ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತ್ತೊಂದು ಉತ್ತರ ಕೊರಿಯಾ ಆಗುತ್ತಾ ಮ್ಯಾನ್ಮಾರ್, ಪ್ರಜೆಗಳಲ್ಲಿ ಆತಂಕ..!

|
Google Oneindia Kannada News

ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರನ್ನು ನಮ್ಮ ವಶಕ್ಕೆ ನೀಡಿ ಎಂದು ಒತ್ತಾಯಿಸಿ ಮ್ಯಾನ್ಮಾರ್‌ ಭಾರತಕ್ಕೆ ಪತ್ರ ಬರೆದಿದೆ. ಉಭಯ ರಾಷ್ಟ್ರಗಳ ಸಂಬಂಧ ಹೀಗೆ ಮುಂದುವರಿಯಲು ಭಾರತದಲ್ಲಿರುವ ನಮ್ಮ ಪೊಲೀಸ್‌ ಅಧಿಕಾರಿಗಳನ್ನ ಮ್ಯಾನ್ಮಾರ್‌ಗೆ ಹಸ್ತಾಂತರಿಸಿ ಅಂತಾ ಮಿಜೋರಾಂ ಚಂಪೈ ಜಿಲ್ಲೆ ಉಪ ಆಯುಕ್ತೆಗೆ ಮ್ಯಾನ್ಮಾರ್‌ನ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಮ್ಯಾನ್ಮಾರ್‌ ಆಂತರಿಕ ಕಚ್ಚಾಟ ಇದೀಗ ಜಗಜ್ಜಾಹೀರಾಗಿದೆ. ಮ್ಯಾನ್ಮಾರ್‌ನಲ್ಲಿ ಪರಿಸ್ಥಿತಿ ಕೈಮೀರಿ ಹೋಗಿದೆ. ಅಲ್ಲಿನ ಪರಿಸ್ಥಿತಿ ಉತ್ತರ ಕೊರಿಯಾ ನೆನಪಿಸುವಂತಿದೆ.

ಜನಕ್ಕೆ ಪ್ರತಿಭಟನೆ ನಡೆಸುವ ಹಕ್ಕೂ ಇಲ್ಲವೆಂಬಂತೆ ಅಲ್ಲಿನ ಮಿಲಿಟರಿ ಸರ್ವಾಧಿಕಾರಿಗಳು ವರ್ತಿಸುತ್ತಿದ್ದಾರೆ. ಫೆಬ್ರವರಿ 1ರಂದು ದಂಗೆ ಎದ್ದಿದ್ದ ಮ್ಯಾನ್ಮಾರ್ ಮಿಲಿಟರಿ, ಇಡೀ ದೇಶವನ್ನೇ ಅಲುಗಾಡಿಸಿದೆ. ಸೇನೆ ಆಡಳಿತ ವಿರೋಧಿಸಿ ಎಲ್ಲೆಂದರಲ್ಲಿ ಕಿಚ್ಚು ಹೊತ್ತಿದೆ. ಆದರೆ ಪ್ರತಿಭಟನೆ ಕಿಚ್ಚು ಆರಿಸಲು ಮ್ಯಾನ್ಮಾರ್ ಮಿಲಿಟರಿ ಹಿಂಸೆ ಹಾದಿಯನ್ನೇ ತುಳಿದಿದೆ. ಸ್ಥಳೀಯ ಪೊಲೀಸರ ಮೇಲೆ ಒತ್ತಡ ಹಾಕಿ ಪ್ರತಿಭಟನಾಕಾರರ ಮೇಲೆ ಹಿಂಸಾಚಾರಕ್ಕೆ ಮ್ಯಾನ್ಮಾರ್ ಸೇನೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಈ ಆರೋಪಕ್ಕೆ ಬಲ ನೀಡುವಂತೆ ಮ್ಯಾನ್ಮಾರ್‌ನಿಂದ ಹತ್ತಾರು ಪೊಲೀಸರು ಭಾರತಕ್ಕೆ ಓಡಿ ಬಂದಿದ್ದರು. ಅವರನ್ನೀಗ ವಾಪಸ್ ಕರೆಸಿಕೊಳ್ಳುವ ಪ್ರಯತ್ನ ನಡೆದಿದೆ.

ಭಾರತದಲ್ಲಿ ಮ್ಯಾನ್ಮಾರ್ ನಿರಾಶ್ರಿತರ ಸಂಖ್ಯೆ ಹೆಚ್ಚಳ ನಿರೀಕ್ಷೆ ಭಾರತದಲ್ಲಿ ಮ್ಯಾನ್ಮಾರ್ ನಿರಾಶ್ರಿತರ ಸಂಖ್ಯೆ ಹೆಚ್ಚಳ ನಿರೀಕ್ಷೆ

50ಕ್ಕೂ ಹೆಚ್ಚು ಹೋರಾಟಗಾರರು ಬಲಿ..?

50ಕ್ಕೂ ಹೆಚ್ಚು ಹೋರಾಟಗಾರರು ಬಲಿ..?

ಈಗಾಗಲೇ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಜನರನ್ನು ಮ್ಯಾನ್ಮಾರ್ ಸೇನೆ ಬಲಿಪಡೆದಿರುವ ಆರೋಪವಿದೆ. ಹೀಗಾಗಿ ನಾಗರಿಕರನ್ನ ಕೊಂದು ಹಾಕಿರುವ ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮವನ್ನು ಟೀಕಿಸಿವೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರ ನಿಯಂತ್ರಣ ಹಾಗೂ ಹೋರಾಟಗಾರನ್ನು ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಹಲವರು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಆವರಿಸಿದೆ.

ಮಿಲಿಟರಿ ಆಡಳಿತ ಶುರು..!

ಮಿಲಿಟರಿ ಆಡಳಿತ ಶುರು..!

ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್‌ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ.

ಮ್ಯಾನ್ಮಾರ್‌ ದಂಗೆಯಲ್ಲಿ ಚೀನಾ ಕೈವಾಡ..? ತಜ್ಞರು ಹೇಳೋದು ಏನು ಗೊತ್ತಾ..?ಮ್ಯಾನ್ಮಾರ್‌ ದಂಗೆಯಲ್ಲಿ ಚೀನಾ ಕೈವಾಡ..? ತಜ್ಞರು ಹೇಳೋದು ಏನು ಗೊತ್ತಾ..?

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಮ್ಯಾನ್ಮಾರ್‌ನಲ್ಲಿ 2020ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್‌ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್‌ಎಲ್‌ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.

ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!

ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!

ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್‌ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನ ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್‌ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್‌ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನ ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೆ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.

English summary
Myanmar requesting India to return police officers who crossed border seeking refuge after refusing to carry out the military orders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X