ಡೊನಾಲ್ಡ್‌ ಟ್ರಂಪ್‌ಗೆ ಪ್ರಧಾನಿ ಮೋದಿ ದೂರವಾಣಿ ಕರೆ

ನವದೆಹಲಿ, ಜನವರಿ 07 : ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ಕಚೇರಿ ಈ ಕುರಿತು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.

ಮಂಗಳವಾರ ವಿಶ್ವದ ಇಬ್ಬರು ಪ್ರಭಾವಿ ನಾಯಕರು ದೂರವಾಣಿ ಮೂಲಕ ಮಾತುಕತೆ ನಡೆಸಿದರು. ನರೇಂದ್ರ ಮೋದಿ ಡೊನಾಲ್ಡ್ ಕರೆ ಮಾಡಿ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು ಎಂದು ಪ್ರಧಾನಿ ಕಚೇರಿ ಹೇಳಿದೆ.

Narendra Modi Conveys New Year Greetings To Donald Trump

ಅಮೆರಿಕದ ಪ್ರಜೆಗಳು, ಡೊನಾಲ್ಡ್ ಟ್ರಂಪ್, ಅವರ ಕುಟುಂಬಕ್ಕೆ ನರೇಂದ್ರ ಮೋದಿ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು. ಹೊಸ ವರ್ಷದಲ್ಲಿ ಉತ್ತಮ ಆರೋಗ್ಯ, ಯಶಸ್ಸು ಸಿಗಲಿ ಎಂದು ಹಾರೈಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹ ಭಾರತೀಯರಿಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ. ಉಭಯ ದೇಶಗಳ ನಡುವಿನ ಹಲವು ವರ್ಷದ ಸ್ನೇಹದ ಕುರಿತು ಡೊನಾಲ್ಡ್ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಎರಡೂ ರಾಷ್ಟ್ರಗಳ ಸಂಬಂಧ, ಬೆಳವಣಿಗೆ ಕುರಿತು ಡೊನಾಲ್ಡ್ ಟ್ರಂಪ್ ಜೊತೆ ಮಾತುಕತೆ ನಡೆಸಿದರು. ಕಳೆದ ವರ್ಷಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ಪಾಲುದಾರಿಕೆ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡರು.

ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷರಿಗೆ ಕರೆ ಮಾಡಿರುವ ಕುರಿತು ಹಲವು ವಿಶ್ಲೇಷಣೆ ನಡೆಯುತ್ತಿದೆ. ಡೊನಾಲ್ಡ್‌ ಟ್ರಂಪ್ ಆತ್ಮೀಯರಲ್ಲಿ ಮೋದಿ ಸಹ ಒಬ್ಬರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+