರಿ ಥಾ ಪೆಂಗ್, ಖಂಪತ್ ಟೌನ್‌ನಲ್ಲಿ ಪ್ರತಿಭಟನಾಕಾರರನ್ನ ಓಡಿಸಲು ಸೇನೆ ನಮಗೆ ಸಬ್‌ಮಷಿನ್ ಗನ್ ನೀಡಿತ್ತು. ಪ್ರತಿಭಟನಾಕಾರರು ಸಾಯುವವರೆಗೂ ಗುಂಡುಗಳನ್ನ ಹಾರಿಸಿ ಎಂದು ಮಿಲಿಟರಿ ಅಧಿಕಾರಿಗಳು ಆದೇಶಿಸಿದ್ದರು ಅಂತಾ ಆರೋಪ ಮಾಡಿದ್ದಾರೆ ಥಾ ಪೆಂಗ್.
ಸೇನೆ ಹೇಳಿದಂತೆ ಕೇಳಲು ಒಪ್ಪದ ಪೊಲೀಸರ ಮೇಲೂ ದೌರ್ಜನ್ಯ ನಡೆದಿದೆ. ನನಗೂ ಇದೇ ರೀತಿ ಸಂಕಷ್ಟ ಇತ್ತು. ಈ ಕಾರಣಕ್ಕೆ ಅಲ್ಲಿಂದ ನಾನು ರಾತ್ರೋ ರಾತ್ರಿ ಎಸ್ಕೇಪ್ ಆದೆ ಎಂಬುದನ್ನ ಥಾ ಪೆಂಗ್ ವಿವರಿಸಿದ್ದಾರೆ.

ಪೊಲೀಸರನ್ನು ವಾಪಸ್ ಕಳಿಸಿ..!
ಕೆಲ ದಿನಗಳ ಹಿಂದೆ ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರನ್ನು ವಶಕ್ಕೆ ನೀಡಿ ಎಂದು ಒತ್ತಾಯಿಸಿ ಮ್ಯಾನ್ಮಾರ್ ಪತ್ರ ಬರೆದಿತ್ತು. ಉಭಯ ರಾಷ್ಟ್ರಗಳ ಸಂಬಂಧ ಮುಂದುವರಿಯಲು ಪೊಲೀಸ್ ಅಧಿಕಾರಿಗಳನ್ನು ಮ್ಯಾನ್ಮಾರ್‌ಗೆ ಹಸ್ತಾಂತರಿಸಿ ಅಂತಾ ಮಿಜೋರಾಂ ರಾಜ್ಯದ ಚಂಪೈ ಜಿಲ್ಲೆಯ ಉಪ ಆಯುಕ್ತೆಗೆ ಮ್ಯಾನ್ಮಾರ್‌ನ ಅಧಿಕಾರಿಗಳು ಪತ್ರ ಬರೆದಿದ್ದರು. ಪತ್ರ ಬರೆದ ಕೆಲವೇ ದಿನದಲ್ಲಿ ಆಘಾತಕಾರಿ ಅಂಶ ಬಯಲಾಗಿದೆ. ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರು ಅಲ್ಲಿನ ಭಯಾನಕ ಸ್ಥಿತಿಯನ್ನು ಬಿಡಿಸಿಟ್ಟಿದ್ದಾರೆ. ಮ್ಯಾನ್ಮಾರ್ ಜನರ ಸದ್ಯದ ಪರಿಸ್ಥಿತಿ ಹಾಗೂ ಹಿಂಸೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ.

ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ
ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಜನರನ್ನು ಮ್ಯಾನ್ಮಾರ್ ಸೇನೆ ಬಲಿಪಡೆದಿರುವ ಆರೋಪವಿದೆ. ಹೀಗಾಗಿ ನಾಗರಿಕರನ್ನ ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಆವರಿಸಿದೆ.

ಮಿಲಿಟರಿ ಆಡಳಿತ ಶುರು..!
ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ.

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?
ಮ್ಯಾನ್ಮಾರ್‌ನಲ್ಲಿ 2020ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್‌ಎಲ್‌ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದ ಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.

ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!
ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್‌ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನ ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್‌ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನ ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೆ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications