ಮ್ಯಾನ್ಮಾರ್‌ ದಂಗೆಯಲ್ಲಿ ಚೀನಾ ಕೈವಾಡ..? ತಜ್ಞರು ಹೇಳೋದು ಏನು ಗೊತ್ತಾ..?

ದಿಢೀರ್ ಸೇನಾ ಕ್ರಾಂತಿಯಿಂದ ಕಕ್ಕಾಬಿಕ್ಕಿಯಾಗಿರುವ ಮ್ಯಾನ್ಮಾರ್‌ ಪ್ರಜೆಗಳು ಬೀದಿಗಿಳಿದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಮತ್ತೊಂದ್ಕಡೆ ಸಹನೆಯ ಕಟ್ಟೆ ಒಡೆದು, ಸೇನಾಧಿಕಾರಿಗಳ ವಿರುದ್ಧ ಪ್ರತಿಕಾರದ ಮಾತುಗಳೂ ಕೇಳಿಬರುತ್ತಿವೆ. ಆದರೆ ಈ ಹೊತ್ತಲ್ಲೇ ಮ್ಯಾನ್ಮಾರ್‌ನ ಪ್ರಜಾಪ್ರಭುತ್ವ ಪರ ಹೋರಾಟಗಾರರು ಚೀನಾ ವಿರುದ್ಧ ಗಂಭೀರ ಆರೋಪವೊಂದನ್ನ ಮಾಡಿದ್ದಾರೆ.

ಸೇನಾ ದಂಗೆ ಏಳಲು ಚೀನಾದ ಬೆಂಬಲ ಕಾರಣ, ಮ್ಯಾನ್ಮಾರ್‌ನ ಸೇನಾಧಿಕಾರಿಗಳ ಮೂಲಕ ಚೀನಾ ಕೆಲಸ ಸಾಧಿಸಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಪ್ರತಿಭಟನಾಕಾರರು ಚೀನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಬ್ಯಾನರ್, ಪೋಸ್ಟರ್ ಹಿಡಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಈಗಾಗಲೇ ಸೇನೆ ಮ್ಯಾನ್ಮಾರ್‌ನ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದೆ.

ಹೀಗಾಗಿ ಎಲ್ಲೆಲ್ಲೂ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹೋರಾಟಗಳನ್ನು ಹತ್ತಿಕ್ಕಲು ಮ್ಯಾನ್ಮಾರ್‌ ಸೇನಾಧಿಕಾರಿಗಳು ಬೆದರಿಕೆ ತಂತ್ರವನ್ನು ಅನುಸರಿಸುತ್ತಿದ್ದಾರೆ. ಈ ನಡುವೆ ಚೀನಾ ವಿರುದ್ಧವೇ ಅಸಮಾಧಾನ ಸ್ಫೋಟಗೊಂಡಿದ್ದು, ಮ್ಯಾನ್ಮಾರ್‌ನ ಮತ್ತಷ್ಟು ಪ್ರದೇಶಗಳಿಗೆ ಪ್ರತಿಭಟನೆಯ ಕಿಚ್ಚು ಹಬ್ಬುವ ಆತಂಕ ಎದುರಾಗಿದೆ. ಆದರೆ ಚೀನಾ ಕೈವಾಡ ಇದೆ ಎಂಬ ಆರೋಪವನ್ನು ತಜ್ಞರು ಒಪ್ಪುತ್ತಿಲ್ಲ. ಹಾಗಾದರೆ ಈ ವಿಚಾರದಲ್ಲಿ ತಜ್ಞರು ಹೇಳುತ್ತಿರುವುದು ಏನು..? ಮುಂದೆ ತಿಳಿಯೋಣ.

ಚೀನಾ ಕೈವಾಡ ಸಾಧ್ಯವೇ ಇಲ್ಲ..!

ಚೀನಾ ಕೈವಾಡ ಸಾಧ್ಯವೇ ಇಲ್ಲ..!

ಮ್ಯಾನ್ಮಾರ್‌ ಸೇನಾ ದಂಗೆ ಸ್ವಯಂಪ್ರೇರಿತವಾಗಿದ್ದು, ಯಾರದ್ದೇ ಕೈವಾಡ ಇಲ್ಲ ಎನ್ನುತ್ತಿದ್ದಾರೆ ತಜ್ಞರು. ಸದ್ಯದ ಸ್ಥಿತಿಯಲ್ಲಿ ಚೀನಾ ಮ್ಯಾನ್ಮಾರ್‌ ವಿಚಾರವಾಗಿ ಮೂಗು ತೂರಿಸಲು ಸಾಧ್ಯವಿಲ್ಲ. ಈಗಾಗಲೇ ಚೀನಾ ವಿರುದ್ಧ ಅಕ್ಕಪಕ್ಕದ ರಾಷ್ಟ್ರಗಳು ಕೋಪಗೊಂಡಿವೆ. ಇಂತಹ ಸಂದರ್ಭದಲ್ಲಿ ಚೀನಾ ಮ್ಯಾನ್ಮಾರ್‌ ವಿಚಾರಕ್ಕೆ ಕೈಹಾಕುವ ಸಾಹಸ ಮಾಡುವುದಿಲ್ಲ ಎನ್ನುತ್ತಿದ್ದಾರೆ ತಜ್ಞರು. ಇದು ಆತಂರಿಕವಾಗಿ ಮೂಡಿದ ಅಸಮಾಧಾನದ ಫಲ. ಆದರೆ ಮ್ಯಾನ್ಮಾರ್‌ ಪ್ರಜೆಗಳಿಗೆ ತಪ್ಪು ಸಂದೇಶ ನೀಡಲಾಗುತ್ತಿದೆ ಎಂದು ತಜ್ಞರು ಅಭಿಪ್ರಾಯ ಹೊರಹಾಕಿದ್ದಾರೆ. ತನ್ನ ಬಗ್ಗೆ ಇಷ್ಟೆಲ್ಲಾ ಆರೋಪ ಕೇಳಿಬರುತ್ತಿದ್ದರೂ ಚೀನಾ ಮಾತ್ರ ಪ್ರತಿಕ್ರಿಯೆ ನೀಡಿಲ್ಲ.

ಪ್ರಧಾನಿ, ಸಂಸದರಿಗೆ ಮನೆಯಲ್ಲೇ ಜೈಲು..!

ಪ್ರಧಾನಿ, ಸಂಸದರಿಗೆ ಮನೆಯಲ್ಲೇ ಜೈಲು..!

ಈಗಾಗಲೇ ಮ್ಯಾನ್ಮಾರ್‌ ಪ್ರಧಾನಿ ಆಂಗ್ ಸಾನ್ ಸೂಕಿ ಹಾಗೂ ಅವರ ಸಂಪುಟ ಸಹೋದ್ಯೋಗಿಗಳನ್ನ ಮನೆ ಒಳಗೆ ಲಾಕ್ ಮಾಡಿದೆ ಮ್ಯಾನ್ಮಾರ್‌ ಸೇನೆ. ಯಾರೂ ಕೂಡ ಹೊರಗೆ ಬಾರದಂತೆ ಜನಪ್ರತಿನಿಧಿಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಅವರ ಮನೆಗಳ ಬಳಿ ಭಾರಿ ಪ್ರಮಾಣದ ಸೇನೆ ನಿಯೋಜನೆ ಮಾಡಿರುವುದು ಸೊಲ್ಲೆತ್ತದಂತೆ ಮಾಡಿದೆ. ಇದನ್ನೆಲ್ಲಾ ಕಂಡು ಎಷ್ಟೋ ಜನ ಮನೆಯಿಂದ ಹೊರ ಬರೋದಕ್ಕೂ ಯೋಚಿಸುವ ಸ್ಥಿತಿ ನಿರ್ಮಾಣವಾಗಿದೆ. ಸ್ವತಃ ಮ್ಯಾನ್ಮಾರ್‌ ಪ್ರಧಾನಿ ಆಂಗ್ ಸಾನ್ ಸೂಕಿಗೆ ಏನಾಗಿದೆ ಅನ್ನೋದನ್ನೂ ಹೊರ ಜಗತ್ತು ತಿಳಿದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಇಂಟರ್ನೆಟ್ ಇಲ್ಲದೆ ಪರದಾಟ..!

ಇಂಟರ್ನೆಟ್ ಇಲ್ಲದೆ ಪರದಾಟ..!

ಸೇನಾ ಕ್ರಾಂತಿಯ ವಿರುದ್ಧ ಮ್ಯಾನ್ಮಾರ್‌ನಲ್ಲಿ ಹೋರಾಟ ತೀವ್ರಗೊಳ್ಳುತ್ತಿದ್ದು, ದೇಶದ ಇತರ ಭಾಗಗಳಿಗೆ ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಆದರೆ ಇದನ್ನು ತಡೆಯಲು ಮ್ಯಾನ್ಮಾರ್‌ ಮಿಲಿಟರಿ ತನ್ನ ಬಲವನ್ನು ಬಳಸುತ್ತಿದೆ. ಈಗಾಗಲೇ ಮ್ಯಾನ್ಮಾರ್‌ನಲ್ಲಿ ಇಂಟರ್ನೆಟ್ ಕಡಿತವಾಗಿದ್ದು, ಜನರನ್ನು ಅತ್ತಿಂದ ಇತ್ತ ಕದಡಲು ಬಿಡುತ್ತಿಲ್ಲ. ಈ ನಡುವೆ ಜನ ಬೀದಿಗಿಳಿದು ಮಿಲಿಟರಿ ಆಡಳಿತದ ವಿರುದ್ಧ ಹೋರಾಟ ತೀವ್ರಗೊಳಸಿದ್ದಾರೆ. ಹೀಗೆ ಮ್ಯಾನ್ಮಾರ್‌ ಬೂದಿ ಮುಚ್ಚಿದ ಕೆಂಡವಾಗಿದ್ದು, ಹಿಂಸಾಚಾರ ಸ್ಫೋಟಗೊಳ್ಳುವ ಆತಂಕವೂ ಎದುರಾಗಿದೆ. ಆದರೆ ಹೊರ ಜಗತ್ತಿಗೆ ಮ್ಯಾನ್ಮಾರ್‌ನಲ್ಲಿ ಏನಾಗುತ್ತಿದೆ ಎಂಬ ಸತ್ಯ ಸರಿಯಾಗಿ ತಿಳಿಯದಂತೆ ಮಾಡಿದೆ ಅಲ್ಲಿನ ಮಿಲಿಟರಿ.

ರಕ್ತದ ಕೋಡಿ ಹರಿಸಿದ್ದರು..!

ರಕ್ತದ ಕೋಡಿ ಹರಿಸಿದ್ದರು..!

ಅದು 2016ರ ಅಂತ್ಯಕಾಲ. ಜಗತ್ತು ಮ್ಯಾನ್ಮಾರ್‌ ಕಡೆಗೆ ದಿಟ್ಟಿಸಿ ನೋಡಿತ್ತು. ರೊಹಿಂಗ್ಯಾ ಮುಸ್ಲೀಮರ ಮೇಲೆ ದಿಢೀರ್ ದಾಳಿ ನಡೆದು ನೋಡ ನೋಡುತ್ತಿದ್ದಂತೆ ಸಾವಿರಾರು ರೊಹಿಂಗ್ಯಾಗಳು ಜೀವ ಕಳೆದುಕೊಂಡರು. ಈ ಹೊತ್ತಲ್ಲೇ ಅಮಾನುಷ ಘಟನೆಗಳು ನಡೆದವು. ರೊಹಿಂಗ್ಯಾ ಮುಸ್ಲೀಮರ ಮೇಲೆ ಲೈಂಗಿಕ ದೌರ್ಜನ್ಯ ಕೂಡ ನಡೆದಿತ್ತು. ಹಲವು ಮಹಿಳೆಯರನ್ನ ರೇಪ್ & ಮರ್ಡರ್ ಮಾಡಿದ್ದರು ಎಂಬ ಆಘಾತಕಾರಿ ವಿಚಾರ ಜಗತ್ತನ್ನು ತಲ್ಲಣಗೊಳಿಸಿತ್ತು. 24 ಸಾವಿರ ರೊಹಿಂಗ್ಯಾಗಳು ಗಲಭೆಯಲ್ಲಿ ಹತ್ಯೆಯಾದರೆ, 1 ಮಿಲಿಯನ್ ರೊಹಿಂಗ್ಯಾಗಳು ಮ್ಯಾನ್ಮಾರ್‌ ಬಿಟ್ಟು ಓಡಿ ಹೋದರು. ಇನ್ನು ನಾಪತ್ತೆಯಾದವರ ಬಗ್ಗೆ ಈಗಲೂ ಸರಿಯಾದ ಲೆಕ್ಕ ಸಿಗುತ್ತಿಲ್ಲ. ಇದನ್ನೆಲ್ಲಾ ಖದ್ದು ಮ್ಯಾನ್ಮಾರ್‌ ಸೇನೆ ನಡೆಸಿತ್ತು, ಆದರೆ ಆಗ ಅಧಿಕಾರದಲ್ಲಿದ್ದ ಆಂಗ್ ಸಾನ್ ಸೂಕಿ ಸರ್ಕಾರ ಕೈಕಟ್ಟಿ ಕುಳಿತಿತ್ತು ಎಂಬ ಆರೋಪ ಇದೆ.

ಮಿಲಿಟರಿ ಆಡಳಿತ ಶುರು..!

ಮಿಲಿಟರಿ ಆಡಳಿತ ಶುರು..!

ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್‌ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ.

‘ಡ್ರ್ಯಾಗನ್ ಚೀನಿ’ ಗ್ಯಾಂಗ್ ಕೈವಾಡ..?

‘ಡ್ರ್ಯಾಗನ್ ಚೀನಿ’ ಗ್ಯಾಂಗ್ ಕೈವಾಡ..?

ಇಂತಹದ್ದೊಂದು ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಏಕೆಂದರೆ ಚೀನಾ ಜೊತೆಗೆ ಮ್ಯಾನ್ಮಾರ್‌ ಸುಮಾರು 2 ಸಾವಿರ ಕಿಲೋ ಮೀಟರ್‌ಗೂ ಹೆಚ್ಚು ವಿಸ್ತಿರ್ಣದ ಗಡಿ ಹಂಚಿಕೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಚೀನಾ ತನ್ನ ಅಕ್ಕಪಕ್ಕದ ದೇಶಗಳ ಮೇಲೆ ನಿಯಂತ್ರಣ ಸಾಧಿಸಲು ಕುತಂತ್ರ ಬುದ್ಧಿ ಬಳಸುತ್ತಿದೆ. ನೇಪಾಳದಲ್ಲೂ ಹೀಗೆ ಮಾಡಿದೆ ಚೀನಾ. ಇದೀಗ ಮ್ಯಾನ್ಮಾರ್‌ ಸೇನಾ ಕ್ರಾಂತಿಗೂ ಚೀನಾ ಬೆಂಬಲ ಇರಬಹುದು ಎಂಬ ಅನುಮಾನ ಎಲ್ಲರನ್ನೂ ಕಾಡುತ್ತಿದೆ. ಏಕೆಂದರೆ ಮ್ಯಾನ್ಮಾರ್‌ ಪ್ರಜಾಪ್ರಭುತ್ವ ತತ್ವ ಅಳವಡಿಸಿಕೊಂಡಿರುವ ದೇಶ. ಆದರೆ ಮಾವೋವಾದಿ ಕಮ್ಯೂನಿಸ್ಟ್ ಸಿದ್ಧಾಂತದ ಚೀನಾಗೆ ಇದು ಬಿಲ್‌ಕುಲ್ ಇಷ್ಟವಿಲ್ಲ.

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಮ್ಯಾನ್ಮಾರ್‌ನಲ್ಲಿ 2020ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್‌ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್‌ಎಲ್‌ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+