ಭಯಾನಕ: ಮಕ್ಕಳು, ಮಹಿಳೆಯರು ಸೇರಿ 250 ಅಮಾಯಕರ ಭೀಕರ ಹತ್ಯೆ

ಸೇನಾ ದಂಗೆ ಹೆಸರಲ್ಲಿ ಮ್ಯಾನ್ಮಾರ್ ಸೇನೆ ನಡೆಸುತ್ತಿರುವ ದೌರ್ಜನ್ಯ ಮಿತಿಮೀರಿದೆ. ವಿಶ್ವಸಂಸ್ಥೆ ವರದಿ ಪ್ರಕಾರ ಈವರೆಗೂ ಮ್ಯಾನ್ಮಾರ್ ಮಿಲಿಟರಿ 250ಕ್ಕೂ ಹೆಚ್ಚು ಜನರನ್ನು ಗುಂಡಿಟ್ಟು ಹತ್ಯೆ ಮಾಡಿದೆ. ಪ್ರತಿಭಟನಾಕಾರರು ಹಾಗೂ ಪ್ರಜಾಪ್ರಭುತ್ವದ ಪರ ಧ್ವನಿ ಎತ್ತುವವರ ಉಸಿರು ನಿಲ್ಲಿಸುತ್ತಿದೆ ಮ್ಯಾನ್ಮಾರ್ ಸೇನೆ.

ಫೆಬ್ರವರಿ 1ರಂದು ದಂಗೆ ಎದ್ದಿದ್ದ ಮ್ಯಾನ್ಮಾರ್ ಮಿಲಿಟರಿ, ದೇಶವನ್ನೇ ಅಲುಗಾಡಿಸಿದೆ. ಸೇನಾಡಳಿತವನ್ನ ವಿರೋಧಿಸಿ ಎಲ್ಲೆಂದರಲ್ಲಿ ಕಿಚ್ಚು ಹೊತ್ತಿದೆ. ಆದರೆ ಪ್ರತಿಭಟನೆ ಕಿಚ್ಚು ಆರಿಸಲು ಮ್ಯಾನ್ಮಾರ್ ಮಿಲಿಟರಿ ಹಿಂಸೆ ಹಾದಿ ತುಳಿದಿದೆ. ಸ್ಥಳೀಯ ಪೊಲೀಸರ ಮೇಲೆ ಒತ್ತಡ ಹಾಕಿ ಪ್ರತಿಭಟನಾಕಾರರ ಮೇಲೆ ಹಿಂಸಾಚಾರಕ್ಕೆ ಸೇನೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗುತ್ತಿದೆ.

ಈ ಆರೋಪಕ್ಕೆ ಬಲ ನೀಡುವಂತೆ ಮ್ಯಾನ್ಮಾರ್‌ನಿಂದ ಹತ್ತಾರು ಪೊಲೀಸರು ಭಾರತಕ್ಕೆ ಓಡಿ ಬಂದಿದ್ದಾರೆ. ಜಾಗತಿಕವಾಗಿ ಅದೆಷ್ಟೇ ಒತ್ತಡ ಏರ್ಪಟ್ಟರೂ ಮ್ಯಾನ್ಮಾರ್ ಸೇನೆ ಮಾತ್ರ ತನ್ನ ಹಿಂಸಾಚಾರ ಪ್ರವೃತ್ತಿ ನಿಲ್ಲುಸುತ್ತಿಲ್ಲ. ಮಕ್ಕಳು, ಮಹಿಳೆಯರು ಎನ್ನದೆ ಕೊಲೆ ಮಾಡಿಸುತ್ತಿದ್ದಾರಂತೆ ಅಲ್ಲಿನ ಸೇನಾಧಿಕಾರಿಗಳು.

ಮಿಲಿಟರಿ ಆಡಳಿತ ಶುರು..!

ಮಿಲಿಟರಿ ಆಡಳಿತ ಶುರು..!

ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್‌ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಫೋನ್ ಕಾಲ್ ಹೋಗುತ್ತಿಲ್ಲ, ಇಂಟರ್ನೆಟ್ ಸಂಪರ್ಕ ಕೂಡ ಬಂದ್ ಆಗಿದೆ. ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತಿಸೂಕ್ಷ್ಮವಾಗಿದೆ.

ಪೊಲೀಸರನ್ನು ವಾಪಸ್ ಕಳಿಸಿ..!

ಪೊಲೀಸರನ್ನು ವಾಪಸ್ ಕಳಿಸಿ..!

ಕೆಲ ದಿನಗಳ ಹಿಂದೆ ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರನ್ನು ವಶಕ್ಕೆ ನೀಡಿ ಎಂದು ಒತ್ತಾಯಿಸಿ ಮ್ಯಾನ್ಮಾರ್‌ ಪತ್ರ ಬರೆದಿತ್ತು. ಉಭಯ ರಾಷ್ಟ್ರಗಳ ಸಂಬಂಧ ಮುಂದುವರಿಯಲು ಪೊಲೀಸ್‌ ಅಧಿಕಾರಿಗಳನ್ನು ಮ್ಯಾನ್ಮಾರ್‌ಗೆ ಹಸ್ತಾಂತರಿಸಿ ಅಂತಾ ಮಿಜೋರಾಂ ರಾಜ್ಯದ ಚಂಪೈ ಜಿಲ್ಲೆಯ ಉಪ ಆಯುಕ್ತೆಗೆ ಮ್ಯಾನ್ಮಾರ್‌ನ ಅಧಿಕಾರಿಗಳು ಪತ್ರ ಬರೆದಿದ್ದರು. ಪತ್ರ ಬರೆದ ಕೆಲವೇ ದಿನದಲ್ಲಿ ಆಘಾತಕಾರಿ ಅಂಶ ಬಯಲಾಗಿದೆ. ಭಾರತಕ್ಕೆ ಓಡಿ ಬಂದಿರುವ ಮ್ಯಾನ್ಮಾರ್ ಪೊಲೀಸರು ಅಲ್ಲಿನ ಭಯಾನಕ ಸ್ಥಿತಿಯನ್ನ ಬಿಡಿಸಿಟ್ಟಿದ್ದಾರೆ. ಮ್ಯಾನ್ಮಾರ್ ಜನರ ಸದ್ಯದ ಪರಿಸ್ಥಿತಿ ಹಾಗೂ ಹಿಂಸೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ.

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?

ಮ್ಯಾನ್ಮಾರ್‌ನಲ್ಲಿ 2020ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್‌ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್‌ಎಲ್‌ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.

ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!

ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!

ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್‌ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನ ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್‌ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್‌ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನ ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೆ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+