ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಿಢೀರ್ ಸೇನಾ ಕ್ರಾಂತಿ, ಸೂಕಿ ಅರೆಸ್ಟ್, ಚೀನಿ ಗ್ಯಾಂಗ್ ಕೈವಾಡ..?

|
Google Oneindia Kannada News

ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ, ರೊಹಿಂಗ್ಯಾ ಮುಸ್ಲೀಮರ ಪಾಲಿನ ವಿಲನ್, ವಿವಾದಾತ್ಮಕ ನಾಯಕಿ ಆಂಗ್ ಸಾನ್ ಸೂಕಿ ಬಂಧನವಾಗಿದೆ. ಸೋಮವಾರ ಸೂರ್ಯೋದಯದ ಹೊತ್ತಿಗೆ ಮ್ಯಾನ್ಮಾರ್‌ನಲ್ಲಿ ಸೇನಾ ಕ್ಷಿಪ್ರ ಕ್ರಾಂತಿ ನಡೆದು ಹೋಗಿತ್ತು. ಮ್ಯಾನ್ಮಾರ್‌ನ 'ನ್ಯಾಷನಲ್ ಲೀಗ್ ಫಾರ್ ಡೆಮಾಕ್ರಸಿ' ಪಕ್ಷದ ಮುಖ್ಯಸ್ಥೆ ಹಾಗೂ ಸ್ಟೇಟ್ ಕೌನ್ಸಿಲರ್ ಅಂದರೆ ಮ್ಯಾನ್ಮಾರ್‌ ಪ್ರಧಾನಿ ಆಂಗ್ ಸಾನ್ ಸೂಕಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಮ್ಯಾನ್ಮಾರ್‌ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ.

ರೊಹಿಂಗ್ಯಾ ನಿರಾಶ್ರಿತರಿಗೆ ಹೊಸ ಜಾಗ ಹುಡುಕಿದ ಬಾಂಗ್ಲಾದೇಶರೊಹಿಂಗ್ಯಾ ನಿರಾಶ್ರಿತರಿಗೆ ಹೊಸ ಜಾಗ ಹುಡುಕಿದ ಬಾಂಗ್ಲಾದೇಶ

ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಮತ್ತೊಂದ್ಕಡೆ ಸೂಕಿ ಬಂಧನ ರಾತ್ರಿಯೇ ಆಗಿದ್ದು, ವಿಷಯ ಮಾತ್ರ ಮುಂಜಾನೆ ಬಹಿರಂಗವಾಗಿದೆ ಎನ್ನಲಾಗುತ್ತಿದೆ. ಇದಿಷ್ಟೂ ಏಷ್ಯಾ ಖಂಡದ ದೇಶವನ್ನ ಅಲುಗಾಡುವಂತೆ ಮಾಡಿದೆ.

‘ಡ್ರ್ಯಾಗನ್ ಚೀನಿ’ ಗ್ಯಾಂಗ್ ಕೈವಾಡ..?

‘ಡ್ರ್ಯಾಗನ್ ಚೀನಿ’ ಗ್ಯಾಂಗ್ ಕೈವಾಡ..?

ಇಂತಹದ್ದೊಂದು ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಏಕೆಂದರೆ ಚೀನಾ ಜೊತೆಗೆ ಮ್ಯಾನ್ಮಾರ್‌ ಸುಮಾರು 2 ಸಾವಿರ ಕಿಲೋ ಮೀಟರ್‌ಗೂ ಹೆಚ್ಚು ವಿಸ್ತಿರ್ಣದ ಗಡಿ ಹಂಚಿಕೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಚೀನಾ ತನ್ನ ಅಕ್ಕಪಕ್ಕದ ದೇಶಗಳ ಮೇಲೆ ನಿಯಂತ್ರಣ ಸಾಧಿಸಲು ಕುತಂತ್ರ ಬುದ್ಧಿ ಬಳಸುತ್ತಿದೆ. ನೇಪಾಳದಲ್ಲೂ ಹೀಗೆ ಮಾಡಿದೆ ಚೀನಾ. ಇದೀಗ ಮ್ಯಾನ್ಮಾರ್‌ ಸೇನಾ ಕ್ರಾಂತಿಗೂ ಚೀನಾ ಬೆಂಬಲ ಇರಬಹುದು ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಏಕೆಂದರೆ ಮ್ಯಾನ್ಮಾರ್‌ ಪ್ರಜಾಪ್ರಭುತ್ವ ತತ್ವ ಅಳವಡಿಸಿಕೊಂಡಿರುವ ದೇಶ. ಆದರೆ ಮಾವೋವಾದಿ ಕಮ್ಯೂನಿಸ್ಟ್ ಸಿದ್ಧಾಂತದ ಚೀನಾಗೆ ಇದು ಬಿಲ್‌ಕುಲ್ ಇಷ್ಟವಿಲ್ಲ.

ರೊಹಿಂಗ್ಯಾ ಮುಸ್ಲೀಮರ ನರಮೇಧ

ರೊಹಿಂಗ್ಯಾ ಮುಸ್ಲೀಮರ ನರಮೇಧ

ಮ್ಯಾನ್ಮಾರ್‌ ಕಳೆದ ಹಲವು ವರ್ಷಗಳಿಂದಲೂ ಜಗತ್ತಿನಾದ್ಯಂತ ಸುದ್ದಿಯಲ್ಲಿದೆ. ಮ್ಯಾನ್ಮಾರ್‌ನಲ್ಲಿ ಲಕ್ಷಾಂತರ ರೊಹಿಂಗ್ಯಾ ಮುಸ್ಲೀಮರ ನರಮೇಧ ನಡೆದಿದೆ. ಹತ್ತಾರು ಲಕ್ಷ ರೊಹಿಂಗ್ಯಾ ಮುಸ್ಲೀಮರು ದೇಶ ಬಿಟ್ಟು ಹೊರ ಬಂದಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಸೃಷ್ಟಿಗೆ ಮ್ಯಾನ್ಮಾರ್‌ ಪ್ರಧಾನಿ ಆಂಗ್ ಸಾನ್ ಸೂಕಿ ಕಾರಣ ಎಂದು ಆರೋಪಿಸಲಾಗಿತ್ತು. ಮಿಲಿಟರಿ ಬಲ ಬಳಸಿ ಅಮಾಯಕರನ್ನ ಹತ್ಯೆ ಮಾಡಿರುವ ಆರೋಪ ಸೂಕಿ ಮೇಲಿದೆ. ಈ ಮಧ್ಯೆ ಮ್ಯಾನ್ಮಾರ್‌ ಸೇನೆ ಆಂಗ್ ಸಾನ್ ಸೂಕಿ ವಿರುದ್ಧವೇ ತಿರುಗಿಬಿದ್ದಿರುವುದು ಆಶ್ಚರ್ಯ ಮೂಡಿಸಿದೆ.

'ಕಣ್ಣಿಗೆ ಕಂಡವರನ್ನೆಲ್ಲಾ ಕೊಲೆ ಮಾಡಿ': ಹೇಗಿತ್ತು ರೊಹಿಂಗ್ಯಾ ಹತ್ಯಾಕಾಂಡ..?'ಕಣ್ಣಿಗೆ ಕಂಡವರನ್ನೆಲ್ಲಾ ಕೊಲೆ ಮಾಡಿ': ಹೇಗಿತ್ತು ರೊಹಿಂಗ್ಯಾ ಹತ್ಯಾಕಾಂಡ..?

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಮ್ಯಾನ್ಮಾರ್‌ನಲ್ಲಿ 2020ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್‌ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್‌ಎಲ್‌ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.

ಪ್ರಜಾಪ್ರಭುತ್ವ ವಾದಿ ರಾಷ್ಟ್ರಗಳ ಕಳವಳ

ಪ್ರಜಾಪ್ರಭುತ್ವ ವಾದಿ ರಾಷ್ಟ್ರಗಳ ಕಳವಳ

ಮ್ಯಾನ್ಮಾರ್‌ನಲ್ಲಿ ಸೇನಾ ಕ್ರಾಂತಿ ಎದುರಾದ ಬೆನ್ನಲ್ಲೇ ಪ್ರಜಾಪ್ರಭುತ್ವ ವಾದಿ ರಾಷ್ಟ್ರಗಳು ಕಳವಳ ವ್ಯಕ್ತಪಡಿಸಿವೆ. ಹಠಾತ್ ಬೆಳವಣಿಗೆ ಬಗ್ಗೆ ಭಾರತ, ಅಮೆರಿಕ ಹಾಗೂ ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳು ಆತಂಕ ವ್ಯಕ್ತಪಡಿಸಿವೆ. ಮತ್ತೊಂದ್ಕಡೆ ಸಂಪರ್ಕ ಸಾಧನಗಳನ್ನ ಬಂದ್ ಮಾಡಲಾಗಿದ್ದು, ವಾಕ್ ಸ್ವಾತಂತ್ರ್ಯಕ್ಕೆ ಮಿಲಿಟರಿ ಬ್ರೇಕ್ ಹಾಕಿದೆ. ಈ ಮೂಲಕ ಮ್ಯಾನ್ಮಾರ್‌ನ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳಲು ಸೇನೆ ಮುಂದಾಗಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಈ ವಿಚಾರದಲ್ಲಿ ಚೀನಾ ಪರೋಕ್ಷ ಕೈವಾಡ ಅಲ್ಲಗಳೆಯುವಂತಿಲ್ಲ.

ಎಲ್ಲಿಂದಲೋ ಬಂದವರು, ಎಲ್ಲೂ ಇಲ್ಲವಾದ ರೋಹಿಂಗ್ಯಾ ಮುಸ್ಲಿಮರ ಸುತ್ತಮುತ್ತಎಲ್ಲಿಂದಲೋ ಬಂದವರು, ಎಲ್ಲೂ ಇಲ್ಲವಾದ ರೋಹಿಂಗ್ಯಾ ಮುಸ್ಲಿಮರ ಸುತ್ತಮುತ್ತ

English summary
Myanmar Prime Minister Aung San Suu Kyi detained by its military. There is no phone and internet working in Myanmar now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X