ಜೀವ ಉಳಿಸಿಕೊಳ್ಳಲು ಹಳ್ಳಿಗಳನ್ನೇ ಬಿಟ್ಟು ಓಡಿ ಬರುತ್ತಿದ್ದಾರೆ ಲಕ್ಷ ಲಕ್ಷ ಜನ
ಅವರೆಲ್ಲಾ ಇಷ್ಟುದಿನ ನೆಮ್ಮದಿಯಾಗಿ ತಮ್ಮ ತಮ್ಮ ಹಳ್ಳಿಗಳಲ್ಲಿ ಜೀವನ ನಡೆಸುತ್ತಿದ್ದರು, ಆದರೆ ಈಗಿನ ಪರಿಸ್ಥಿತಿ ಬೇರೆಯೇ ಆಗಿದೆ. ಜೀವ ಉಳಿಸಿಕೊಳ್ಳಲು ಲಕ್ಷಾಂತರ ಜನ ತಾವು ಹುಟ್ಟಿಬೆಳೆದ ಮನೆ ಮತ್ತು ಊರನ್ನೇ ಬಿಟ್ಟು ಓಡಿ ಬರುತ್ತಿದ್ದಾರೆ. ಕ್ರೂರ ಸೇನಾಧಿಕಾರಿಗಳ ಕೈಗೆ ಸಿಗದಂತೆ ಕಾಡುಗಳಲ್ಲಿ ಬಚ್ಚಿಟ್ಟುಕೊಳ್ಳುತ್ತಿದ್ದಾರೆ. ಅಂದಹಾಗೆ ಇದು ಮ್ಯಾನ್ಮಾರ್‌ನ ಹಳ್ಳಿಗಳ ಕರುಣಾಜನಕ ಕಥೆ, ವ್ಯಥೆ.
ಫೆಬ್ರವರಿಯಲ್ಲಿ ನಡೆದ ಸೇನಾ ದಂಗೆ ವಿರೋಧಿಸಿ ಇಡೀ ಕೆಂಡವಾಗಿದೆ. ಸಾವಿರಾರು ಜನ ಹಿಂಸೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ, ಸೇನೆ ಇವರನ್ನೆಲ್ಲಾ ಕೊಂದು ಹಾಕಿದೆ ಎಂಬ ಆರೋಪವಿದೆ. ಅದರಲ್ಲೂ ಸಾವಿರ ಸಾವಿರ ಮಂದಿ ಕಾಣೆಯಾಗಿರೋದು ಭಯ ಹುಟ್ಟಿಸುತ್ತಿದೆ. ಆದರೆ ಈ ಹೊತ್ತಲ್ಲೇ ಹಳ್ಳಿಗಳಿಗೂ ಹಿಂಸಾಚಾರ ಹಬ್ಬಿದೆ. ಹೌದು ಮ್ಯಾನ್ಮಾರ್ ಮಿಲಿಟರಿ ವಿರುದ್ಧ ಜನ ತಿರುಗಿ ಬಿದ್ದಿದ್ದಾರೆ.
ಇದೇ ಕಾರಣಕ್ಕೆ ಹೇಗಾದರು ಹಿಂಸೆ ಹತ್ತಿಕಬೇಕೆಂದು ಸೇನಾಧಿಕಾರಿಗಳು ಆದೇಶ ನೀಡಿದ ಹಿನ್ನೆಲೆ, ಸೈನಿಕರು ಮಿಲಿಟರಿ ಆಡಳಿತದ ವಿರೋಧಿಗಳನ್ನ ಅತ್ಯಂತ ಕ್ರೂರವಾಗಿ ಹಿಂಸಿಸುತ್ತಿದ್ದಾರೆ. ಹೀಗಾಗಿ ಮ್ಯಾನ್ಮಾರ್ ಹಳ್ಳಿಗಳಲ್ಲಿ ವಾಸ ಮಾಡುತ್ತಿರುವ ಲಕ್ಷಾಂತರ ಜನರು ತಮ್ಮ ಹುಟ್ಟೂರನ್ನು ಬಿಟ್ಟು ಕಾಡು ಸೇರಿಕೊಳ್ಳುತ್ತಿದ್ದಾರೆ.

ರೊಹಿಂಗ್ಯಾ ಹಿಂಸಾಚಾರ ರಿಪೀಟ್..?
ಅದು 2016ರ ಅಂತ್ಯಕಾಲ. ಜಗತ್ತು ಮ್ಯಾನ್ಮಾರ್ ಕಡೆಗೆ ದಿಟ್ಟಿಸಿ ನೋಡಿತ್ತು. ರೊಹಿಂಗ್ಯಾ ಮುಸ್ಲೀಮರ ಮೇಲೆ ದಿಢೀರ್ ದಾಳಿ ನಡೆದು ನೋಡ ನೋಡುತ್ತಿದ್ದಂತೆ ಸಾವಿರಾರು ರೊಹಿಂಗ್ಯಾಗಳು ಜೀವ ಕಳೆದುಕೊಂಡರು. ಈ ಹೊತ್ತಲ್ಲೇ ಅಮಾನುಷ ಘಟನೆಗಳು ನಡೆದವು. ರೊಹಿಂಗ್ಯಾ ಮುಸ್ಲೀಮರ ಮೇಲೆ ಲೈಂಗಿಕ ದೌರ್ಜನ್ಯ ಕೂಡ ನಡೆದಿತ್ತು. ಹಲವು ಮಹಿಳೆಯರನ್ನ ರೇಪ್ & ಮರ್ಡರ್ ಮಾಡಿದ್ದರು ಎಂಬ ಆಘಾತಕಾರಿ ವಿಚಾರ ಜಗತ್ತನ್ನು ತಲ್ಲಣಗೊಳಿಸಿತ್ತು. 24 ಸಾವಿರ ರೊಹಿಂಗ್ಯಾಗಳು ಗಲಭೆಯಲ್ಲಿ ಹತ್ಯೆಯಾದರೆ, 1 ಮಿಲಿಯನ್ ರೊಹಿಂಗ್ಯಾಗಳು ಮ್ಯಾನ್ಮಾರ್ ಬಿಟ್ಟು ಓಡಿ ಹೋದರು. ಹೀಗೆ ರೊಹಿಂಗ್ಯಾ ಮುಸ್ಲೀಮರ ಮೇಲೆ ದಾಳಿ ನಡೆಸಿದ್ದು ಮ್ಯಾನ್ಮಾರ್‌ನ ಸೇನೆ ಎಂಬ ಆರೋಪ ಇದೆ. ಈಗಲೂ ಮ್ಯಾನ್ಮಾರ್ ಮಿಲಿಟರಿ ಹಳ್ಳಿಗಳಲ್ಲಿ ವಾಸವಿರುವ ಜನರ ಮೇಲೆ ಕ್ರೂರ ದಾಳಿ ನಡೆಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮಿಲಿಟರಿ ಆಡಳಿತ ಅಬ್ಬರ
ಮ್ಯಾನ್ಮಾರ್‌ನಲ್ಲಿ 2020ರಲ್ಲಿ ನಡೆದಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದ್ದರೂ ಅದನ್ನ ತಡೆಯಲು ಚುನಾವಣಾ ಆಯೋಗ ವಿಫಲವಾಗಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕಾಗಿ ಮ್ಯಾನ್ಮಾರ್ ಮಿಲಿಟರಿ ತುರ್ತು ಪರಿಸ್ಥಿತಿ ಹೇರಿದೆ. ದೇಶದಲ್ಲಿ ಮಿಲಿಟರಿ 1 ವರ್ಷದವರೆಗೂ ತುರ್ತು ಪರಿಸ್ಥಿತಿ ಘೋಷಿಸಿ ಹಂಗಾಮಿ ಅಧ್ಯಕ್ಷರನ್ನೂ ನೇಮಿಸಿದೆ. ಮತ್ತೊಂದ್ಕಡೆ ದೇಶದ ಸಂವಹನ ಸಾಧನಗಳನ್ನೂ ಕಂಟ್ರೋಲ್‌ಗೆ ತೆಗೆದುಕೊಂಡಿದೆ ಸೇನೆ. ಮ್ಯಾನ್ಮಾರ್ ಸೇನೆ ವಿರುದ್ಧ ಜಗತ್ತಿನಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವಾದಿ ರಾಷ್ಟ್ರಗಳು ಮ್ಯಾನ್ಮಾರ್ ಮಿಲಿಟರಿ ಕ್ರಮ ಟೀಕಿಸಿವೆ. ಆದ್ರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಲ್ಲಿನ ಸೇನಾಧಿಕಾರಿಗಳು, ಪ್ರತಿಭಟನೆ ನಡೆಸುತ್ತಿರುವ ಜನರನ್ನ ಚದುರಿಸಲು ಬಲಪ್ರಯೋಗ ಮಾಡುತ್ತಿದ್ದಾರೆ.

ಗಲ್ಲಿಗೂ ನುಗ್ಗಿದೆ ಮ್ಯಾನ್ಮಾರ್ ಸೇನೆ..!
ಸೇನಾ ಕ್ರಾಂತಿ ಪರ ಹಾಗೂ ವಿರುದ್ಧವಾಗಿ ಹೋರಾಟಗಳು ಭುಗಿಲೆದ್ದಿರುವುದು ಮ್ಯಾನ್ಮಾರ್‌ನ ತತ್ತರಿಸುವಂತೆ ಮಾಡಿದೆ. ಆದರೆ ಇದನ್ನ ನೋಡಿ ತಣ್ಣಗೆ ಕೂರೋಕೆ ಮ್ಯಾನ್ಮಾರ್ ಈಗ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿದಿಲ್ಲ. ಮೇಲಾಗಿ ಅಲ್ಲೊಂದು ಸರ್ಕಾರವೇ ಇಲ್ಲ. ಎಲ್ಲವನ್ನೂ ಸೇನಾಧಿಕಾರಿಗಳು ಬಿಗಿ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ಹೀಗಾಗಿ ಪ್ರತಿಭಟನೆ ಮತ್ತು ಹೋರಾಟ ಹತ್ತಿಕ್ಕಲು ಮ್ಯಾನ್ಮಾರ್‌ನ ಸೇನೆ ಗಲ್ಲಿ ಗಲ್ಲಿಗಳಿಗೂ ಎಂಟ್ರಿ ಕೊಟ್ಟಿದೆ. ಭಾರಿ ಪ್ರಮಾಣದ ಯುದ್ಧ ಪರಿಕರಗಳನ್ನ ತೋರಿಸಿ ಜನರನ್ನ ಬೆದರಿಸುವ ತಂತ್ರ ಅನುಸರಿಸುತ್ತಿದೆ. ಆದರೂ ಜನ ಭಯಪಡದೆ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ.

ಚುನಾವಣೆಯಲ್ಲಿ ಅಕ್ರಮ ನಡೆದಿತ್ತಾ..?
ಮ್ಯಾನ್ಮಾರ್‌ನಲ್ಲಿ 2020ರ ನವೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. 75 ವರ್ಷದ ಸೂಕಿ ನೇತೃತ್ವದಲ್ಲಿ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿತ್ತು. ಚುನಾವಣೆಯಲ್ಲಿ ಮ್ಯಾನ್ಮಾರ್ ಸಂಸತ್ತಿನ 642 ಸ್ಥಾನಗಳ ಪೈಕಿ ಸೂಕಿ ನೇತೃತ್ವದ ಎನ್‌ಎಲ್‌ಡಿ ಪಕ್ಷ 396 ಸ್ಥಾನ ಪಡೆದಿತ್ತು. ಅಂದಹಾಗೆ ಪ್ರಜಾಪ್ರಭುತ್ವದ ಪರ ಗಟ್ಟಿಯಾಗಿ ನಿಂತು ಹೋರಾಟ ನಡೆಸಿದ್ದವರು ಆಂಗ್ ಸಾನ್ ಸೂಕಿ. ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತ ವಿರುದ್ಧ ಸತತ ಹೋರಾಟ ನಡೆಸಿದ್ದ ಸೂಕಿಗೆ ಇದೀಗ ಹಿನ್ನಡೆಯಾಗಿದೆ. ಸೂಕಿ ಬಂಧನ ಹಲವು ಅನುಮಾನಗಳಿಗೂ ಕಾರಣವಾಗಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications